ಕಾರ್ಕಳ ಬಿಎಸ್ಸಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ವತಿಯಿಂದ ಕಾಲೇಜಿಗೆ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಕಾರ್ಕಳ
ಇಲ್ಲಿನ ಬಿಎಸ್ಸಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ವತಿಯಿಂದ ಕಾಲೇಜಿನ ಪ್ರಾಂಶುಪಾಲರ ಮೂಲಕ ಕಾಲೇಜಿನ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿ, ಶೀಘ್ರ ಪರಿಹಾರಕ್ಕೆ ಒತ್ತಾಯಿಸಲಾಯಿತು.ಇಲ್ಲಿನ ವಿದ್ಯಾರ್ಥಿಗಳು ಕಳೆದ 4 ವರ್ಷಗಳಿಂದ ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಒಂದು ಸುಸಜ್ಜಿತ ಕಟ್ಟಡವೇ ಇಲ್ಲ, ಕಾಲೇಜು ನಿರ್ವಹಣೆಗೆ ಬೇಕಾದ ಗುಮಾಸ್ತರು ಹಾಗೂ ಸ್ವಚ್ಛತಾ ಸಿಬ್ಬಂದಿ ನೇಮಕ ಆಗಿಲ್ಲ, ಸರಿಯಾದ ಕೊಠಡಿಗಳು ಮತ್ತು ಅಗತ್ಯ ಸಂಖ್ಯೆಯಲ್ಲಿ ಉಪನ್ಯಾಸಕರು ಇಲ್ಲದೆ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ. ಅಗತ್ಯ ಶೌಚಾಲಯಗಳ ವ್ಯವಸ್ಥೆಗಳು ಇಲ್ಲದೇ ವಿದ್ಯಾರ್ಥಿಗಳು ಇಡೀ ದಿನ ಸಂಕಷ್ಟು ಅನುಭವಿಸುವಂತಾಗಿದೆ ಎಂದು ಗಮನ ಸೆಳೆಯಲಾಯಿತು.
ನರ್ಸಿಂಗ್ ವ್ಯಾಸಂಗಕ್ಕೆ ಬೇಕಾದ ಅತ್ಯಗತ್ಯ ಉಪಕರಣಗಳು, ಸುಸಜ್ಜಿತ ಪ್ರಯೋಗಾಲಯ, ಗ್ರಂಥಾಲಯಗಳೂ ಇಲ್ಲ. ಒಟ್ಟಿನಲ್ಲಿ ಈ ಸಮಸ್ಯೆಗಳ ಸರಮಾಲೆಯಿಂದ ಉತ್ತಮ ಭವಿಷ್ಯ ರೂಪಿಸುವ ಉದ್ದೇಶದಿಂದ ಇಲ್ಲಿಗೆ ಸೇರಿರುವ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ ಎಂದು ಮನವಿಯಲ್ಲಿ ಹೇಳಲಾಗಿದೆ.ಈ ಎಲ್ಲಾ ಸಮಸ್ಯೆಗಳಿಗೆ ಕಾಲೇಜಿನ ಆಡಳಿತ ಮಂಡಳಿ ತಕ್ಷಣ ಸ್ಪಂದಿಸಿ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಒಂದು ಉತ್ತಮವಾದ ವಾತಾವರಣ, ವ್ಯವಸ್ಥೆ ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಗಣೇಶ್ ಪೂಜಾರಿ, ಉಡುಪಿ ಜಿಲ್ಲಾ ಸಂಚಾಲಕ ಶ್ರೇಯಸ್ ಅಂಚನ್ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.