ಕನ್ನಡಪ್ರಭ ವಾರ್ತೆ ಮೂಡುಬಿದಿರೆಕರಾವಳಿ ಕೇಸರಿ ಸೇವಾ ಟ್ರಸ್ಟ್ ಬೆದ್ರ ಹಾಗೂ ಕರಾವಳಿ ಕೇಸರಿ ಮಹಿಳಾ ಘಟಕ ದರೆಗುಡ್ಡೆ ವತಿಯಿಂದ ಸರಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪ್ರಾಥಮಿಕ ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ರು. 57000 ಮೌಲ್ಯದ ಬರೆಯುವ ನೋಟ್ ಬುಕ್ ಗಳನ್ನು ಉಚಿತವಾಗಿ ಬುಧವಾರ ವಿತರಿಸಲಾಯಿತು.
ದರೆಗುಡ್ಡೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಶೆಟ್ಟಿ ಬೆಲೋಟ್ಟು, ಉಪಾಧ್ಯಕ್ಷೆ ನಳಿನಿ, ಸದಸ್ಯ ಮುನಿರಾಜ್ ಹೆಗ್ಡೆ, ಕರಾವಳಿ ಕೇಸರಿ ಸೇವಾ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಮಧುರ, ಉದ್ಯಮ ರತ್ನ ಪ್ರಶಸ್ತಿ ಪುರಸ್ಕೃತ ಸಮಾಜಸೇವಕ ಕೊಡುಗೈ ದಾನಿ ಆರ್ ಆರ್ ಫ್ಯಾಶನ್ ನ ಮಾಲಕ ರಾಜೇಶ್ ಕೊಟ್ಯಾನ್, ಸದಾನಂದ ಶೆಟ್ಟಿ ಉಪಸ್ಥಿತರಿದ್ದರು,
ಶಾಲಾ ಮುಖ್ಯೋಪಾಧ್ಯಾಯ ಕರುಣಾಕರ ದೇವಾಡಿಗ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಣೇಶ್ ಅಳಿಯೂರು ನಿರೂಪಿಸಿದರು. ಶಿಕ್ಷಕಿ ಮೀರಾ ಡಯಾಸ್ ವಂದಿಸಿದರು.