ನಾರಾಯಣಗೌಡರನ್ನು ಬಿಡುಗಡೆಗೊಳಿಸುವಂತೆ ಕರವೇ ಆಗ್ರಹ

KannadaprabhaNewsNetwork |  
Published : Jan 03, 2024, 01:45 AM IST
ಅಅ | Kannada Prabha

ಸಾರಾಂಶ

ಅನವಶ್ಯಕವಾಗಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಮತ್ತು ಕಾರ್ಯಕರ್ತರವನ್ನು ಬಂಧಿಸಿದ್ದಾರೆ , ಈ ಕೂಡಲೆ ಬೇಷರತ್ತಾಗಿ ಬಂಧ ಮುಕ್ತಗೊಳಿಸಬೇಕು ಎಂದು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಿರುವ ಕ್ರಮ ಖಂಡಿಸಿ ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಜಕಾರಣಿಗಳು ಮತ್ತು ಅಧಿಕಾರಿಗಳು ಭಾಷಣಕ್ಕೆ ಮಾತ್ರ ಸೀಮಿತವಾಗಿದ್ದು ವಲಸಿಗರೊಂದಿಗೆ ಶಾಮೀಲಾಗಿ ನಮ್ಮ ನಾಡು, ನುಡಿ, ಸಂಸ್ಕೃತಿಗಳ ಅಧೋಗತಿಗೆ ಇಳಿಸಿರವುದು ಶೋಚನೀಯ ಎಂದು ದೂರಿದರು ಅನವಶ್ಯಕವಾಗಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಮತ್ತು ಕಾರ್ಯಕರ್ತರವನ್ನು ಬಂಧಿಸಿದ್ದಾರೆ , ಈ ಕೂಡಲೆ ಬೇಷರತ್ತಾಗಿ ಬಂಧ ಮುಕ್ತಗೊಳಿಸಬೇಕು ಎಂದು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ನಾಮಫಲಕ ಬಳಸುವುದು ಕಡ್ಡಾಯ ಮಾಡಿ, ಯಾರು ನಾಮಫಲಕದಲ್ಲಿ ಅನ್ಯ ಭಾಷೆಗೆ ಹೆಚ್ಚು ಒತ್ತು ಕೊಡುತ್ತಾರೋ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅನವಶ್ಯಕವಾಗಿ ರಾಜ್ಯಾಧ್ಯಕ್ಷರನ್ನು ಮತ್ತು ಕಾರ್ಯಕರ್ತರವನ್ನು ಬಂಧಿಸಿರುವುದನ್ನು ಈ ಕೂಡಲೆ ಬೇಷರತ್ತಾಗಿ ಬಂಧನ ಮುಕ್ತಗೊಳಿಸಬೇಕು..ಫೆ.28 ರ ಒಳಗೆ ಎಲ್ಲ ನಾಮಫಲಕಗಳು ಕನ್ನಡದಲಿ ಇರಬೇಕು ,ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಸಂಘಟನೆಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಕರವೇ ಶಿವರಾಮೇಗೌಡ ಕಾರ್ಯಕರ್ತರು ,ಕನ್ನಡ ಪರ ಹೋರಾಟಗಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!