ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಕರವೇ ಪ್ರತಿಭಟನೆ

KannadaprabhaNewsNetwork |  
Published : Jul 31, 2026, 02:15 AM IST
 | Kannada Prabha

ಸಾರಾಂಶ

ರಾಜ್ಯದಲ್ಲಿ ತೀವ್ರ ಮಳೆ ಅಭಾವದಿಂದ ಜಲಾಶಯಗಳು ಬತ್ತುತ್ತಿರುವ ಬೆನ್ನಲ್ಲೇ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಸೂಚನೆಯನ್ನು ಖಂಡಿಸಿ ಗುರುವಾರ ಕಾರವಾರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.

ಖಾಲಿ ಕೊಡ ಪ್ರದರ್ಶಿಸಿ ಆಕ್ರೋಶ । ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿಕನ್ನಡಪ್ರಭ ವಾರ್ತೆ ಕಾರವಾರ

ರಾಜ್ಯದಲ್ಲಿ ತೀವ್ರ ಮಳೆ ಅಭಾವದಿಂದ ಜಲಾಶಯಗಳು ಬತ್ತುತ್ತಿರುವ ಬೆನ್ನಲ್ಲೇ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಸೂಚನೆಯನ್ನು ಖಂಡಿಸಿ ಗುರುವಾರ ಕಾರವಾರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.

ಯಾವುದೇ ಕಾರಣಕ್ಕೂ ನೆರೆ ರಾಜ್ಯಕ್ಕೆ ನೀರು ಬಿಡಬಾರದು ಎಂದು ಸರ್ಕಾರವನ್ನು ಆಗ್ರಹಿಸಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಕರವೇ ಜಿಲ್ಲಾಧ್ಯಕ್ಷ ಅಕ್ಷಯ ನಾಗೇಕರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೈಯಲ್ಲಿ ಖಾಲಿ ಕೊಡಗಳನ್ನು ಹಿಡಿದು ಹಾಗೂ ತೋಳಿಗೆ ಕಪ್ಪು ಪಟ್ಟಿ ಧರಿಸಿ ಜಮಾಯಿಸಿದ ಹೋರಾಟಗಾರರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತು, ಸರ್ಕಾರದ ವಿರುದ್ಧ ಹಾಗೂ ಕಾವೇರಿ ನೀರು ನಿರ್ವಹಣಾ ಸಮಿತಿಯ ವಿರುದ್ಧ ಘೋಷಣೆ ಕೂಗಿದರು.

ರಾಜ್ಯದ ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಿರುವಾಗ ತಮಿಳುನಾಡಿಗೆ ನೀರು ಹರಿಸುವುದು ಕನ್ನಡಿಗರಿಗೆ ಮಾಡುವ ದ್ರೋಹವಾಗಿದೆ. ಒಂದು ವೇಳೆ ಸರ್ಕಾರ ಕನ್ನಡಿಗರ ಹಿತಾಸಕ್ತಿಯನ್ನು ಬಲಿಕೊಟ್ಟು ತಮಿಳುನಾಡಿಗೆ 15 ದಿನಗಳ ಕಾಲ ದಿನಕ್ಕೆ 3500 ಕ್ಯೂಸೆಕ್ ನೀರು ಹರಿಸಿದ್ದೇ ಆದಲ್ಲಿ, ಮುಂದಿನ ದಿನಗಳಲ್ಲಿ ಇಡೀ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟ ಎದುರಿಸಬೇಕಾಗುತ್ತದೆ ಎಂದು ಮುಖಂಡ ಅಕ್ಷಯ ನಾಗೇಕರ್ ಎಚ್ಚರಿಕೆ ನೀಡಿದರು.

ಪ್ರಸ್ತುತ ನಮ್ಮ ಜಲಾಶಯಗಳಲ್ಲಿರುವ ನೀರು ನಮ್ಮ ರಾಜ್ಯದ ಜನರ ಕುಡಿಯುವ ನೀರಿನ ಅಗತ್ಯಕ್ಕೆ ಮಾತ್ರ ಸಾಕಾಗುವಷ್ಟಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವುದು ರಾಜ್ಯದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಮಾಡುವ ತೀವ್ರ ಅನ್ಯಾಯವಾಗಿದೆ. ಆದ್ದರಿಂದ ಕಾವೇರಿ ನೀರು ನಿರ್ವಹಣಾ ಸಮಿತಿಯ ಏಕಪಕ್ಷೀಯ ಶಿಫಾರಸನ್ನು ರಾಜ್ಯ ಸರ್ಕಾರ ತಕ್ಷಣವೇ ತಿರಸ್ಕರಿಸಬೇಕು ಮತ್ತು ಯಾವುದೇ ಕಾರಣಕ್ಕೂ ಜಲಾಶಯಗಳಿಂದ ನೀರು ಬಿಡುಗಡೆ ಮಾಡಬಾರದು ಎಂದು ಸಂಘಟನೆ ಒತ್ತಾಯಿಸಿದೆ.

ಇದರೊಂದಿಗೆ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ರಾಜ್ಯದ ನೈಜ ಭೀಕರ ಪರಿಸ್ಥಿತಿಯನ್ನು ಅತ್ಯಂತ ಸಮರ್ಥವಾಗಿ ಮಂಡಿಸಬೇಕಿದೆ. ವಿಳಂಬ ಮಾಡದೆ ತಕ್ಷಣವೇ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು. ತಮಿಳುನಾಡು ಸರ್ಕಾರದ ಅಥವಾ ಕೇಂದ್ರ ಸರ್ಕಾರದ ಯಾವುದೇ ರೀತಿಯ ರಾಜಕೀಯ ಒತ್ತಡಗಳಿಗೆ ರಾಜ್ಯ ಸರ್ಕಾರವು ಶರಣಾಗಬಾರದು. ಕನ್ನಡಿಗರ ಹಿತರಕ್ಷಣೆಯ ವಿಷಯದಲ್ಲಿ ಯಾವುದೇ ರಾಜಿಗೆ ಆಸ್ಪದ ನೀಡದೆ ದೃಢ ನಿಲುವು ತಳೆಯಬೇಕು ಎಂದು ಕರವೇ ಕಾರ್ಯಕರ್ತರು ಮನವಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ರಕ್ಷಣೆಗೆ ಸೂಕ್ತ ಕಾನೂನು ಅರಿವು ನೀಡುವುದು ಅತ್ಯಗತ್ಯ: ಹುಲಗಪ್ಪ ಡಿ.
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಬಾರದು: ಜಾನಕಿ ಕೆ.ಎಂ.