ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ಕರವೇ ಪ್ರತಿಭಟನೆ

KannadaprabhaNewsNetwork |  
Published : Feb 14, 2026, 01:45 AM IST
ಪೋಟೋ: 13ಎಸ್‌ಎಂಜಿಕೆಪಿ02ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ ಕರವೇ ಜನಮನ ರಾಜ್ಯ ಸಂಘಟನೆಯ ರಾಜ್ಯಾಧ್ಯಕ್ಷ ಕೆ. ಜನಾರ್ಧನ ಸಾಲಿಯಾನ್ ಅವರ ನೇತೃತ್ವದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.  | Kannada Prabha

ಸಾರಾಂಶ

ಮೆಗ್ಗಾನ್ ವೈದ್ಯಕೀಯ ಬೋಧನಾ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಸ್ಥೆ, ಭ್ರಷ್ಟಾಚಾರ, ವಿಳಂಬ ನೀತಿ ಹಾಗೂ ಸಿಬ್ಬಂದಿ ತಾತ್ಸಾರ ವರ್ತನೆ ವಿರುದ್ಧ ಕರವೇ ಜನಮನ ರಾಜ್ಯ ಸಂಘಟನೆಯ ರಾಜ್ಯಾಧ್ಯಕ್ಷ ಕೆ. ಜನಾರ್ಧನ ಸಾಲಿಯಾನ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಸ್ಪತ್ರೆಯ ಆಡಳಿತ ವ್ಯವಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಮೆಗ್ಗಾನ್ ವೈದ್ಯಕೀಯ ಬೋಧನಾ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಸ್ಥೆ, ಭ್ರಷ್ಟಾಚಾರ, ವಿಳಂಬ ನೀತಿ ಹಾಗೂ ಸಿಬ್ಬಂದಿ ತಾತ್ಸಾರ ವರ್ತನೆ ವಿರುದ್ಧ ಕರವೇ ಜನಮನ ರಾಜ್ಯ ಸಂಘಟನೆಯ ರಾಜ್ಯಾಧ್ಯಕ್ಷ ಕೆ. ಜನಾರ್ಧನ ಸಾಲಿಯಾನ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಸ್ಪತ್ರೆಯ ಆಡಳಿತ ವ್ಯವಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಆಸ್ಪತ್ರೆಯಲ್ಲಿ ರೋಗಿಗಳ ನೋಂದಣಿ ವ್ಯವಸ್ಥೆಯಲ್ಲಿನ ಗೊಂದಲ, ಆನ್‌ಲೈನ್ ನೋಂದಣಿ ವ್ಯವಸ್ಥೆಯ ವೈಫಲ್ಯ ಹಾಗೂ ಗಂಟೆಗಟ್ಟಲೆ ಕಾಯಿಸುವ ಕ್ರಮದ ವಿರುದ್ಧ ಆಕ್ಷೇಪಣೆ ವ್ಯಕ್ತಪಡಿಸಿದರು. ವಿಶೇಷವಾಗಿ ಎಂ.ಆರ್.ಐ ಸ್ಕ್ಯಾನಿಂಗ್‌ಗಾಗಿ ತಿಂಗಳಾನುಗಟ್ಟಲೆ ದಿನಾಂಕ ನೀಡಲಾಗುತ್ತಿರುವುದು ಹಾಗೂ ಲಂಚ ನೀಡಿದವರಿಗೆ ಮಾತ್ರ ಬೇಗ ಸೇವೆ ಸಿಗುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬಾಣಂತಿಯರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಭೀತಿ ಜನರಲ್ಲಿ ಇದೆ ಎಂದು ಸಂಘಟನೆ ಆರೋಪಿಸಿದ್ದು, ಪಾರದರ್ಶಕತೆಯನ್ನು ಕಾಪಾಡಲು ಜನನವಾದ ಮಗುವನ್ನು ತಕ್ಷಣ ಕುಟುಂಬದವರಿಗೆ ತೋರಿಸುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಔಷಧಿ ವಿತರಣೆಯಲ್ಲಿ ಅಕ್ರಮಗಳು ನಡೆಯುತ್ತಿರುವುದಾಗಿ ಆರೋಪಿಸಿದ ಪ್ರತಿಭಟನಾಕಾರರು, ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿದ್ದರೂ ರೋಗಿಗಳನ್ನು ಖಾಸಗಿ ಮೆಡಿಕಲ್ ಅಂಗಡಿಗಳಿಗೆ ಕಳುಹಿಸಿ ಕಮಿಷನ್ ಪಡೆಯುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದೆ. ಔಷಧಿಗಳ ಲಭ್ಯತೆ ಕುರಿತು ಸ್ಪಷ್ಟ ಮಾಹಿತಿ ಫಲಕಗಳನ್ನು ಪ್ರದರ್ಶಿಸಬೇಕು ಎಂದು ಹೇಳಿದರು.

ಬಿಲ್ಲಿಂಗ್ ಕೌಂಟರ್‌ಗಳನ್ನು ಹೆಚ್ಚಿಸಿ, ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಸೇವೆ ನೀಡುವಂತೆ ಕ್ರಮ ಕೈಗೊಳ್ಳಬೇಕು. ಸೇವಾ ಸಮಯದಲ್ಲಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದನ್ನು ತಡೆಯುವಂತೆ ಆಡಳಿತ ವರ್ಗಕ್ಕೆ ಮನವಿ ಮಾಡಲಾಯಿತು.

ಈ ಎಲ್ಲಾ ಸಮಸ್ಯೆಗಳನ್ನು ತಕ್ಷಣ ಸರಿಪಡಿಸದಿದ್ದರೆ ರೋಗಿಗಳ ಪರವಾಗಿ ಹಗಲು-ರಾತ್ರಿ ಧರಣಿ ಹಮ್ಮಿಕೊಳ್ಳುವುದಾಗಿ ಸಂಘಟನೆ ಎಚ್ಚರಿಕೆ ನೀಡಿದೆ. ಪ್ರತಿಭಟನೆಯ ನಂತರ ಆಸ್ಪತ್ರೆಯ ಮುಖ್ಯಸ್ಥರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ಮಾಲತೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ. ಕಿರಣ್ ಕುಮಾರ್ , ರಾಮಣ್ಣ ರಾಗಿಗುಡ್ಡ, ಪಾರ್ಥಿಬನ್, ಜಿಲ್ಲಾ ಸಂಚಾಲಕ ಹರ್ಷಿತ್ ಭಾರದ್ವಾಜ್, ತಾಲೂಕು ಸಂಚಾಲಕ ಪ್ರತಾಪ್ ಸೇರಿದಂತೆ ಶೋಭಾ, ಪುಷ್ಪ, ಲಕ್ಷ್ಮೀಶ, ಸಂಗೇಶ್ವರ ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬುರುಡೆ ಕೇಸ್‌: ಬೆಳ್ತಂಗಡಿ ಕೋರ್ಟ್‌ಗೆ ಎಸ್‌ಐಟಿ ವರದಿ
ಕಲಬುರಗಿ ಜೈಲ್‌ ಬ್ರೇಕ್‌ಗೆ ಬನಿಯನ್‌, ಜಮಖಾನ ಬಳಕೆ!