ಕನ್ನಡಪ್ರಭ ವಾರ್ತೆ ಉಡುಪಿ
ಗುರುವಾರ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ಕೋಟ ಶಿವರಾಮ ಕಾರಂತ ಟ್ರಸ್ಟ್ ಹಾಗೂ ಡಾ. ಜಿ ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವರಾಮ ಕಾರಂತರ ಬರಹ ಮತ್ತು ಜಾನಪದ ಅಧ್ಯಯನ ಶಿಬಿರ ಉದ್ಘಾಟಿಸಿ ಮಾತನಾಡುತ್ತಿದ್ದರು.
ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಕಾರಂತರ ಸಾಹಿತ್ಯ ಮಾತ್ರವಲ್ಲದೆ, ಪರಿಸರದ ಬಗೆಗೆ ಅವರ ಹೋರಾಟ ಮಹತ್ತರವಾಗಿದೆ. ದಿಟ್ಟತನ, ಸ್ಪಷ್ಟ ನೇರ ಮಾತಿನ ಕಾರಂತರು, ವಿಶ್ವದ ಸಾಹಿತ್ಯದಲ್ಲಿ ಕರಾವಳಿಯ ಹೆಸರನ್ನು ಮುಂಚೂಣಿಯಲ್ಲಿ ನಿಲ್ಲಿಸಿದ್ದಾರೆ ಎಂದರು,ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಮಾತನಾಡಿ, ಪ್ರಕೃತಿಯ ಸೂಕ್ಷ್ಮತೆಗಳನ್ನು ತಮ್ಮ ಸಾಹಿತ್ಯದ ಮೂಲಕ ಜನರಿಗೆ ತಲುಪಿಸಿದ ಕೆಲವೇ ಕೆಲವು ಸಾಹಿತಿಗಳಲ್ಲಿ ಕಾರಂತರೂ ಒಬ್ಬರು. ವಿವಿಧ ಕ್ಷೇತ್ರಗಳಲ್ಲಿ ಅವರ ಜ್ಞಾನ ಅಗಾಧವಾಗಿತ್ತು ಎಂದರು.
ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಇತ್ತೀಚೆಗೆ ನಿಧನರಾದ ಪ್ರೊ. ಹೇರಂಜೆ ಕೃಷ್ಣ ಭಟ್ ಹಾಗೂ ನಂದಳಿಕೆ ಬಾಲಚಂದ್ರ ರಾವ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ತ್ರಿವೇಣಿ ನಿರೂಪಿಸಿದರು. ಟ್ರಸ್ಟಿನ ಸದಸ್ಯ ಜಿ.ಎಂ. ಶರೀಫ್ ವಂದಿಸಿದರು.