ತೈಲ ಬೆಲೆ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ

KannadaprabhaNewsNetwork |  
Published : Jun 20, 2024, 01:17 AM IST
ಚಿತ್ರ 18ಬಿಡಿಆರ್50 | Kannada Prabha

ಸಾರಾಂಶ

ಬೀದರ್‌ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ. ತೈಲ ಬೆಲೆ ಮತ್ತು ಇತರೆ ಅವಶ್ಯಕ ಸಾಮಗ್ರಿಗಳ ಬೆಲೆ ಕಡಿಮೆ ಮಾಡಿ ಈಗಾಗಲೇ ಬೆಲೆ ಹೆಚ್ಚಳದಿಂದ ತೊಂದರೆ ಅನುಭವಿಸುತ್ತಿರುವ ಸಾರ್ವಜನಿಕರ ಹಿತದೃಷ್ಟಿಯಿಂದ ಹೆಚ್ಚಾಗಿರುವ ತೈಲ ಬೆಲೆ ಹಾಗೂ ಜೀವಕ್ಕೆ ಅವಶ್ಯವಿರುವ ಆಹಾರ ಧಾನ್ಯಗಳ ಬೆಲೆಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಬರೆದ ಮನವಿ ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಬೀದರ್‌

ಕರ್ನಾಟಕ ಸರ್ಕಾರ ಪೆಟ್ರೋಲ್, ಡೀಸೆಲ್ ಮತ್ತು ಇತರೆ ಅವಶ್ಯಕ ಆಹಾರ ಧಾನ್ಯಗಳ ಬೆಲೆಯನ್ನು ಏಕಾಏಕಿಯಾಗಿ ಏರಿಕೆ ಮಾಡಿ ರಾಜ್ಯದ ಜನತೆಗೆ ದಿಬ್ರಮೆ ಉಂಟು ಮಾಡಿದೆ ಎಂದು ಆರೋಪಿಸಿ ಮಂಗಳವಾರ ಬೀದರ್‌ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಬಣ) ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿ ಲೀಟರ್ ಪೆಟ್ರೋಲ್ 3 ರು. ಕ್ಕಿಂತಲೂ ಹೆಚ್ಚಿಗೆ ಹಾಗೂ ಡೀಸೆಲ್ ಪ್ರತಿ ಲೀಟರಿಗೆ 3.50 ರು. ರಂತೆ ಹೆಚ್ಚಿಗೆ ಮಾಡಿ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ. ಈ ತೈಲ ಬೆಲೆ ಹೆಚ್ಚಳದಿಂದ ಸಾರಿಗೆ ವೆಚ್ಚ ಹೆಚ್ಚಾಗುವುದರಿಂದ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕುವ ಕೆಲಸ ರಾಜ್ಯ ಸರ್ಕಾರ ಮಾಡಿರುವುದು ಖಂಡನೀಯವಾಗಿದೆ.

ರಾಜ್ಯದ ನಿವಾಸಿಗಳು ಆಹಾರ ಧಾನ್ಯ. ಹಾಲು, ತರಕಾರಿ ಇತ್ಯಾದಿ ಅವಶ್ಯಕ ಸಾಮಗ್ರಿಗಳ ಬೆಲೆ ಈಗಾಗಲೇ ಹೆಚ್ಚಾಗಿದ್ದು, ಸದರಿ ತೈಲ ಬೆಲೆ ಹೆಚ್ಚಳದಿಂದ ಎಲ್ಲಾ ಅವಶ್ಯಕ ಸಾಮಗ್ರಿಗಳ ಬೆಲೆ ಮತ್ತೆ ಗಗನದತ್ತ ಮುಖ ಮಾಡುವುದರಲ್ಲಿ ಯಾವುದೇ ಸಂಶಯ ಇರುವುದಿಲ್ಲ.

ಆದ ಕಾರಣ ತೈಲ ಬೆಲೆ ಮತ್ತು ಇತರೆ ಅವಶ್ಯಕ ಸಾಮಗ್ರಿಗಳ ಬೆಲೆ ಕಡಿಮೆ ಮಾಡಿ ಈಗಾಗಲೇ ಬೆಲೆ ಹೆಚ್ಚಳದಿಂದ ತೊಂದರೆ ಅನುಭವಿಸುತ್ತಿರುವ ಸಾರ್ವಜನಿಕರ ಹಿತದೃಷ್ಟಿಯಿಂದ ಹೆಚ್ಚಾಗಿರುವ ತೈಲ ಬೆಲೆ ಹಾಗೂ ಜೀವಕ್ಕೆ ಅವಶ್ಯವಿರುವ ಆಹಾರ ಧಾನ್ಯಗಳ ಬೆಲೆಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಬರೆದ ಮನವಿ ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಪೀಟರ್ ಚಿಟಗುಪ್ಪಾ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುನೀತಾ ಸಿ.ಬಿ. ಮರಕಲ್, ಜಿಲ್ಲಾ ಗೌರವಾಧ್ಯಕ್ಷ ಸೈಯದ್ ನವಾಜ್, ಜಿಲ್ಲಾ ಕಾರ್ಯಾಧ್ಯಕ್ಷ ಜಗನಾಥ್ ಕೌಠಾ, ಬಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬಗದಲಕರ್, ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ನಾಗೇಶ್ ರಾಯಣೋರ, ಮೊಸಿನ್ ಪಟೇಲ್, ಪ್ರದೀಪ್ ಕೋಟೆ, ಪಿಂಟೂ ಸಿರ್ಸಿ, ವಿಜಯ್ ಕುಮಾರ್, ಸೈಮನ್ ಮೇತ್ರೆ, ನೀಲೇಶ್ ರಾಠೋಡ್, ಶಿವು ಮಡಿವಾಳ, ಯೋಹಾನ್ ಮೀಸೆ, ಆಗಸ್ಟಿನ್ ಮೇತ್ರೆ, ಚಂದ್ರಕಾಂತ್ ಪೋಳ, ಜಾಫರ್ಮಿಯ್ಯ, ಮೋಜೆಸ ಅಣದುರೆ, ಅಂಬರೀಶ್ ಜುಲ್ಫಿನೋರ್, ಪ್ರಸಾದ್ ಘೋಡಂಪಳ್ಳಿಕರ್, ಶಿವು ಮೇತ್ರೆ ಇದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ