ಬಸ್ ದರ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ

KannadaprabhaNewsNetwork |  
Published : Nov 06, 2026, 02:15 AM IST
ಹಾವೇರಿ ನಗರದ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಎದುರು ಬಸ್ ಪ್ರಯಾಣ ದರ ಹೆಚ್ಚಳ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ ಅವರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ರಾಜ್ಯ ಸರ್ಕಾರ ಹಾಗೂ ಸಾರಿಗೆ ಇಲಾಖೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಕಾರ್ಯಕರ್ತರು ಗುರುವಾರ ನಗರದ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಾವೇರಿ: ರಾಜ್ಯ ಸರ್ಕಾರ ಹಾಗೂ ಸಾರಿಗೆ ಇಲಾಖೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಕಾರ್ಯಕರ್ತರು ಗುರುವಾರ ನಗರದ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥ ಓಲೇಕಾರ ಮಾತನಾಡಿ, ಸಾರಿಗೆ ಇಲಾಖೆ ಏಕಾಏಕಿ ಪ್ರತಿ ಸ್ಟೇಜ್‌ಗೆ 9 ರು. ಹೆಚ್ಚುವರಿ ಟಿಕೆಟ್ ದರ ವಿಧಿಸಿರುವುದು ಖಂಡನೀಯ. ಬಸ್ ದರ ಹೆಚ್ಚಳದಿಂದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ಹೊರೆ ಹೆಚ್ಚಾಗಿದೆ. ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೊದಲು ಸರ್ಕಾರ ಅದರ ಸಾಧಕ-ಬಾಧಕಗಳನ್ನು ಸಮರ್ಪಕವಾಗಿ ಪರಿಶೀಲಿಸಬೇಕಿತ್ತು ಎಂದರು.

ಕಳೆದ ಎರಡು ದಿನಗಳ ಹಿಂದಷ್ಟೇ ಕೆಎಂಎಫ್ ಹಾಲಿನ ದರ ಹೆಚ್ಚಿಸಿದೆ. ಇದೀಗ ಬಸ್ ಪ್ರಯಾಣ ದರವೂ ಏರಿಕೆಯಾಗಿದ್ದು, ದಿನಬಳಕೆ ವಸ್ತುಗಳ ಬೆಲೆ ಈಗಾಗಲೇ ಗಗನಕ್ಕೇರಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಜನರು ಜೀವನ ನಡೆಸುವುದಾದರೂ ಹೇಗೆ? ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಒಂದು ಕಡೆ ಹಣ ನೀಡಿ ಮತ್ತೊಂದು ಕಡೆ ಬೆಲೆ ಏರಿಕೆ ಮೂಲಕ ಜನರಿಂದಲೇ ವಸೂಲಿ ಮಾಡಲಾಗುತ್ತಿದೆ ಎಂದು ಟೀಕಿಸಿದರು.

ಸರ್ಕಾರ ಜನರ ಬದುಕನ್ನು ಸುಧಾರಿಸಿ ಆರ್ಥಿಕವಾಗಿ ಸದೃಢಗೊಳಿಸಬೇಕೇ ಹೊರತು ಜೀವನವನ್ನು ದುಸ್ತರಗೊಳಿಸಬಾರದು. ಗ್ರಾಮೀಣ ಭಾಗದ ರೈತರ ಮಕ್ಕಳು ಆರ್ಥಿಕ ಸಂಕಷ್ಟದಿಂದ ಶಿಕ್ಷಣ ಮುಂದುವರಿಸಲಾಗದ ಪರಿಸ್ಥಿತಿಯಿದೆ. ಉದ್ಯೋಗಾವಕಾಶಗಳ ಕೊರತೆಯೂ ಜನರನ್ನು ಕಾಡುತ್ತಿದೆ. ಇಂತಹ ಸಮಸ್ಯೆಗಳ ನಡುವೆ ಬೆಲೆ ಏರಿಕೆ ಜನಸಾಮಾನ್ಯರ ಬದುಕನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದರು.

ಸಾರಿಗೆ ಸಂಸ್ಥೆಗಳ ಬಸ್‌ಗಳಿಗೆ ಡೀಸೆಲ್ ಕೊರತೆಯಿಂದ ಘಟಕಗಳಲ್ಲಿ ಬಸ್‌ಗಳು ನಿಲ್ಲುವ ಪರಿಸ್ಥಿತಿಯಿದೆ ಎಂದು ಹೇಳುವ ಸರ್ಕಾರ, ಚುನಾವಣಾ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮುನ್ನ ಆರ್ಥಿಕ ಪರಿಣಾಮಗಳನ್ನು ಯೋಚಿಸಬೇಕಿತ್ತು. ಕೂಡಲೇ ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು. ಇಲ್ಲದಿದ್ದರೆ 2028ರ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿ ಬಳಿಕ ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷರಾದ ನೂರಅಹ್ಮದ ಲಕ್ಷ್ಮೇಶ್ವರ, ಪುಟ್ಟಪ್ಪ ಹಿತ್ತಲಮನಿ, ಮಾರುತಿ ಹಾಲಗಿ, ಮಹಾದೇವಪ್ಪ ಹೆಡಿಗ್ಗೊಂಡ, ರಮೇಶ ದಾಸಪ್ಪನವರ, ಯುವರಾಜ ನವಲಗುಂದ, ಪೈರೋಜ ಲಿಂಗದಳ್ಳಿ, ಸುರೇಶ ಕೊಂಗಿ, ಸದಾನಂದ ಮರೆಮ್ಮನವರ, ಶೇಖಪ್ಪ ದೀಪಾವಳಿ, ಚಂದ್ರಪ್ಪ ಕುಂಚಿಕೊರವರ, ಹಾಲೇಶ ಕುಮ್ಮೂರ, ಇರ್ಫಾನ ಜಡದಿ, ಬಾಬುಸಾಬ ಹಾವೇರಿ, ಪ್ರಭುಗೌಡ ಎಡಚಿ, ರಮೇಶ ಸುಂಕಾಪುರ, ಸತೀಶ ಮಂಡಕ್ಕಿ, ದಾದಾಪೀರ ರಿಕಾರಿ, ದುರಗಪ್ಪ ಕೊರವರ, ಇರ್ಫಾನ ಮುಲ್ಲಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಳಸಿದ ಕಪ್‌ನಲ್ಲೇ ಪೆಪ್ಸಿ ಸರ್ವ್‌ ಮಾಡಿದ ಪಿವಿಆರ್ ತಿನಿಸು ಮಳಿಗೆ
ಬಿಎಂಟಿಸಿ ಬಸ್‌ ಪಾಸ್‌ ದರ ಹೆಚ್ಚಳ!