9ರಿಂದ ಕದ್ರಿ ಪಾರ್ಕ್‌ನಲ್ಲಿ ‘ಕಲಾ ಪರ್ಬ’: ಕಲಾಕೃತಿಗಳ ಪ್ರದರ್ಶನ

KannadaprabhaNewsNetwork |  
Published : Jan 08, 2026, 03:00 AM IST
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡುತ್ತಿರುವುದು. | Kannada Prabha

ಸಾರಾಂಶ

ಮಂಗಳೂರು: ಜಿಲ್ಲಾಡಳಿತದ ಕರಾವಳಿ ಉತ್ಸವದ ಅಂಗವಾಗಿ ಶರಧಿ ಪ್ರತಿಷ್ಠಾನ ವತಿಯಿಂದ ರಾಷ್ಟ್ರೀಯ ಮಟ್ಟದ ಚಿತ್ರ- ಶಿಲ್ಪ- ಸಾಂಸ್ಕೃತಿಕ ಮೇಳ ‘ಕಲಾ ಪರ್ಬ‘ ಜ.9, 10, 11ರಂದು ನಗರದ ಕದ್ರಿ ಪಾರ್ಕ್ ನಲ್ಲಿ ನಡೆಯಲಿದೆ.

ಮಂಗಳೂರು: ಜಿಲ್ಲಾಡಳಿತದ ಕರಾವಳಿ ಉತ್ಸವದ ಅಂಗವಾಗಿ ಶರಧಿ ಪ್ರತಿಷ್ಠಾನ ವತಿಯಿಂದ ರಾಷ್ಟ್ರೀಯ ಮಟ್ಟದ ಚಿತ್ರ- ಶಿಲ್ಪ- ಸಾಂಸ್ಕೃತಿಕ ಮೇಳ ‘ಕಲಾ ಪರ್ಬ‘ ಜ.9, 10, 11ರಂದು ನಗರದ ಕದ್ರಿ ಪಾರ್ಕ್ ನಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಚಿತ್ರಕಲಾ ಚಾವಡಿಯ ಕಾರ್ಯದರ್ಶಿ ಎಸ್.ಎಂ.ಶಿವಪ್ರಕಾಶ್, ಈ ಉತ್ಸವದಲ್ಲಿ 150 ಮಳಿಗೆಗಳಲ್ಲಿ ವಿವಿಧ ಜಿಲ್ಲೆಗಳ 120ಕ್ಕೂ ಅಧಿಕ ಕಲಾವಿದರು ಪಾಲ್ಗೊಳ್ಳಲಿದ್ದು 5,000ಕ್ಕೂ ಅಧಿಕ ಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ. ಜತೆಗೆ ವಿವಿಧ ರಾಜ್ಯಗಳ 100ರಷ್ಟು ಶ್ರೇಷ್ಠ ಕಲಾಕೃತಿಗಳ ಪ್ರದರ್ಶನವೂ ಇರಲಿದೆ ಎಂದು ತಿಳಿಸಿದರು.

ಜ.9ರಂದು ಸಂಜೆ 5.30ಕ್ಕೆ ಕಲಾ ಪರ್ಬ ಉದ್ಘಾಟನೆ, ಮಳಿಗೆಗಳ ಉದ್ಘಾಟನೆ ಹಾಗೂ ಶಿಲ್ಪಕಲಾ ಮಳಿಗೆಗಳ ಉದ್ಘಾಟನೆ, ಭರತನಾಟ್ಯ ನಡೆಯಲಿದೆ. ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್ ಪಾಲ್ಗೊಳ್ಳಲಿದ್ದಾರೆ. ಜ.10, 11ರಂದು ಬೆಳಗ್ಗೆ 9ರಿಂದ ರಾತ್ರಿ 9.30ರವರಗೆ ‘ಕಲಾಪರ್ಬ’ ನಡೆಯಲಿದೆ. ಇದರೊಂದಿಗೆ ಜ.10ರಂದು ಬೆಳಗ್ಗೆ 11ರಿಂದ ಚಿತ್ರಕಲಾ ಸಂವಾದ, ರಂಗೋಲಿ ಸ್ಪರ್ಧೆ, ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಮೇಳ, ಕೊಳಲು ವಾದನ, ಸಾಧಕ ಕಲಾವಿದರಿಗೆ ಸಮ್ಮಾನ, ಸಾನಿಧ್ಯ ವಿಶೇಷ ಮಕ್ಕಳಿಂದ ಯಕ್ಷಗಾನ ನಡೆಯಲಿದೆ ಎಂದರು.ಜ.11ರಂದು ಬೆಳಗ್ಗೆ 11ರಿಂದ ಶಿಲ್ಪಕಲಾ ಪ್ರಾತ್ಯಕ್ಷಿಕೆ, ಮೆಹಂದಿ ಬಿಡಿಸುವ ಸ್ಪರ್ಧೆ, ಬೀದಿ ನಾಟಕ, ಕಲಾ ಕಾರ್ಯಾಗಾರ, ಯಕ್ಷಗಾನ ನಡೆಯಲಿದೆ. ಸಂಜೆ 3ಕ್ಕೆ ಬಿ.ಎಸ್.ದೇಸಾಯಿ ಅವರ ಶಿಷ್ಯ ವೃಂದದವರಿಂದ 5 ಅಡಿ ಎತ್ತರ, 20 ಅಡಿ ಉದ್ದದ ಪರಿಸರ ಜಾಗೃತಿಯ ಜಲವರ್ಣ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದು ಹೇಳಿದರು.

ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್‌ ಶೆಟ್ಟಿ, ಪ್ರತಿಷ್ಠಾನದ ಕಾರ್ಯದರ್ಶಿ ಪುನೀಕ್ ಶೆಟ್ಟಿ, ಚಿತ್ರಕಲಾ ಚಾವಡಿ ಗೌರವಾಧ್ಯಕ್ಷ ಗಣೇಶ ಸೋಮಯಾಜಿ, ಅಧ್ಯಕ್ಷ ಕೋಟಿ ಪ್ರಸಾದ್ ಆಳ್ವ, ಉಪಾಧ್ಯಕ್ಷ ಶರತ್ ಹೊಳ್ಳ, ಭರತ್ ರಾಜ್ ಬೈಕಾಡಿ, ಜಿನೇಶ್ ಪ್ರಸಾದ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ