ಎಂಇಎಸ್ ಪುಂಡಾಟಿಕೆ ಖಂಡಿಸಿ ಕರವೇ ಪ್ರತಿಭಟನೆ

KannadaprabhaNewsNetwork |  
Published : Jun 23, 2026, 03:00 AM IST
ಎಂಇಎಸ್‌ ಪುಂಡಾಟಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ಪತಿಭಟನೆ ನಡೆಸಿದರು | Kannada Prabha

ಸಾರಾಂಶ

ರಾಜ್ಯ ಸರ್ಕಾರದ ಕನ್ನಡ ಕಡ್ಡಾಯ ಆದೇಶದ ಪ್ರತಿಯನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹರಿದು ಹಾಕಿದ ಎಂಇಎಸ್ ಕಾರ್ಯಕರ್ತರ ನಡೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ರಾಜ್ಯ ಸರ್ಕಾರದ ಕನ್ನಡ ಕಡ್ಡಾಯ ಆದೇಶದ ಪ್ರತಿಯನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹರಿದು ಹಾಕಿದ ಎಂಇಎಸ್ ಕಾರ್ಯಕರ್ತರ ನಡೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಎಂಇಎಸ್ ಕಾರ್ಯಕರ್ತರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ನಗರದ ಎಸ್‌ಪಿ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್‍ಯಾಲಿ ನಡೆಸಲು ಮುಂದಾದರು.ಆದರೆ, ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಪೊಲೀಸರು ಕರವೇ ಕಾರ್ಯಕರ್ತರನ್ನು ಸಂಗೊಳ್ಳಿ ರಾಯಣ್ಣ ವೃತ್ತದಲ್ಲೇ ತಡೆದರು. ಈ ವೇಳೆ ಪ್ರತಿಭಟನಾಕಾರರು ಸರ್ಕಾರದ ಆದೇಶದ ಪ್ರತಿಯನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ ಹರಿದು ಹಾಕಿರುವುದು ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕನ್ನಡದ ನೆಲ, ಜಲ ಮತ್ತು ಭಾಷೆಯ ಗೌರವಕ್ಕೆ ಧಕ್ಕೆ ತರುವ ಯಾವುದೇ ಕೃತ್ಯವನ್ನು ಸಹಿಸುವುದಿಲ್ಲ. ಪೊಲೀಸರ ಸಮ್ಮುಖದಲ್ಲೇ ಸರ್ಕಾರದ ಆದೇಶವನ್ನು ಹರಿದು ಹಾಕಿರುವವರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರವೇ ಮುಖಂಡರು ಒತ್ತಾಯಿಸಿದರು.

ಇದೇ ವೇಳೆ ಎಂಇಎಸ್ ಮತ್ತು ಶಿವಸೇನೆ ವಿರುದ್ಧ ವಾಗ್ದಾಳಿ ನಡೆಸಿದ ಕರವೇ ಕಾರ್ಯಕರ್ತರು, ಪದೇ ಪದೇ ಭಾಷಾ ಸಾಮರಸ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವ ಸಂಘಟನೆಗಳ ವಿರುದ್ಧ ಸರ್ಕಾರ ಕಠಿಣ ನಿಲುವು ತಾಳಬೇಕು ಎಂದು ಆಗ್ರಹಿಸಿದರು. ಎಂಇಎಸ್ ಮತ್ತು ಶಿವಸೇನೆಯನ್ನು ನಿಷೇಧಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿಯೂ ತಿಳಿಸಿದರು.ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತ ಮತ್ತು ಜಿಲ್ಲಾಧಿಕಾರಿ ಕಚೇರಿ ಸುತ್ತ-ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರೂ, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟರು.ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ರಾಜ್ಯ ಸಂಚಾಲಕ ಸುರೇಶ ಗವನ್ನವರ, ಉಪಾಧ್ಯಕ್ಷ ಗಣೇಶ್ ರೋಕಡೆ ಹಾಗೂ ರಾಜು ನಾಶಿಪುಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಶರಥ ಬನೋಶಿ, ಹೊಳೆಪ್ಪ ಸುಳದಾಳ್, ಅಡಿವೆಪ್ಪ ತಲ್ಲೂರಿ, ಉದಯಕುಮಾರ್ ಚಿಕ್ಕನ್ನವರ, ಸುಧೀರಗೌಡ ಪಾಟೀಲ್, ಜಗದೀಶ್ ಮಾಳಗಿ, ಸತೀಶ್ ಗುಡದವರ, ಭೋಪಾಲ್ ಅತ್ತು, ರಮೇಶ್ ಯರಗನ್ನವರ, ಸಂತೋಷ್ ಚಕ್ರಯಿ ಮೊದಲಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಎಂವಿಟಿಐ ವಿದ್ಯಾರ್ಥಿಗಳ ಸಂಶೋಧನೆ: ‘ನಡಿಗೆಯಿಂದ ವಿದ್ಯುತ್ ಉತ್ಪಾದನೆ’
ಸಂಶೋಧನಾ ಕ್ಷೇತ್ರ ಬಡವಾಗುತ್ತಿದೆ: ಪ್ರೊ. ವಿವೇಕ ರೈ ಕಳವಳ‍