ಪಂಚ ಗ್ಯಾರಂಟಿಗಳಿಂದ ಮಾದರಿಯಾದ ಕರ್ನಾಟಕ: ಡಾ.ಪ್ರಭಾ

KannadaprabhaNewsNetwork |  
Published : May 20, 2026, 12:15 AM IST
19ಎಚ್.ಎಲ್.ಐ1.ಮಂಗಳವಾರ ನ್ಯಾಮತಿ ತಾಲೂಕಿನಲ್ಲಿ ಸುಮಾರು ₹30 ಕೋಟಿ ಅಧಿಕ ಅನುದಾನದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ  ಶುಂಕುಸ್ಥಾಪನೆ, ಹಾಗೂ ಉದ್ಘಾಟನೆ ಕಾರ್ಯಕ್ರಮ  ಹಮ್ಮಿಕೊಂಡಿದ್ದು, ಪಟ್ಟಣ ಸರ್ಕಾರಿ ಬಾಲಕಿಯರ ಪ.ಪೂ ಕಾಲೇಜು ಅವರಣದಲ್ಲಿಎರ್ಪಡಿಸಿದ್ದ ಸಮಾರಂಭದಲ್ಲ ಗಿಡಕ್ಕೆ ನೀರೆರೆಯುವ ಮೂಲಕ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್  ಚಾಲನೆ ನೀಡಿ ಮಾತನಾಡಿದರು, ಶಾಸಕ ಡಿ.ಜಿ.ಶಾಂತನಗೌಡ,  ಇತರರು ಇದ್ದರು.    | Kannada Prabha

ಸಾರಾಂಶ

ಕಾಂಗ್ರೆಸ್ ಪಂಚಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ಇಂದು ದೇಶ- ವಿದೇಶಗಳಲ್ಲಿ ಕರ್ನಾಟಕ ರಾಜ್ಯ ಮಾದರಿಯಾಗಿದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟಿದ್ದಾರೆ.

- ನ್ಯಾಮತಿ ತಾಲೂಕಿನಲ್ಲಿ ₹30 ಕೋಟಿಗೂ ಅಧಿಕ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ/ ನ್ಯಾಮತಿ

ಕಾಂಗ್ರೆಸ್ ಪಂಚಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ಇಂದು ದೇಶ- ವಿದೇಶಗಳಲ್ಲಿ ಕರ್ನಾಟಕ ರಾಜ್ಯ ಮಾದರಿಯಾಗಿದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

ಮಂಗಳವಾರ ನ್ಯಾಮತಿ ತಾಲೂಕಿನಲ್ಲಿ ಸುಮಾರು ₹30 ಕೋಟಿಗೂ ಅಧಿಕ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ಪಟ್ಟಣದ ಸರ್ಕಾರಿ ಬಾಲಕಿಯರ ಪ.ಪೂ. ಕಾಲೇಜು ಆವರಣದಲ್ಲಿ ನಡೆದಿದ್ದು, ಗಿಡಕ್ಕೆ ನೀರೆರೆಯುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಒಂದು ಕಡೆ ಬಿಜೆಪಿಯವರು ಕಾಂಗ್ರೆಸ್‌ನ ಪಂಚಗ್ಯಾರಂಟಿ ಯೋಜನೆಗಳ ಬಗ್ಗೆ ಬಿಟ್ಟಿ ಗ್ಯಾರಂಟಿ ಯೋಜನೆಗಳೆಂದು ಟೀಕಿಸುತ್ತಾರೆ. ಆದರೆ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೇ ಇದೇ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಕಾಪಿ ಮಾಡುತ್ತಿದ್ದಾರೆ. ಈಗಾಗಲೇ ಪಶ್ಚಿಮ ಬಂಗಾಳ, ಅಸ್ಸಾಂ ರಾಜ್ಯಗಳಲ್ಲಿ ಬಿಜೆಪಿಯವರು ಇದೇ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಬಿಜೆಪಿಯವರು ಕೂಡ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿ ಸರ್ಕಾರಗಳು ಹೆಚ್ಚಿನದಾಗಿ ಇರುವ ಉತ್ತರ ಭಾರತದಲ್ಲಿಯೇ ನೀಟ್ ಪರೀಕ್ಷೆ ಪಶ್ನೆ ಪತ್ರಿಕೆಗಳ ಸೋರಿಕೆ, ಅವ್ಯವಹಾರವಾಗಿದೆ. ಇದರಿಂದಾಗಿ ದೇಶದಲ್ಲಿ 23 ಲಕ್ಷ, ರಾಜ್ಯದಲ್ಲಿ 1.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಇದಕ್ಕೆ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ ಎಂದು ಆರೋಪಿಸಿದರು.

ಮನೆಗಳ ಸಂಖ್ಯೆಗಳ ಆಧಾರದ ಮೇಲೆ ಆಶಾ ಕಾರ್ಯಕರ್ತರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚಿಸುತ್ತೇನೆ. ಆಶಾ ಕಾರ್ಯಕರ್ತೆಯವರು ಚಿಂತಿಸುವ ಅಗತ್ಯವಿಲ್ಲ. ಆಶಾ ಕಾರ್ಯಕರ್ತೆಯರು ಸರ್ಕಾರ ಮತ್ತು ಜನರ ಮಧ್ಯೆ ಸಂಪರ್ಕ ಸೇತುವೆಯಂತೆ ಕೆಲಸ ಮಾಡುತ್ತಿದ್ದು, ಅವರಿಗೆ ತೊಂದರೆ ಆಗದಂತೆ ಗಮನಹರಿಸುವುದಾಗಿ ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಡಿ.ಜಿ. ಶಾಂತನಗೌಡ ಮಾತನಾಡಿ, 2012ರಲ್ಲಿ ಮುಖ್ಯಮಂತ್ರಿಯಾಗಿದ್ದ ಜಗದೀಶ್ ಶೆಟ್ಟರ್ ಕಾಲದಲ್ಲಿ ನ್ಯಾಮತಿ ಸೇರಿದಂತೆ 43 ಹೊಸ ತಾಲೂಕುಗಳನ್ನು ಘೋಷಣೆ ಮಾಡಿದರೂ ಯಾವುದೇ ಅಭಿವೃದ್ಧಿ ಆಗಿರಲ್ಲಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆಯೇ ಹೊಸ ತಾಲೂಕುಗಳ ಬಗ್ಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಿ, ಅವುಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ, ಅನೇಕ ಆಡಳಿತ ಕಚೇರಿಗಳನ್ನು ಆರಂಭಿಸಲಾಗುತ್ತಿದೆ. ಇದರ ಫಲವಾಗಿ ನ್ಯಾಮತಿಯಲ್ಲಿ ಇಂದು ₹8.60 ಕೋಟಿ ವೆಚ್ಚದಲ್ಲಿ ಸುಮಾರು 3 ಎಕರೆ ಪ್ರದೇಶದಲ್ಲಿ ತಾಲೂಕು ಆಡಳಿತ ಕೇಂದ್ರ ಪ್ರಜಾ ಸೌಧ ಕಟ್ಟಡಕ್ಕೆ ಶುಂಕುಸ್ಥಾಪನೆ ನೆರವೇರಿಸಲಾಗಿದೆ ಎಂದ ಅವರು, ಸಂಸದರು ತಮ್ಮ ಅನುದಾನದಲ್ಲಿ ತಾಲೂಕಿಗೆ ₹65 ಲಕ್ಷ ಅನುದಾನ ನೀಡಿದ್ದಾರೆ ಎಂದರು.

ನ್ಯಾಮತಿ- ಸುರಹೊನ್ನೆ ತರಕಾರಿ ಕೃಷಿಗೆ ಹೆಸರಾಗಿದ್ದು, ಇಲ್ಲಿಗೆ ₹32 ಕೋಟಿ ವೆಚ್ಚದಲ್ಲಿ ಶೀಥಲೀಕರಣ ಕೇಂದ್ರ, ಅಗ್ನಿಶಾಮಕ ಠಾಣೆ, ಒಳಾಂಗಣ ಕ್ರೀಡಾಂಗಣ, ಉಪನೋಂದಣಾಧಿಕಾರಿ ಕಚೇರಿ ಹೀಗೆ ಹಲವಾರು ಕಚೇರಿಗಳ ಆರಂಭಕ್ಕೆ ಹಾಗೂ ತಾಲೂಕಿನ ಅಭಿವೃದ್ಧಿಗೆ ಸುಮಾರು ₹130 ಕೋಟಿ ಅನುದಾನ ನೀಡಲಾಗಿದೆ. ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯವರ ಉತ್ತಮ ಕೆಲಸದ ಪರಿಣಾಮ ಗ್ರಾಮ ಪಂಚಾಯಿತಿ ಹಂತದಲ್ಲಿ ಕರವಸೂಲಾತಿಯಲ್ಲಿ ರಾಜ್ಯದಲ್ಲಿಯೇ ದಾವಣಗೆರೆ ಪ್ರಥಮ ಸ್ಥಾನದಲ್ಲಿದೆ. ಸಮರ್ಪಕ ಕುಡಿಯುವ ನೀರು ಪೂರೈಕೆಯಲ್ಲಿ 2ನೇ ಸ್ಥಾನದಲ್ಲಿದ್ದು, ಇದೇ ರೀತಿ ಜಿಲ್ಲಾಧಿಕಾರಿ ಕೂಡ ಉತ್ತಮ ಕೆಲಸಗಳ ಮೂಲಕ ಜನಸ್ನೇಹಿಯಾಗಿದ್ದಾರೆ ಎಂದು ಶ್ಲಾಘಿಸಿದರು.

ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಸರ್ಕಾರದ ಜನಪರ ಕೆಲಸಗಳ ಕುರತು ಮಾಹಿತಿ ನೀಡಿದರು.

ನ್ಯಾಮತಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವರಾಂ ನಾಯ್ಕ ಮಾತನಾಡಿದರು. ಮುಖಂಡರಾದ ಎಚ್.ಎ. ಉಮಾಪತಿ, ಡಾ.ಈಶ್ವರ ನಾಯ್ಕ, ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ, ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲ್ ರಾವ್, ನ್ಯಾಮತಿ ನುಚ್ಚಿನ ವಾಗೀಶ್, ಮಹಿಳಾ ಅಧ್ಯಕ್ಷರಾದ ಪುಷ್ಪ ರವೀಶ್, ವನಜಾಕ್ಷಮ್ಮ, ಹೊನ್ನಾಳಿ ಎಚ್.ಎ. ಗದ್ದಿಗೇಶ್, ಅನೇಕ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

- - -

-19ಎಚ್.ಎಲ್.ಐ1:

ಗಿಡಕ್ಕೆ ನೀರೆರೆಯುವ ಮೂಲಕ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ಡಿ.ಜಿ.ಶಾಂತನಗೌಡ ಮತ್ತಿತರ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇರಳಕ್ಕೆ ಸಾಗಿಸುತ್ತಿದ್ದ 19 ಗೋವುಗಳ ರಕ್ಷಣೆ
ಚನ್ನಗಿರಿಯಲ್ಲಿ ದಸ್ತಾವೇಜು ಬರಹಗಾರರ ಸಂಘ ಪ್ರತಿಭಟನೆ