ಕನ್ನಡಪ್ರಭ ವಾರ್ತೆ ಉಡುಪಿ
ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಡಾ. ಶಿವರಾಮ ಕಾರಂತರು ತಮ್ಮ ಬರಹಗಳ ಮೂಲಕ ಕರಾವಳಿಯ ಸಂಸ್ಕೃತಿ ಮಾತ್ರವಲ್ಲದೆ ಅದರೊಂದಿಗೆ ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆ ಮೂಡಿಸುವ ಕಾರ್ಯದಲ್ಲಿ ತೊಡಗಿದವರು. ಕಾರಂತರ ಕುರಿತ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವುದೇ ಡಾ.ಶಿವರಾಮ ಕಾರಂತ ಟ್ರಸ್ಟಿನ ಮುಖ್ಯ ಉದ್ದೇಶ ಎಂದರು.ಚಿಂತಕ ಮುಷ್ತಾಕ್ ಹೆನ್ನಾಬೈಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಡಾ. ಶಿವರಾಮ ಕಾರಂತರ ಬದುಕು, ಕೃತಿಗಳು ಮತ್ತು ಪರಿಸರ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ, ಡಾ. ಶಿವರಾಮ ಕಾರಂತರು ತಮ್ಮ ಇಳಿ ವಯಸ್ಸಿನಲ್ಲಿಯೂ ಪರಿಸರದ ಕುರಿತು ವಿಶೇಷ ಕಾಳಜಿ ಹೊಂದಿದ್ದರು. ಸಮಾಜವನ್ನು ಜಾಗೃತಿಗೊಳಿಸುವಲ್ಲಿ ಕಾರಂತರ ಪಾತ್ರ ಮಹತ್ತವಾಗಿದೆ ಎಂದರು.ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಖ್ಯಾತ ಜಾನಪದ ವಿದ್ವಾಂಸ ಪ್ರೊ. ಕನರಾಡಿ ವಾದಿರಾಜ್ ಭಟ್ ಜಲ ಜಾನಪದ ಪುಸ್ತಕ ಬಿಡುಗಡೆಗೊಳಿಸಿದರು. ಟ್ರಸ್ಟಿನ ಸದಸ್ಯೆ ಡಾ. ಭಾರತಿ ಮರವಂತೆ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಟ್ರಸ್ಟಿನ ಸದಸ್ಯ ಡಾ. ಪ್ರಸಾದ್ ರಾವ್, ಜಲ ಜಾನಪದ ಕೃತಿಯ ಸಂಪಾದಕ ಮಂಡಳಿಯ ಸದಸ್ಯರು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಇದ್ದರು.ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಕುಮಾರ್ ಶೆಟ್ಟಿ ನಿರೂಪಿಸಿ, ರೇಷ್ಮಾ ಶೆಟ್ಟಿ ವಂದಿಸಿದರು.