ದೇವನಹಳ್ಳಿ: ಕನ್ನಡ ಶಾಲೆಗಳ ಉಳಿವಿಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ಪ್ರತಿ ಕನ್ನಡ ಶಾಲೆಗೆ ಭೇಟಿ ನೀಡಿ ಕನ್ನಡ ಶಾಲೆಗಳ ಉಳಿವಿಗಾಗಿ ಅಭಿಯಾನ ಪ್ರಾರಂಭಿಸಲಿದ್ದೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಅನುರಾಧ ತಿಳಿಸಿದರು
ದೇವನಹಳ್ಳಿ: ಕನ್ನಡ ಶಾಲೆಗಳ ಉಳಿವಿಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ಪ್ರತಿ ಕನ್ನಡ ಶಾಲೆಗೆ ಭೇಟಿ ನೀಡಿ ಕನ್ನಡ ಶಾಲೆಗಳ ಉಳಿವಿಗಾಗಿ ಅಭಿಯಾನ ಪ್ರಾರಂಭಿಸಲಿದ್ದೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಅನುರಾಧ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಸಂಘಟನೆಯಿಂದ ಕನ್ನಡ ಶಾಲೆ ಉಳಿಸಿ ಅಭಿಯಾನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸಂಘಟನೆಯ ರಾಜ್ಯಾಧ್ಯಕ್ಷ ನಿಂಗರಾಜ್ ಗೌಡರು ಅವರ ಜನ್ಮದಿನದ ಪ್ರಯುಕ್ತ ಮೇ 26ರಂದು ಕನ್ನಡ ಶಾಲೆ ಉಳಿಸಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಹಳ್ಳಿಗಳಲ್ಲಿನ ಸರ್ಕಾರಿ ಶಾಲೆಗಳು ಉಳಿಯಬೇಕು. ಕನ್ನಡ ನಾಡು, ನೆಲ, ಜಲ ಉಳಿವಿಗೆ ಪ್ರತಿಯೊಬ್ಬ ಕನ್ನಡಿಗರು ಧ್ವನಿಗೂಡಿಸಬೇಕು. ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವ ಬದಲಿಗೆ ಶಾಲೆಗಳಿಗೆ ತಮ್ಮ ಕೈಲಾದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ನೆರವು ನೀಡಬೇಕು. ಇತ್ತೀಚೆಗೆ ಹೆಣ್ಣುಮಕ್ಕಳು ದೂರದ ಶಾಲೆಗಳಿಗೆ ಹೋಗಿ ಬರುವುದೇ ಸವಾಲಾಗಿದೆ. ದೂರದ ಶಾಲೆಗಳಿಗೆ ಹೋಗುವ ಹೆಣ್ಣು ಮಕ್ಕಳಿಗೆ ಭದ್ರತೆ ಇಲ್ಲ. ನಮ್ಮ ಊರು ನಮ್ಮ ಶಾಲೆ ಉಳಿಯಬೇಕು. ರಾಜ್ಯಾದ್ಯಂತ ಹಿಂದುಳಿದಿರುವ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ, ಆದ್ಯತೆ ಮೇರೆಗೆ ದೇವನಹಳ್ಳಿಯಲ್ಲಿ ೬ ಶಾಲೆಗಳನ್ನು ಗುರುತಿಸಿ ಸುಣ್ಣಬಣ್ಣ ಬಳಿಯುವ ಕಾರ್ಯಕ್ರಮ ಮಂಗಳವಾರದಿಂದ ಪ್ರಾರಂಭವಾಗಲಿದೆ ಎಂದರು.
ಇದೆ ವೇಳೆ ಕರವೇ ಸ್ವಾಭಿಮಾನಿ ಸೇನೆ ದೇವನಹಳ್ಳಿ ತಾಲೂಕು ಅಧ್ಯಕ್ಷ ಮುಕುಂದ, ಮಹಿಳಾಧ್ಯಕ್ಷೆ ಲತಾ, ಪದಾಧಿಕಾರಿಗಳಾದ ವೆಂಕಟೇಶ್, ಚೌಡಮ್ಮ, ರಘು, ಶ್ರೀನಿವಾಸ್, ರತ್ನಮ್ಮ, ಇಂದಿರಾ, ಗೀತಾ, ಮಧು, ತ್ಯಾಗರಾಜ್, ಮ್ಯಾಥ್ಯು ಮುನಿಯಪ್ಪ ಮತ್ತಿತರರಿದ್ದರು.
೨೫ ದೇವನಹಳ್ಳಿ ಚಿತ್ರಸುದ್ದಿ: ೧೨
ದೇವನಹಳ್ಳಿಯಲ್ಲಿ ಕನ್ನಡ ಶಾಲೆ ಉಳಿಸಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಕರವೇ ಸ್ವಾಭಿಮಾನಿ ಸೇನೆ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಅನುರಾಧ ಮಾತನಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.