ಕರವೇ ನಾರಾಯಣಗೌಡ ಹುಟ್ಟುಹಬ್ಬದಂಗವಾಗಿ ದೇವಸ್ಥಾನದಲ್ಲಿ ದಾಸೋಹ

KannadaprabhaNewsNetwork |  
Published : Jun 11, 2026, 12:30 AM IST
10ಎಚ್ಎಸ್ಎನ್7 : ಕರ್ನಾಟಕ ರಕ್ಷಣಾ ವೇದಿಕೆ  ರಾಜ್ಯಾಧ್ಯಕ್ಷ    ಟಿ.ಎನ್. ನಾರಾಯಣಗೌಡರ 60ನೇ ಜನ್ಮದಿನ ಅಂಗವಾಗಿ ತಾಲೂಕು  ಕರವೇ ವತಿಯಿಂದ  ಬೇಲೂರಿನ ಶ್ರೀ ಚೆನ್ನಕೇಶವಸ್ವಾಮಿ ದೇವಸ್ಥಾನದಲ್ಲಿ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. | Kannada Prabha

ಸಾರಾಂಶ

ಟಿ.ಎನ್. ನಾರಾಯಣಗೌಡರವರ ನೇತೃತ್ವದಲ್ಲಿ ಪ್ರಾದೇಶಿಕ ಪಕ್ಷ ಉದಯಿಸಿದರೆ ಕನ್ನಡಿಗರ ಉದ್ಯೋಗ, ರೈತರ ಹಿತಾಸಕ್ತಿ ಹಾಗೂ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ಸಿಗಲಿದೆ. ರೈಲ್ವೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಅವಕಾಶಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಅವರು ರಾಜ್ಯದ ಜನರ ಹಿತಕ್ಕಾಗಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳನ್ನು ಮಾಡಲಿ ಎಂದು ಹಾರೈಸಿದರು. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎನ್. ನಾರಾಯಣಗೌಡರ 60ನೇ ಜನ್ಮದಿನದ ಅಂಗವಾಗಿ ತಾಲೂಕು ಕರವೇ ವತಿಯಿಂದ ಬೇಲೂರಿನ ಶ್ರೀ ಚೆನ್ನಕೇಶವಸ್ವಾಮಿ ದೇವಸ್ಥಾನದಲ್ಲಿ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಬೇಲೂರುಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎನ್. ನಾರಾಯಣಗೌಡರ 60ನೇ ಜನ್ಮದಿನದ ಅಂಗವಾಗಿ ತಾಲೂಕು ಕರವೇ ವತಿಯಿಂದ ಬೇಲೂರಿನ ಶ್ರೀ ಚೆನ್ನಕೇಶವಸ್ವಾಮಿ ದೇವಸ್ಥಾನದಲ್ಲಿ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ನಾರಾಯಣಗೌಡರವರ ಹೆಸರಿನಲ್ಲಿ ಅನ್ನದಾಸೋಹ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಹಿಂದಿ ಹೇರಿಕೆ, ಆಂಗ್ಲ ನಾಮಫಲಕಗಳ ಬಳಕೆ ಹಾಗೂ ವಿವಿಧ ಕೇಂದ್ರ ಸಂಸ್ಥೆಗಳ ಕಾರ್ಯವೈಖರಿಯಿಂದ ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಗೆ ಧಕ್ಕೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡುವ ಬಲಿಷ್ಠ ಪ್ರಾದೇಶಿಕ ರಾಜಕೀಯ ಶಕ್ತಿಯ ಅಗತ್ಯವಿದೆ ಎಂದರು.ಟಿ.ಎನ್. ನಾರಾಯಣಗೌಡರವರ ನೇತೃತ್ವದಲ್ಲಿ ಪ್ರಾದೇಶಿಕ ಪಕ್ಷ ಉದಯಿಸಿದರೆ ಕನ್ನಡಿಗರ ಉದ್ಯೋಗ, ರೈತರ ಹಿತಾಸಕ್ತಿ ಹಾಗೂ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ಸಿಗಲಿದೆ. ರೈಲ್ವೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಅವಕಾಶಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಅವರು ರಾಜ್ಯದ ಜನರ ಹಿತಕ್ಕಾಗಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳನ್ನು ಮಾಡಲಿ ಎಂದು ಹಾರೈಸಿದರು.ಪ್ರಧಾನ ಕಾರ್ಯದರ್ಶಿ ಖಾದರ್‌ ಮಾತನಾಡಿ, ಕನ್ನಡ ಭಾಷೆ, ಕನ್ನಡಿಗರ ಹಕ್ಕುಗಳು ಹಾಗೂ ರಾಜ್ಯದ ಸ್ವಾಭಿಮಾನಕ್ಕಾಗಿ ನಾರಾಯಣಗೌಡರು ನಡೆಸಿರುವ ಹೋರಾಟಗಳು ಜನಮಾನಸದಲ್ಲಿ ವಿಶೇಷ ಸ್ಥಾನ ಪಡೆದಿವೆ. ವಿವಿಧ ಉದ್ಯಮ, ವ್ಯಾಪಾರ ಸಂಸ್ಥೆಗಳು ಹಾಗೂ ವಾಣಿಜ್ಯ ಕೇಂದ್ರಗಳಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸುವ ಕುರಿತು ಅವರು ನಡೆಸಿದ ಹೋರಾಟ ಸರ್ಕಾರದ ಗಮನ ಸೆಳೆಯುವಲ್ಲಿ ಮಹತ್ವದ ಪಾತ್ರ ವಹಿಸಿತು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಕರವೇ ಗೌರವ ಕಾರ್ಯದರ್ಶಿ ಮಾಳೆಗೆರೆ ತಾರನಾಥ್, ಮೋಹನ್, ಗಾಯತ್ರಿ, ನರಸಿಂಹ, ಚಂದ್ರು, ಮದನ್ ಬಳ್ಳೂರು ಹಾಗೂ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರವಣಬೆಳಗೊಳದಲ್ಲಿ ಕನ್ನಡದ ಮತ್ತೊಂದು ಶಾಸನ ಪತ್ತೆ
ವೈದ್ಯ ಜ್ಞಾನದ ಶಕ್ತಿ ಕೇಂದ್ರ ‘ಮಿಮ್ಸ್ ಕೇಂದ್ರ ಗ್ರಂಥಾಲಯ’..!