ಕರವೇಯಿಂದ ಕಮಲಹಾಸನ್ ಪ್ರ ತಿಕೃತಿದಹಿಸಿ ಪ್ರತಿಭಟನೆ

KannadaprabhaNewsNetwork |  
Published : May 31, 2025, 01:12 AM IST
30ಕೆಪಿಎಲ್21 ಕೊಪ್ಪಳ ನಗರದ ಕೇಂದ್ರೀಯ ಬಸ್ ನಿಲ್ದಾಣ ಎದುರು ಕಮಲ್ ಹಾಸನ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಕಮಲಹಾಸನ್ ಸುಳ್ಳು ಮತ್ತು ಆಧಾರ ರಹಿತ ಹೇಳಿಕೆಯು ಕನ್ನಡ ಭಾಷೆಯ ಶ್ರೀಮಂತ ಇತಿಹಾಸ ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ತೀವ್ರ ಆಘಾತ ಉಂಟು ಮಾಡಿದೆ.

ಕೊಪ್ಪಳ: ಕನ್ನಡಕ್ಕೆ ಅಪಮಾನ ಮಾಡಿ ಹೇಳಿಕೆ ನೀಡಿದ ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಶುಕ್ರವಾರ ನಗರದ ಕೇಂದ್ರೀಯ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿ ಕಮಲ್ ಹಾಸನ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ಉದ್ಧೇಶಿಸಿ ಕರವೇ ಜಿಲ್ಲಾಧ್ಯಕ್ಷ ಗಿರೀಶಾನಂದ ಮಾತನಾಡಿ, ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ ತಮಿಳು ಭಾಷೆಯಿಂದ ಕನ್ನಡ ಭಾಷೆಯ ಉಗಮವಾಯಿತು ಎಂಬ ತಪ್ಪು ಮತ್ತು ದುರುದ್ದೇಶಪೂರಿತ ಹೇಳಿಕೆ ಚಲನಚಿತ್ರ ನಟ-ರಾಜಕಾರಣಿ ಕಮಲ್ ಹಾಸನ್ ನೀಡಿರುವುದನ್ನು ಖಂಡಿಸುವುದಾಗಿ ಹೇಳಿದ್ದಾರೆ.

ಕಮಲಹಾಸನ್ ಸುಳ್ಳು ಮತ್ತು ಆಧಾರ ರಹಿತ ಹೇಳಿಕೆಯು ಕನ್ನಡ ಭಾಷೆಯ ಶ್ರೀಮಂತ ಇತಿಹಾಸ ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ತೀವ್ರ ಆಘಾತ ಉಂಟು ಮಾಡಿದೆ. ಕನ್ನಡಿಗರಿಂದ ತೀವ್ರ ಖಂಡನೆ ಮತ್ತು ವಿರೋಧ ವ್ಯಕ್ತವಾದರೂ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸದೆ ತಮ್ಮ ಹೇಳಿಕೆಗೆ ಬದ್ಧರಾಗಿರುವುದು ಕನ್ನಡಿಗರ ಆಕ್ರೋಶ ಮತ್ತಷ್ಟು ಹೆಚ್ಚಿಸಿದೆ ಎಂದಿದ್ದಾರೆ.

ಕನ್ನಡ ಭಾಷೆ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಕರವೇ ಕಮಲ್ ಹಾಸನ್ ಅವರ ಈ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತದೆ. ಈ ಹಿನ್ನೆಲೆಯಲ್ಲಿ ಅವರ ಚಿತ್ರ ಥಗ್ ಲೈಫ್ (ಇದರ ಬಿಡುಗಡೆಯ ದಿನಾಂಕ ೫ ಜೂನ್ ೨೦೨೫ ರಂದು ನಿಗದಿಯಾಗಿದೆ.) ಕರ್ನಾಟಕದಲ್ಲಿ ಬಿಡುಗಡೆಯಾಗದಂತೆ ತಡೆಯುವ ನಿರ್ಧಾರ ಕೈಗೊಂಡಿದ್ದೇವೆ. ಈ ಚಿತ್ರದ ವಿತರಕರು ತಮ್ಮ ಹೂಡಿಕೆ ರಕ್ಷಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಪ್ರತಿಭಟನೆಯಲ್ಲಿ ರಾಜ್ಯ ಸಂ.ಕಾರ್ಯದರ್ಶಿ ಬಸನಗೌಡ ಪೋ. ಪಾಟೀಲ, ಜಿಲ್ಲಾ ಯುವ ಘಟಕ ಅಧ್ಯಕ್ಷ ಹನುಮಂತ ಬೆಸ್ತರ, ಜಿಲ್ಲಾ ಪ್ರ. ಕಾರ್ಯದರ್ಶಿ ನಿಂಗಪ್ಪ ಮೂಗಿನ್, ನಗರ ಘಟಕ ಅಧ್ಯಕ್ಷ ಪ್ರಫುಲ್‌ಕುಮಾರ ಪಾಟೀಲ, ಕುಷ್ಟಗಿ ತಾಲೂಕಾಧ್ಯಕ್ಷ ಪ್ರಕಾಶ ಮನ್ನೇರಾಳ, ಕುಕನೂರ ತಾಲೂಕಾಧ್ಯಕ್ಷ ರಮೇಶ ಹಾಲವರ್ತಿ, ಗಂಗಾವತಿ ತಾಲೂಕಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಸಾಮಾಜಿಕ ಜಾಲತಾಣ ಸಂಚಾಲಕ ಸಿದ್ದು ಸಶಿಮಠ, ದೇವೆಂದ್ರಪ್ಪ ಹಲಬನೂರ, ಅಬ್ಬಾಸ ಬಾವಿಕಟ್ಟಿ, ವೆಂಕಟೇಶ ತಟ್ಟಿ, ಸಂಜೀವಸಿಂಗ್ ಹಜಾರೆ, ಕುಮಾರಸ್ವಾಮಿ ನಾಗರಳ್ಳಿ, ಗಿರೀಶ ಬಾಗಡೆ, ನಾಗರಾಜ ಹಾಲಳ್ಳಿ, ಶರಣಯ್ಯ ಕುಟಗನಳ್ಳಿ ಹಾಗೂ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

PREV

Recommended Stories

ಯೂರಿಯಾ: ರೈತ ಬಾಂಧವರಲ್ಲಿ ಅತಂಕ ಬೇಡ
ಪಂಚಪೀಠ ನಿರ್ಣಯ ಒಪ್ಪಲ್ಲ, ರಂಭಾಪುರಿ ಶ್ರೀಗಳ ಮನಸ್ಥಿತಿ ಕಲುಷಿತ: ವಚನಾನಂದ ಶ್ರೀ