ಆನೆಮಹಲ್ ಕ್ಲಸ್ಟರ್ ವ್ಯಾಪ್ತಿಯ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಪಟ್ಟಣದ ಪ್ರಜ್ಞಾ ಅಚೀವರ್ಸ್ ಶಾಲೆಯಲ್ಲಿ ನಡೆಯಿತು. ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಲು ಅವಕಾಶ ಕಲ್ಪಿಸಿದ ಶಾಲಾ ಶಿಕ್ಷಣ ಇಲಾಖೆಗೆ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮವನ್ನು ಸಂತೋಷದಿಂದ ಆಯೋಜಿಸಿದ್ದು, ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೆ ಉತ್ತಮ ಆತಿಥ್ಯ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ಸಕಲೇಶಪುರ
ಆನೆಮಹಲ್ ಕ್ಲಸ್ಟರ್ ವ್ಯಾಪ್ತಿಯ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಪಟ್ಟಣದ ಪ್ರಜ್ಞಾ ಅಚೀವರ್ಸ್ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕ ಕಾಂತರಾಜು, ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಶಾಲಾ ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಂತಹ ಕಾರ್ಯಕ್ರಮಗಳಿಂದ ಭವಿಷ್ಯದಲ್ಲಿ ಹಲವಾರು ಕಲಾವಿದರು ರೂಪುಗೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬೋಧನೆ ಮತ್ತು ಕಲಿಕೆಯ ಏಕತಾನತೆಯಿಂದ ಹೊರಬಂದು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಜ್ಞಾನ ವೃದ್ಧಿಯಾಗುತ್ತದೆ. ಇದು ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಿಗೂ ಸಹಕಾರಿಯಾಗುತ್ತದೆ ಎಂದು ತಿಳಿಸಿ, ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಜ್ಞಾ ಅಚೀವರ್ಸ್ ಸಂಸ್ಥೆಯ ಮುಖ್ಯಸ್ಥ ಜುಲ್ಫಿಕರ್ ಅಹಮದ್ ಮಾತನಾಡಿ, ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಲು ಅವಕಾಶ ಕಲ್ಪಿಸಿದ ಶಾಲಾ ಶಿಕ್ಷಣ ಇಲಾಖೆಗೆ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮವನ್ನು ಸಂತೋಷದಿಂದ ಆಯೋಜಿಸಿದ್ದು, ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೆ ಉತ್ತಮ ಆತಿಥ್ಯ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ನವೀನ್ ಪತ್ರನ್, ಆನೆಮಹಲ್ ಕ್ಲಸ್ಟರ್ನ ಸಿಆರ್ಪಿ ಕೃಷ್ಣಕುಮಾರ್, ಪುರಸಭೆ ಕ್ಲಸ್ಟರ್ನ ಸಿಆರ್ಪಿ ಲಕ್ಷ್ಮೀನಾರಾಯಣ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೀರ್ತಿಕುಮಾರ್ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.---------------ಆನೆಮಹಲ್ ಕ್ಲಸ್ಟರ್ ವ್ಯಾಪ್ತಿಯ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.