ಕಾರ್ಕಳ: ಆರೋಗ್ಯ ಉಚಿತ ತಪಾಸಣೆ, ರಕ್ತದಾನ ಶಿಬಿರ

KannadaprabhaNewsNetwork |  
Published : Dec 14, 2025, 03:45 AM IST
32 | Kannada Prabha

ಸಾರಾಂಶ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳದ ಬಿಲ್ಲವ ಸಂಘದ ನಾರಾಯಣಗುರು ಸಭಾಭವನದಲ್ಲಿ ಆರೋಗ್ಯ ಉಚಿತ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಯಿತು.

ಕಾರ್ಕಳ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳದ ಬಿಲ್ಲವ ಸಂಘದ ನಾರಾಯಣಗುರು ಸಭಾಭವನದಲ್ಲಿ ಆರೋಗ್ಯ ಉಚಿತ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಯಿತು. ಮೂಡುಬಿದಿರೆಯ ಆಳ್ವಾಸ್ ಸಮೂಹ ಸಂಸ್ಥೆ, ಪ್ರಸಾದ್ ನೇತ್ರಾಲಯ (ಮೂಡುಬಿದಿರೆ-ಉಡುಪಿ) ಹಾಗೂ ನೋವಾ ಐವಿಎಫ್ ಫರ್ಟಿಲಿಟಿ ಸೆಂಟರ್, ಮಂಗಳೂರು ಆಶ್ರಯದಲ್ಲಿ ಶಿಬಿರ ನಡೆಯಿತು.

ಆಳ್ವಾಸ್ ಸಂಸ್ಥೆಯ ತಜ್ಞ ವೈದ್ಯ ಡಾ. ಹನಾ ಶೆಟ್ಟಿ ಉದ್ಘಾಟಿಸಿ, ಆರೋಗ್ಯ ಕುರಿತು ಸಂವಾದ ನಡೆಸಿ ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಮಾತನಾಡಿ, ಇಂದಿನ ಒತ್ತಡದ ಜೀವನ ಶೈಲಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಅಗತ್ಯವಾಗಿದ್ದು, ಇಂತಹ ಆರೋಗ್ಯ ಶಿಬಿರಗಳು ಜನರಿಗೆ ಬಹು ಉಪಯುಕ್ತ ಎಂದರು.ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಮಾತನಾಡಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು, ವಿಶೇಷವಾಗಿ ಬಡವರು ಮತ್ತು ಮಹಿಳೆಯರ ಪರವಾಗಿ ತೋರಿದ ಕಾಳಜಿ ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಹೆಸರಿನಲ್ಲಿ ಆಯೋಜಿಸಲಾದ ಈ ಆರೋಗ್ಯ ಶಿಬಿರ ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಹಾಗೂ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ ಪೂಜಾರಿ ಮಾತನಾಡಿದರು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭೋದ್ ರಾವ್ ಸ್ವಾಗತಿಸಿದರು.ಶಿಬಿರದಲ್ಲಿ 200ಕ್ಕೂ ಹೆಚ್ಚು ಸಾರ್ವಜನಿಕರು ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಿಕೊಂಡು ಶಿಬಿರದ ಸದುಪಯೋಗವನ್ನು ಪಡೆದರು. ನಿಟ್ಟೆ ಗ್ರಾಮದ ಸವಿತಾ ಅವರಿಗೆ ಆರೋಗ್ಯ ಸಂಬಂಧಿತ ಸಹಾಯಧನವನ್ನು ಉದಯ ಶೆಟ್ಟಿ ಮುನಿಯಾಲು ವಿತರಿಸಿದರು. ಗ್ರಾಮೀಣ ಸಮಿತಿಯ ಮಹಿಳಾ ಅಧ್ಯಕ್ಷರನ್ನು ವೇದಿಕೆಗೆ ಆಹ್ವಾನಿಸಿ ಹೂವನ್ನಿತ್ತು ಅಭಿನಂದಿಸಲಾಯಿತು.

ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ, ಆಳ್ವಾಸ್ ಸಂಸ್ಥೆಯ ಭಾಸ್ಕರ್ ಪೂಜಾರಿ, ಡಾ. ಶವೀಝ್ ಪೈಜಿ, ಪ್ರಸಾದ್ ನೇತ್ರಾಲಯದ ಡಾ. ಕ್ರೀನಾ, ಮಾಲಿನಿ ರೈ, ಎಸ್.ಸಿ ಘಟಕದ ದೇವದಾಸ್, ರಾಜ್ಯ ಮಹಿಳಾ ಕಾರ್ಯದರ್ಶಿ ಅನಿತಾ ಡಿಸೋಜ ಮತ್ತಿತರರಿದ್ದರು.

ಪುರಸಭಾ ಸದಸ್ಯೆ ನಳಿನಿ ಆಚಾರ್ಯ ನಿರೂಪಿಸಿದರು. ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ