ಕನ್ನಡಪ್ರಭ ವಾರ್ತೆ ವಡಗೇರಾ
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾಲೂಕು ಕೇಂದ್ರವಾಗಿ ಏಳು ವರ್ಷ ಕಳೆದರೂ ಕಾಲೇಜು ಇಲ್ಲ. ಇದರಿಂದ ತಾಲೂಕಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಲಿಯಲು ತುಂಬಾ ತೊಂದರೆಯಾಗುತ್ತಿದೆ. ಕಾಲೇಜು ಶಿಕ್ಷಣಕ್ಕಾಗಿ ದೂರದ ಶಹಾಪುರ ಮತ್ತು ಯಾದಗಿರಿ ಹಾಗೂ ರಾಯಚೂರಿನಂತ ನಗರ ಪ್ರದೇಶಗಳಿಗೆ ಕಾಲೇಜು ಶಿಕ್ಷಣಕ್ಕಾಗಿ ತೆರಳುವಂತಾಗಿದೆ. ಕಾಲೇಜು ಇಲ್ಲದಿರುವುದರಿಂದ ಅದೆಷ್ಟೋ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅರ್ಧಕ್ಕೆ ಶಿಕ್ಷಣವನ್ನು ಮೊಟುಕುಗೊಳಿಸುತ್ತಿದ್ದಾರೆ ಎಂದರು.
ನೂತನ ತಾಲೂಕಿಗೆ 60ಕ್ಕೂ ಹೆಚ್ಚು ಹಳ್ಳಿಗಳು ಒಳಪಡುತ್ತವೆ. ಕಾಲೇಜು ಇಲ್ಲದಿರುವುದು ದುರಾದೃಷ್ಟಕರ. ಕೂಡಲೇ ಸಂಬಂಧಿಸಿದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ವಡಗೇರಾ ತಾಲೂಕು ಕೇಂದ್ರದಲ್ಲಿ ಪದವಿ ಪೂರ್ವ ಮತ್ತು ಪದವಿ ಮಹಾವಿದ್ಯಾಲಯ ಮಂಜೂರು ಮಾಡಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ವತಿಯಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.-----
22ವೈಡಿಆರ್8: ಅಬ್ದುಲ್ ಚಿಗಾನೂರ, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ, ವಡಗೇರಾ.