ಮಡಿಕೇರಿ ನಗರದ ಹೊರವಲಯದ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು.
ಮಡಿಕೇರಿ: ಮಡಿಕೇರಿ ನಗರದ ಹೊರವಲಯದ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು.ಬೆಳಗ್ಗೆ ಧ್ವಜಾರೋಹಣ, ಗಣಪತಿ ಹೋಮ, ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥಸ್ನಾನ, ಕಳಸ ಪೂಜೆ ನಡೆಯಿತು. ದೇವಿಯ ರಥೋತ್ಸವ ದೇವಸ್ಥಾನದ ಆವರಣದ ಸುತ್ತಲೂ ಸಾಗಿತು. ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿಯ ನಂತರ ಭಕ್ತರಿಗೆ ಅನ್ನಸಂತರ್ಪಣೆಯಾಯಿತು. ಸಾವಿರಾರು ಭಕ್ತರು ತಾಯಿಯ ದರ್ಶನಕ್ಕೆ ಸಾಕ್ಷಿಯಾದರು.
ಸಂಜೆ ದೇವಸ್ಥಾನದ ಆವರಣದಲ್ಲಿ ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ದೀಪಾಲಂಕಾರ ನಡೆಯಿತು. ಪ್ರತಿವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು. ರಾತ್ರಿ ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯೊಂದಿಗೆ ನಡೆಯುವುದರೊಂದಿಗೆ ವಾರ್ಷಿಕೋತ್ಸವ ಸಂಪನ್ನಗೊಂಡಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.