ಕಾರ್ಕಳ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಸಾಧಕಿಯರಿಗೆ ಸನ್ಮಾನ

KannadaprabhaNewsNetwork | Published : Mar 11, 2025 12:50 AM

ಸಾರಾಂಶ

ಕಾರ್ಕಳ ನಗರ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖಂಡ ಉದಯ ಶೆಟ್ಟಿ ಮುನಿಯಾಲು, ಮಹಿಳೆಯರು ಕುಟುಂಬದ ಶಕ್ತಿಯಾಗಿ ಕುಟುಂಬ ಸಲಹುತ್ತಾರೆ, ಜೊತೆಗೆ ಮಹಿಳೆಯರು ಸ್ವಾವಲಂಬಿಗಳಾಗಿರುವುದರಿಂದ ದೇಶದ ಪ್ರಗತಿ ಸಾಧ್ಯವಾಗುತ್ತಿದೆ ಎಂದರು.

ಕನ್ನಡಪ್ರಭ ವಾರ್ತೆ ಕಾರ್ಕಳ

ಕಾರ್ಕಳ ನಗರ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖಂಡ ಉದಯ ಶೆಟ್ಟಿ ಮುನಿಯಾಲು, ಮಹಿಳೆಯರು ಕುಟುಂಬದ ಶಕ್ತಿಯಾಗಿ ಕುಟುಂಬ ಸಲಹುತ್ತಾರೆ, ಜೊತೆಗೆ ಮಹಿಳೆಯರು ಸ್ವಾವಲಂಬಿಗಳಾಗಿರುವುದರಿಂದ ದೇಶದ ಪ್ರಗತಿ ಸಾಧ್ಯವಾಗುತ್ತಿದೆ, ಈ ನಿಟ್ಟಿನಲ್ಲಿ ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಸರ್ಕಾರಗಳು ಮಹಿಳಾ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು, ಕಾರ್ಯಕ್ರಮಗಳನ್ನು ಹಾಕಿಕೊಂಡ ಪರಿಣಾಮ ಇಂದು ಅದರ ಪ್ರತಿಫಲವು ದೇಶದಾದ್ಯಂತ ಪ್ರತಿಫಲಿಸುತ್ತಿದೆ ಎಂದರು.

ಮುಖ್ಯ ಉಪನ್ಯಾಸಕಿಯಾಗಿದ್ದ ನ್ಯಾಯವಾದಿ ನಂದಿನಿ.ಬಿ. ಶೆಟ್ಟಿ ಮಾತನಾಡಿ, ಮಹಿಳೆಯರಿಗೆ ಯಾವುದೇ ತೊಂದರೆಯಾದರೆ ಭಯಪಡಬೇಕಾಗಿಲ್ಲ. ಎಂತಹದ್ದೇ ಪರಿಸ್ಥಿತಿ ಎದುರಾದರು ಕಾನೂನಿನ ನೆರವಿನ ಮೂಲಕ ಧೈರ್ಯವಾಗಿ ಎದುರಿಸಿ ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್ ಹಾಗೂ ಮುಖ್ಯ ಅತಿಥಿಯಾಗಿದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮಾತನಾಡಿದರು.

ಹಿರಿಯ ಕಾಂಗ್ರೆಸ್ ನಾಯಕಿ ಸುಮತಿ ಕಲ್ಲೋಟ್ಟೆ, ಸಮಾಜ ಸೇವಕಿ ಆಯೆಶಾ, ಕ್ರೀಡಾ ಕ್ಷೇತ್ರದ ಸಾಧಕಿ ದ್ರುವಿ, ಶಿಕ್ಷಣ ಕ್ಷೇತ್ರದ ಸಾಧಕಿ ಜೋಯ್ಲಿಯಾ ಡಿ.ಸೋಜ ಅವರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಮೊದಲು ನಡೆದ ಆಟೋಟ ಸ್ಪರ್ಧೆಯ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಮಾಲಿನಿ ರೈ, ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಬಾಸ್ಕರ್ ಪೂಜಾರಿ, ಕಾರ್ಕಳ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ ಇದ್ದರು. ಪುರಸಭಾ ಸದಸ್ಯೆ ನಳಿನಿ‌ ಆಚಾರ್ಯ ನಿರೂಪಿಸಿದರು. ಪ್ರಿಯಾ ರಾಜೇಂದ್ರ ಪ್ರಸಾದ್ ವಂದಿಸಿದರು.

Share this article