ಕನ್ನಡಪ್ರಭ ವಾರ್ತೆ ಬೆಳಗಾವಿ
ಭೋಸಲೆ ಅವರು ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗುವ ಮೂಲಕ ಕನ್ನಡ ನಾಡಿಗೆ ದ್ರೋಹ ಬಗೆದಿದ್ದು, ಶಾಸಕ ಅಭಯ ಪಾಟೀಲ ಜಿಲ್ಲಾಡಳಿತದಿಂದ ಅನುಮತಿ ಪಡೆಯದೇ ಕಾರ್ಯಕ್ರಮ ನಡೆಸಿ ಪುಂಡಾಟಿಕೆ ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಇವರ ವಿರುದ್ಧ ಕರವೇ ಬೆಳಗಾವಿಯ ತಿಲಕವಾಡಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧರ್ಮವೀರ ಸಂಬಾಜಿ ಮಹಾರಾಜರ ಮೂರ್ತಿ ಉದ್ಘಾಟನೆ ಪರವಾಗಿ ಬಿಜೆಪಿ ಮುಖಂಡರಾದ ಸಿಟಿ ರವಿ ಮತ್ತು ಚಂದ್ರಕಾಂತ ಬೆಲ್ಲದ ಹೇಳಿಕೆ ಕೊಟ್ಟಿದ್ದರು. ಈಗ ಕನ್ನಡದ ನೆಲದಲ್ಲೇ ಕನ್ನಡಿಗರನ್ನು ಅವಮಾನಿಸಿದ್ದು ಈ ಕುರಿತು ಸಿಟಿ ರವಿ ಮತ್ತು ಚಂದ್ರಕಾಂತ ಬೆಲ್ಲದ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸಲಿ, ಇಲ್ಲವಾದಲ್ಲಿ ನಾಡದ್ರೋಹಿ ಕೃತ್ಯವೆಸಗಲು ಅವಕಾಶ ಮಾಡಿಕೊಟ್ಟಿರುವ ಶಾಸಕ ಅಭಯ ಪಾಟೀಲರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಿ ಎಂದು ಒತ್ತಾಯಿಸಿದ್ದಾರೆ.ಬೆಳಗಾವಿ ಮಹಾನಗರ ಪಾಲಿಕೆ ಕೇವಲ ಧರ್ಮವೀರ ಸಂಭಾಜಿ ಮಹಾರಾಜರ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳ ನಿರ್ಮಾಣಕ್ಕೆ ಅನುದಾನ ನೀಡುತ್ತಿದೆ. ನಾಡಿನ ಮಹಾಪುರುಷರಾದ ವೀರರಾಣಿ ಕಿತ್ತೂರು ಚನ್ನಮ್ಮಾಜಿ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಜಗಜ್ಯೋತಿ ಬಸವೇಶ್ವರ ವೃತ್ತಗಳನ್ನು ಅಭಿವೃದ್ಧಿಪಡಿಸದೇ ಕಡೆಗಣಿಸಿರುವ ಪಾಲಿಕೆಯನ್ನು ಸರ್ಕಾರ ತಕ್ಷಣ ಸೂಪರ್ ಸೀಡ್ ಮಾಡಬೇಕು ಎಂದು ಆಗ್ರಹಿಸಿದರು.