ಕಾರ್ಕಳ ಬಿಜೆಪಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

KannadaprabhaNewsNetwork |  
Published : Jun 22, 2026, 02:45 AM IST
ದಿನಾಚರಣೆ | Kannada Prabha

ಸಾರಾಂಶ

ಬಿಜೆಪಿ ಕಾರ್ಕಳ ಮಂಡಲದ ಅಧ್ಯಕ್ಷ ನವೀನ್ ನಾಯಕ್ ಅವರ ನೇತೃತ್ವದಲ್ಲಿ ಭಾನುವಾರ ಕಾರ್ಕಳದ ವಿಕಾಸ ಜನಸೇವಾ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

ಕಾರ್ಕಳ: ಬಿಜೆಪಿ ಕಾರ್ಕಳ ಮಂಡಲದ ಅಧ್ಯಕ್ಷ ನವೀನ್ ನಾಯಕ್ ಅವರ ನೇತೃತ್ವದಲ್ಲಿ ಭಾನುವಾರ ಕಾರ್ಕಳದ ವಿಕಾಸ ಜನಸೇವಾ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.ಯೋಗವು ಭಾರತದ ಪ್ರಾಚೀನ ಪರಂಪರೆಯ ಅಮೂಲ್ಯ ಕೊಡುಗೆ. ಇದು ಶರೀರ, ಮನಸ್ಸು ಮತ್ತು ಆತ್ಮವನ್ನು ಒಂದುಗೂಡಿಸಿ ಸಮಗ್ರ ಆರೋಗ್ಯ ನೀಡುತ್ತದೆ. ‘ವಸುದೈವ ಕುಟುಂಬಕಂ’ ಭಾವನೆಯೊಂದಿಗೆ ಯೋಗವು ವಿಶ್ವವನ್ನು ಬೆಸೆಯುವ ಸೇತುವೆಯಾಗಿದೆ. ಯೋಗವನ್ನು ದಿನಚರಿಯ ಭಾಗವಾಗಿಸಿ, ಆರೋಗ್ಯವಂತ ಹಾಗೂ ಶಾಂತಿಯುತ ಸಮಾಜ ನಿರ್ಮಿಸೋಣ ಎಂಬ ಪ್ರಧಾನಿಗಳಾದ ನರೇಂದ್ರ ಮೋದಿಯವರ ಮಾತಿನಂತೆ ಜೂನ್ 21ರಂದು ದೇಶದೆಲ್ಲೆಡೆ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಇಂದು ಕಾರ್ಕಳ ಬಿಜೆಪಿ ವತಿಯಿಂದ ಯೋಗ ದಿನಾಚರಣೆಯನ್ನು ನಡೆಸಲಾಯಿತು. ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ಯೋಗ ದಿನಾಚರಣೆಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ಅಂತಾರಾಷ್ಟ್ರೀಯ ಯೋಗ ಪಟು ಕುಮಾರಿ ಅನ್ವಿ ಎಚ್. ಅಂಚನ್ ಅವರು ಯೋಗ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ರವೀಂದ್ರ ಮಡಿವಾಳ, ಪ್ರಧಾನ ಕಾರ್ಯದರ್ಶಿ ಬೋಳ ಸತೀಶ್ ಪೂಜಾರಿ, ಪಕ್ಷದ ವಕ್ತಾರ ರವೀಂದ್ರ ಮೊಯ್ಲಿ, ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ ನಗರ ಅಧ್ಯಕ್ಷರಾದ ನಿರಂಜನ್ ಜೈನ್, ಯೋಗೀಶ್ ಸಾಲ್ಯಾನ್ ಹಾಗೂ ಪಕ್ಷದ ಪ್ರಮುಖರು, ಯುವ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂಡುಬಿದಿರೆ: ಆ.7, 8ರಂದು ‘ಆಳ್ವಾಸ್‌ ಪ್ರಗತಿ-2026’ ಬೃಹತ್‌ ಉದ್ಯೋಗ ಮೇಳ
ಮೆಸ್ಕಾಂ ಖಾಸಗೀಕರಣ ತಕ್ಷಣ ನಿಲ್ಲಿಸಿ: ಯೂನಿಯನ್‌ ಮನವಿ