ಮಂಜುನಾಥ ಪೈ ಕಾಲೇಜಿನ ಎನ್ನೆಸ್ಸೆಸ್ ಶಿಬಿರ

KannadaprabhaNewsNetwork |  
Published : Feb 23, 2026, 02:45 AM IST
ವಿಜೇಶ ವಿಶೇಷ ಶಾಲೆಯಲ್ಲಿ ಮಂಜುನಾಥ ಪೈ ಕಾಲೇಜಿನ ಎನ್ನೆಸ್ಸ್ ಶಿಬಿರವನ್ನು ಶಾಸಕ ಸುನಿಲ್ ಕುಮಾರ್ ಉದ್ಘಾಟಿಸಿದರು | Kannada Prabha

ಸಾರಾಂಶ

ಇಲ್ಲಿನ ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಕುಕ್ಕುಂದೂರು ವಿಜೇತ ವಿಶೇಷ ಶಾಲೆಯಲ್ಲಿ ನಡೆಯಿತು. ಈ ಶಿಬಿರ

ಕಾರ್ಕಳ: ಇಲ್ಲಿನ ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಕುಕ್ಕುಂದೂರು ವಿಜೇತ ವಿಶೇಷ ಶಾಲೆಯಲ್ಲಿ ನಡೆಯಿತು. ಈ ಶಿಬಿರವನ್ನು ಕಾರ್ಕಳ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿ. ಸುನಿಲ್ ಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ರೈ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಶ್ರೀವರ್ಮ ಅಜ್ರಿ ಎಂ, ಕುಕ್ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಮೋಹನ್, ಸದಸ್ಯರಾದ ಶಾಂತಿ ಕಿಣಿ, ರವಿಕುಮಾರ್ ಕೊಡಿಯಾಲುಬೈಲು, ದಿವ್ಯಾ ನಾಯಕ್, ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಕೊಡವೂರು, ಆಗಮಿಸಿದ್ದರು.ವಿಜೇತ ವಿಶೇಷ ಶಾಲಾ ಸ್ಥಾಪಕರಾದ ಡಾ. ಕಾಂತಿ ಹರೀಶ್, ರಾ.ಸೇ.ಯೋ. ಸಂಯೋಜಕರಾದ ಪ್ರೊ. ಚಂದ್ರಕಾಂತ್ ಶೆಣೈ, ಪ್ರೊ. ರೇಣುಕಾ ಎಚ್. ಜಿ., ಪ್ರೊ. ವಿನಯ್ ಎಂ. ಎಸ್., ಶಿಬಿರದ ಕಾರ್ಯದರ್ಶಿ ಸೃಜನ್, ನವನೀತ್, ಚಿರಾಗ್, ಶರವಣ್, ಅನನ್ಯ, ಪೂರ್ಣ, ಅಕ್ಷತಾ, ಪೇಕ್ಷಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೇಕ್ಷಾ ಕಾರ್ಯಕ್ರಮ ನಿರೂಪಿಸಿ, ಪೂರ್ಣ ಸ್ವಾಗತಿಸಿ, ಅನನ್ಯ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಾಜಾಥ ವಿಶೇಷ ಪ್ರಚಾರ ಆಂದೋಲನ
ಪಿಯು ಪರೀಕ್ಷೆ ಪಾರದರ್ಶಕ ರೀತಿಯಲ್ಲಿ ನಡೆಸುವಂತೆ ಡಿಸಿ ಸೂಚನೆ