ಜ್ಞಾನಸುಧಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

KannadaprabhaNewsNetwork |  
Published : Jun 06, 2026, 02:30 AM IST
 ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಗುರುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. | Kannada Prabha

ಸಾರಾಂಶ

ಕಾರ್ಕಳದ ಗಣಿತನಗರದಲ್ಲಿರುವ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಗುರುವಾರ ಆಚರಿಸಲಾಯಿತು.

ಕಾರ್ಕಳ: ಕಾರ್ಕಳದ ಗಣಿತನಗರದಲ್ಲಿರುವ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಗುರುವಾರ ಆಚರಿಸಲಾಯಿತು.ಕಾರ್ಯಕ್ರಮವು ಶಾಲಾ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು. ಅಲ್ಲದೆ ಸಹಶಿಕ್ಷಕಿ ಗಾಯತ್ರಿ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೀಜದುಂಡೆ ತಯಾರಿಸುವ ಕಾರ್ಯದಲ್ಲಿ ಪಾಲ್ಗೊಂಡರು.ಈ ಸಂದರ್ಭದಲ್ಲಿ ಸಹಶಿಕ್ಷಕಿ ಅನಿಶಾ ಅವರು ಪರಿಸರ ಸಂರಕ್ಷಣೆಯ ಮಹತ್ವ, ಸ್ವಚ್ಛ ಪರಿಸರ ನಿರ್ಮಾಣದಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಹಾಗೂ ಪರಿಸರ ಕಾಪಾಡುವ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಕಾರ್ಯಕ್ರಮದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು, ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಉಪಪ್ರಾಂಶುಪಾಲೆ ವಾಣಿ ಕೆ. ಹಾಗೂ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಮೂಲಕ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿಥಿ ತಂದು ಕೊಟ್ಟಿದ್ದ ಮಾವಿನ ಹಣ್ಣು ಸೇವಿಸಿ ಇಬ್ಬರು ಬಾಲಕಿಯರು ಸಾವು!
ಮೆಡಿಕಲ್‌ ಸೀಟು ಶುಲ್ಕ ಈ ವರ್ಷ ಹೆಚ್ಚಿಸದಿರಲು ಸರ್ಕಾರ ನಿರ್ಧಾರ