ಕರ್ಣಾಟಕ ಬ್ಯಾಂಕ್‌: ಮೊದಲ ತ್ರೈಮಾಸಿಕದಲ್ಲಿ 292.40 ಕೋಟಿ ರು. ನಿವ್ವಳ ಲಾಭ

KannadaprabhaNewsNetwork |  
Published : Aug 13, 2025, 12:30 AM IST
ಕರ್ಣಾಟಕ ಬ್ಯಾಂಕ್‌ ಎಂಡಿ ರಾಘವೇಂದ್ರ ಎಸ್‌.ಭಟ್‌  | Kannada Prabha

ಸಾರಾಂಶ

ಕರ್ಣಾಟಕ ಬ್ಯಾಂಕ್‌ ಜೂನ್ 30, 2025ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ 292.40 ಕೋಟಿ ರು. ನಿವ್ವಳ ಲಾಭ ಗಳಿಸಿದೆ. ಕಳೆದ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ಬ್ಯಾಂಕ್‌ 400.33 ಕೋಟಿ ರು. ನಿವ್ವಳ ಲಾಭ ಗಳಿಸಿತ್ತು.

ಮಂಗಳೂರು: ಖಾಸಗಿ ರಂಗದ ಮುಂಚೂಣಿಯ ಕರ್ಣಾಟಕ ಬ್ಯಾಂಕ್‌ ಜೂನ್ 30, 2025ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ 292.40 ಕೋಟಿ ರು. ನಿವ್ವಳ ಲಾಭ ಗಳಿಸಿದೆ. ಕಳೆದ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ಬ್ಯಾಂಕ್‌ 400.33 ಕೋಟಿ ರು. ನಿವ್ವಳ ಲಾಭ ಗಳಿಸಿತ್ತು.

ಬ್ಯಾಂಕ್‌ನ ಮಂಗಳೂರಿನ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಡೆದ ನಿರ್ದೇಶಕರ ಮಂಡಳಿ ಸಭೆಯಲ್ಲಿ ಈ ಹಣಕಾಸು ಫಲಿತಾಂಶಗಳಿಗೆ ಅನುಮೋದನೆ ನೀಡಲಾಗಿದೆ.ಬ್ಯಾಂಕಿನ ಒಟ್ಟು ವ್ಯವಹಾರ ಶೇ.1.12ರಷ್ಟು ಬೆಳವಣಿಗೆ ಕಂಡಿದ್ದು, ಮೊದಲ ಅವಧಿಯಲ್ಲಿ 1,77,509.19 ಕೋಟಿ ರು. ತಲುಪಿದೆ. ಇದು ಕಳೆದ ಅವಧಿಯಲ್ಲಿ 1,75,534.89 ಕೋಟಿ ರು. ಇತ್ತು. ಒಟ್ಟು ಠೇವಣಿಗಳು 1,03,242.17 ಕೋಟಿ ರು. ಇದ್ದು, ಇದು ಕಳೆದ ವರ್ಷದ 1,00,079.88 ಕೋಟಿ ರು.ಗಿಂತ ಹೆಚ್ಚಾಗಿದೆ. ಆದರೆ ಒಟ್ಟು ಸಾಲಗಳ ಪ್ರಮಾಣದಲ್ಲಿ ಸ್ವಲ್ಪ ಇಳಿಕೆ ಕಂಡು 74,267.02 ಕೋಟಿ ರು.ಗೆ ತಲುಪಿದೆ. ಬ್ಯಾಂಕ್‌ 467.29 ಕೋಟಿ ರು. ಕಾರ್ಯಾಚರಣಾ ಲಾಭ ಮತ್ತು 755.60 ಕೋಟಿ ರು. ನಿವ್ವಳ ಬಡ್ಡಿ ಆದಾಯ ಗಳಿಸಿದೆ.ಬ್ಯಾಂಕಿನ ಎನ್‌ಪಿಎ ಅಂತ್ಯಕ್ಕೆ ಶೇ.3.46 ಗೆ ಇಳಿದಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ. 3.54 ಇತ್ತು. ನಿವ್ವಳ ಎನ್‌ಪಿಎ ಸಹ ಶೇ. 1.66 ನಿಂದ ಶೇ. 1.44 ಗೆ ಇಳಿದಿದೆ.ಈ ಫಲಿತಾಂಶಗಳ ಬಗ್ಗೆ ಮಾತನಾಡಿದ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ರಾಘವೇಂದ್ರ ಎಸ್. ಭಟ್, ಈ ಅವಧಿಯಲ್ಲಿ ಬ್ಯಾಂಕ್ ಮಧ್ಯಮ ಮಟ್ಟದ ಬೆಳವಣಿಗೆ ದಾಖಲಿಸಿದೆ. ಮೂಲಸೌಕರ್ಯ ಮತ್ತು ಪ್ರಕ್ರಿಯೆಗಳ ಸುಧಾರಣೆಗೆ ನಾವು ಮಾಡಿರುವ ಹೂಡಿಕೆಗಳು ಮುಂದಿನ ತ್ರೈಮಾಸಿಕಗಳಲ್ಲಿ ಉತ್ತಮ ಫಲಿತಾಂಶಗಳನ್ನು ನೀಡುವ ನಿರೀಕ್ಷೆಯಿದೆ. ಕಡಿಮೆ ವೆಚ್ಚದ ಠೇವಣಿಗಳನ್ನು ಹೆಚ್ಚಿಸುವುದರ ಜೊತೆಗೆ, ಕಾರ್ಪೊರೇಟ್ ಅಲ್ಲದ ಸಾಲದ ಮೇಲೆ ನಮ್ಮ ಗಮನ ಮುಂದುವರಿಯುತ್ತದೆ ಎಂದು ತಿಳಿಸಿದರು.

PREV

Recommended Stories

ಹೆತ್ತವರ ಕನಸು ನನಸಾಗಿಸುವುದೇ ಮಕ್ಕಳ ಗುರಿಯಾಗಿರಲಿ: ಸಚಿವೆ ಹೆಬ್ಬಾಳ್ಕರ್
ರಾಜ್ಯದ ಅರ್ಥ ವ್ಯವಸ್ಥೆ ಆರೋಗ್ಯವಂತವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್