ಈ ಬಾರಿ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಅಧ್ಯಾಪಕ, ರಂಗಕರ್ಮಿ ಎಚ್ ಎಸ್ ದ್ಯಾಮೇಶ್ ಭಾಜನರಾಗಿದ್ದಾರೆ. ಇವರು ಕಳೆದ ಮೂರು ದಶಕಗಳಿಂದ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ, ಶಿವಸಂಚಾರ, ಭಾರತ ಸಂಚಾರ, ಶಿವದೇಶ ಸಂಚಾರ, ವಚನ ಸಂಚಾರ, ರಂಗಪ್ರಯೋಗಶಾಲೆ ಸೇರಿದಂತೆ ವಿವಿಧ ರಂಗ ಸಂಸ್ಥೆಗಳೊಂದಿಗೆ ಸಂಚಾಲಕರಾಗಿ, ನಟರಾಗಿ, ನಿರ್ದೇಶಕರಾಗಿ, ಸಂಘಟಕರಾಗಿ, ಲೇಖಕರಾಗಿ, ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಈ ಸಾಲಿನ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಅಧ್ಯಾಪಕ, ರಂಗಕರ್ಮಿ ಎಚ್ ಎಸ್ ದ್ಯಾಮೇಶ್ ಭಾಜನರಾಗಿದ್ದಾರೆ. ಇವರು ಕಳೆದ ಮೂರು ದಶಕಗಳಿಂದ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ, ಶಿವಸಂಚಾರ, ಭಾರತ ಸಂಚಾರ, ಶಿವದೇಶ ಸಂಚಾರ, ವಚನ ಸಂಚಾರ, ರಂಗಪ್ರಯೋಗಶಾಲೆ ಸೇರಿದಂತೆ ವಿವಿಧ ರಂಗ ಸಂಸ್ಥೆಗಳೊಂದಿಗೆ ಸಂಚಾಲಕರಾಗಿ, ನಟರಾಗಿ, ನಿರ್ದೇಶಕರಾಗಿ, ಸಂಘಟಕರಾಗಿ, ಲೇಖಕರಾಗಿ, ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಎಲೆಮರೆಯ ಕಾಯಂತೆ ಕೆಲಸ ಮಾಡುತ್ತಿರುವ ದ್ಯಾಮೇಶ್ ಅವರನ್ನು ಗುರುತಿಸಿ ನಾಟಕ ಅಕಾಡೆಮಿ ಪ್ರಶಸ್ತಿ ನೀಡಿರುವುದು ಅತ್ಯಂತ ಸಂತೋಷ ತಂದಿದೆ ಎಂದರಲ್ಲದೆ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದ್ದಾರೆ. ಅಲ್ಲದೆ ತಾಲೂಕು ಸಾಧು ವೀರಶೈವ ಸಮಾಜವು ಸಹ ಅಭಿನಂದಿಸಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.