ಜಿಲ್ಲೆಯಲ್ಲಿ ಆಂಗ್ಲ ಭಾಷೆಯ ನಾಮಫಲಕಗಳನ್ನು ಶೇ.೮೦ರಷ್ಟು ಅಳವಡಿಸುವಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು.
ಕೋಲಾರ: ಜಿಲ್ಲೆಯಾದ್ಯಂತ ಪ್ರತಿಯೊಂದು ಅಂಗಡಿ, ಕಾರ್ಖಾನೆ, ಖಾಸಗಿ ಶಾಲೆ, ಮಸೀದಿ, ಮದರಸಾ ಹಾಗೂ ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಮತ್ತು ಎಲ್ಲಾ ವಹಿವಾಟಿನ ಮಳಿಗೆಗಳ ಮೇಲೆ ಕಡ್ಡಾಯ ಕನ್ನಡ ನಾಮಫಲಕಗಳನ್ನು ಅಳವಡಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರವೇ ಪ್ರವೀಣ್ ಶಟ್ಟಿ ಬಣದ ಜಿಲ್ಲಾ ಮುಖಂಡರಿಂದ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್‌ರಿಗೆ ಮನವಿ ಸಲ್ಲಿಸಿದರು.
ಕರವೇ ಪ್ರವೀಣ್ ಶಟ್ಟಿ ಬಣದ ಜಿಲ್ಲಾಧ್ಯಕ್ಷ ಚಂಬೆ ರಾಜೇಶ್ ಮಾತನಾಡಿ, ಜಿಲ್ಲೆಯಲ್ಲಿ ಆಂಗ್ಲ ಭಾಷೆಯ ನಾಮಫಲಕಗಳನ್ನು ಶೇ.೮೦ರಷ್ಟು ಅಳವಡಿಸುವಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲೆಯ ನಗರಸಭೆ ವ್ಯಾಪ್ತಿಗೆ ಬರುವ ಅಂಗಡಿ, ಕಾರ್ಖಾನೆ ಮಾಲೀಕರ ಸಭೆ ಕರೆದು, ಮುಂದಿನ ಸೆಪ್ಟೆಂಬರ್ ತಿಂಗಳೊಳಗೆ ಸರ್ಕಾರದ ಆದೇಶದಂತೆ ನಡೆದುಕೊಳ್ಳುವಂತೆ ಸೂಚಿಸಿದ್ದರೂ ಇಲ್ಲಿಯವರೆಗೂ ಯಾವುದೇ ಕ್ರಮಕೈಗೊಂಡಿಲ್ಲ, ಕೋಲಾರ ನಗರದಲ್ಲಿ ಯಥಾಸ್ಥಿತಿಯಾಗಿ ನಾಮಫಲಕಗಳು ಹಾಗೆಯೇ ಉಳಿದುಕೊಂಡಿವೆ ಎಂದು ಬೇಸರ ವ್ಯಕ್ತಪಡಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.