ಕನ್ನಡಪ್ರಭ ವಾರ್ತೆ ಮಂಗಳೂರು
ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಲ್ತಾಫ್, ಸವೇರಾ ರಿಚರ್ಡ್ ಕಾರ್ಡೋಜಾ ಹಾಗೂ ಅವರ ಸಹಚರ ಆರೋಪಿಗಳು ಅಪಹರಿಸಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿ ಅಟ್ಟಹಾಸ ಮೆರೆದಿದ್ದು, ಇಂತಹ ವಿಕೃತ ಕೃತ್ಯ ಖಂಡನೀಯ. ಈ ದುರುಳರ ಕೃತ್ಯದಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದು, ಕರಾವಳಿಯಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದೆ ಎನ್ನುವುದಕ್ಕೆ ಈ ಪ್ರಕರಣವೇ ಜ್ವಲಂತ ಸಾಕ್ಷಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಹಿಂದೂ ಸಮಾಜದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂದಾಗಿದೆ. ಗೃಹ ಇಲಾಖೆ ಈ ಕೂಡಲೇ ಎಚ್ಚೆತ್ತುಕೊಂಡು ಕಾರ್ಕಳದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಗುರಿಪಡಿಸುವುದಕ್ಕೆ ಅಗತ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಕ್ಯಾ.ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.