ಕಾರ್ಕಳದ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ 2027ರಲ್ಲಿ ವೈಭವದಿಂದ ನಡೆಯಲಿದೆ. ಲಕ್ಷಾಂತರ ಭಕ್ತರು, ಸಾರ್ವಜನಿಕರು ಭಾಗವಹಿಸುವ ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲು ವಿವಿಧ ಸಮಿತಿಗಳು ಇಂದಿನಿಂದಲೇ ಕಾರ್ಯ ಪ್ರವೃತ್ತವಾಗಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಲಹೆ ನೀಡಿದರು.
ಮಂಗಳೂರು: ಕಾರ್ಕಳದ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ 2027ರಲ್ಲಿ ವೈಭವದಿಂದ ನಡೆಯಲಿದೆ. ಲಕ್ಷಾಂತರ ಭಕ್ತರು, ಸಾರ್ವಜನಿಕರು ಭಾಗವಹಿಸುವ ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲು ವಿವಿಧ ಸಮಿತಿಗಳು ಇಂದಿನಿಂದಲೇ ಕಾರ್ಯ ಪ್ರವೃತ್ತವಾಗಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಲಹೆ ನೀಡಿದರು.ಕಾರ್ಯಕ್ರಮ ನಡೆಯುವ ಸಂದರ್ಭ ಕಾರ್ಕಳ ಪೇಟೆ ಹಾಗೂ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಆಗಬೇಕಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ವಿವರಗಳನ್ನು ಈಗಾಗಲೇ ನೀಡಲಾಗಿದೆ. ಸಿಎಂ, ಡಿಸಿಎಂ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಸ್ಥಳೀಯ ಶಾಸಕ ಸುನಿಲ್ ಕುಮಾರ್ ಅವರು ಈ ವಿಚಾರವನ್ನು ಸರ್ಕಾರದ ಗಮನಕ್ಕೆ ಈಗಾಗಲೇ ತಂದಿದ್ದಾರೆ. ಅಲ್ಲದೆ ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ದಿನಾಂಕವನ್ನು ಮುಂದಿನ ತಿಂಗಳ 19ರಂದು ಘೋಷಿಸಲಾಗುವುದು ಎಂದು ಡಾ.ಎಂ.ಎನ್. ರಾಜೇಂದ್ರಕುಮಾರ್ ತಿಳಿಸಿದರು.
ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ ಭಾನುವಾರ ನಡೆದ ಈ ಸಭೆಯಲ್ಲಿ ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಡೆಯುವ ಮಹಾಮಸ್ತಕಾಭಿಷೇಕದ ವಿವಿಧ ಸಮಿತಿಗಳನ್ನು ಹಾಗೂ ಸಮಿತಿಯ ಪದಾಧಿಕಾರಿಗಳನ್ನು ಘೋಷಿಸಲಾಯಿತು. ಮಾತ್ರವಲ್ಲ, ಧಾರ್ಮಿಕ ಕಾರ್ಯಕ್ರಮ, ಸಾರ್ವಜನಿಕರಿಗೆ ಊಟೋಪಚಾರ, ಸಾಂಸ್ಕೃತಿಕ ಕಾರ್ಯಕ್ರಮಗಳು ಪಾರ್ಕಿಂಗ್ ವ್ಯವಸ್ಥೆ ಹೀಗೆ ಹಲವು ವಿಚಾರಗಳ ಬಗ್ಗೆಯೂ ಚರ್ಚೆ ನಡೆಯಿತು.ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್ ಮಂಗಳೂರು, ಕೋಶಾಧಿಕಾರಿ ಮೋಹನ್ ಪಡಿವಾಳ್, ಸಮಿತಿಯ ಉಪಾಧ್ಯಕ್ಷರಾದ ಡಾ.ಕೆ. ಜೀವಂಧರ ಬಲ್ಲಾಳ್, ರತ್ನಾಕರ ರಾಜ ಅರಸ್, ಸೂರಜ್ ಕುಮಾರ್, ಅನಂತಾರಾಜ್ ಪೂವಣಿ, ಸಂಪತ್ ಸಾಮ್ರಾಜ್ಯ, ಮಹಾವೀರ್ ಹೆಗ್ಡೆ, ಸುಧೀರ್ ಪಡಿವಾಳ್ ಹಾಗೂ ಸಮಿತಿಯ ಸಂಚಾಲಕರು, ಸದಸ್ಯರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.