ನಾಳೆ ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ವಿಜೇತೋತ್ಸವ- 2026

KannadaprabhaNewsNetwork |  
Published : Oct 23, 2026, 02:15 AM IST
22ವಿಶೇಷ | Kannada Prabha

ಸಾರಾಂಶ

ಕರ್ನಾಟಕ ರಾಜ್ಯದಲ್ಲೇ ಪ್ರಥಮ ಬಾರಿಗೆ ವಿಶೇಷ ಶಾಲೆಗಳ ವಿಶೇಷ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ರಾಜ್ಯಮಟ್ಟದ ಜನಪದ ನೃತ್ಯ ಸ್ಪರ್ಧೆ ವಿಜೇತೋತ್ಸವ- 2026 ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನಲ್ಲಿ 24ರಂದು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಸಂಘದ ಕಾರ್ಯಾಧ್ಯಕ್ಷೆ ಡಾ. ಕಾಂತಿ ಹರೀಶ್‌ ಹೇಳಿದ್ದಾರೆ.

ಉಡುಪಿ: ಕರ್ನಾಟಕ ರಾಜ್ಯದಲ್ಲೇ ಪ್ರಥಮ ಬಾರಿಗೆ ವಿಶೇಷ ಶಾಲೆಗಳ ವಿಶೇಷ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ರಾಜ್ಯಮಟ್ಟದ ಜನಪದ ನೃತ್ಯ ಸ್ಪರ್ಧೆ ವಿಜೇತೋತ್ಸವ- 2026 ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನಲ್ಲಿ 24ರಂದು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಸಂಘದ ಕಾರ್ಯಾಧ್ಯಕ್ಷೆ ಡಾ. ಕಾಂತಿ ಹರೀಶ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದ ಸುಮಾರು 30 ಶಾಲೆಗಳ 600ಕ್ಕೂ ಹೆಚ್ಚು ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಈ ವಿಜೇತೋತ್ಸವದಲ್ಲಿ ಭಾಗವಹಿಸಲಿದ್ದಾರೆ. ವಿಜೇತರಿಗೆ ಪ್ರಥಮ 25,000 ರು., ದ್ವಿತೀಯ 20,000 ರು, ತೃತೀಯ 15,000 ರು., 3 ತಂಡಗಳು ಸಮಾಧಾನಕರ ಬಹುಮಾನ ತಲಾ 5,000 ರು.ಗಳನ್ನು ನೀಡಲಾಗುತ್ತದೆ. ಭಾಗವಹಿಸಿದ ಉಳಿದೆಲ್ಲಾ ತಂಡಗಳಿಗೆ ತಲಾ 3,000 ರು. ಗಳ ಪ್ರೋತ್ಸಾಹ ಧನ ನೀಡಲಾಗುವುದು

ಬೆಳಿಗ್ಗೆ 9.30ಕ್ಕೆ ಕಾರ್ಕಳದ ನಿವೃತ್ತ ಸಿಎ ಕಮಲಾಕ್ಷ ಕಾಮತ್ ಸ್ಪರ್ಧೆಗಳನ್ನು ಉದ್ಘಾಟಿಸಲಿದ್ದು, ಕ್ರಿಯೇಟಿವ್ ಪಿಯು ಕಾಲೇಜಿನ ಸ್ಥಾಪಕರು ಪ್ರಾಂಶುಪಾಲರೂ ಆಗಿರುವ ಗಣಪತಿ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಂಜೆ 4ಕ್ಕೆ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ರಾಜ್ಯದ ಆರೋಗ್ಯ ಸಟಿವ ಯು.ಟಿ.ಖಾದರ್, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಭಾಗವಹಿಸಲಿದ್ದಾರೆ. ವಿಜೇತ ಶಾಲೆಯ ಗೌರವಾಧ್ಯಕ್ಷ ಉದಯಕುಮಾ‌ರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕ.ರಾ.ವಿ.ಶಿ, ಸಂಘದ ಪ್ರ.ಕಾರ್ಯದರ್ಶಿ ಡಾ. ವಸಂತಕುಮಾರ್, ಗೌರವಾಧ್ಯಕ್ಷೆ ಅಗ್ನೇಸ್ ಕುಂದರ್, ಉಪಾಧ್ಯಕ್ಷ ರವೀಂದ್ರ ಎಚ್., ಉಡುಪಿ ಜಿಲ್ಲಾ ಸಂಘದ ಕಾರ್ಯದರ್ಶಿ ಶಶಿಕಲಾ ಕೋಟ್ಯಾನ್, ಬಳ್ಳಾರಿಯ ಅನುಗ್ರಹ ವಿಶೇಷ ಶಾಲೆಯ ವಿಶೇಷ ಶಿಕ್ಷಕ ವಸಂತ ಕುಮಾರ್, ಉಡುಪಿ ಜಿಲ್ಲಾ ಪಾಲಕರ ಸಂಘದ ಅಧ್ಯಕ್ಷ ಜಯವಿಠಲ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಲ್ಫ್ ವೈದ್ಯಕೀಯ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ
ಇಂದು ‘ಬನ’ ತುಳು ಚಿತ್ರ ಕರಾವಳಿಯಲ್ಲಿ ಬಿಡುಗಡೆ