ಮಕ್ಕಳಲ್ಲಿ ಗಮಕ ಆಸಕ್ತಿ ಮೂಡಿಸುವುದು ಅಗತ್ಯ: ಜಿ.ದಕ್ಷಿಣಾಮೂರ್ತಿ

KannadaprabhaNewsNetwork |  
Published : Nov 01, 2026, 04:00 AM IST
ಗಮಮಕ | Kannada Prabha

ಸಾರಾಂಶ

ಉಜಿರೆ ಎಸ್‌ಡಿಎಂ ಸೆಕೆಂಡರಿ ಶಾಲೆಯ ಕೀರ್ತಿಶೇಷ ಮಂಜಯ್ಯ ಹೆಗ್ಗಡೆ ಸಭಾಂಗಣದ ವಿಜಯ ರಾಘವ ವೇದಿಕೆಯಲ್ಲಿ ನಡೆದ ಜಿಲ್ಲಾ 12 ನೇ ಗಮಕ ಸಮ್ಮೇಳನದ 2ನೇ ದಿನದ ಸಮಾರಂಭದಲ್ಲಿ ಸಮಾರೋಪ

ಬೆಳ್ತಂಗಡಿ; ಮುಂದಿನ ಪೀಳಿಗೆಯಾದ ಮಕ್ಕಳಿಗೆ ಅವಕಾಶ ಕಲ್ಪಿಸಿಕೊಡಲು ಜಿಲ್ಲಾ ಮಟ್ಟದಲ್ಲಿ ಮಕ್ಕಳ ಗಮಕ ಸಮ್ಮೇಳನ ನಡೆಯಲಿ. ಮಕ್ಕಳಲ್ಲಿ ಕಲೆಯನ್ನು ಸಸಿಯಿಂದಲೇ ಬೆಳೆಸಿದರೆ ಗಮಕ ಕಲೆ ಇನ್ನಷ್ಟು ಬೆಳೆಯುತ್ತದೆ. ಗಮಕದಲ್ಲಿ ಇತಿಹಾಸ, ಭೂಗೋಳ, ಪರಿಸರ ಪ್ರೇಮ, ಧರ್ಮಶ್ರದ್ಧೆ ಎಲ್ಲವೂ ಇದೆ ಎಂದು ಕರ್ನಾಟಕ ಗಮಕ ಕಲಾ ಪರಿಷತ್ ರಾಜ್ಯ ಕಾರ್ಯದರ್ಶಿ ಜಿ.ದಕ್ಷಿಣಾಮೂರ್ತಿ ಹೇಳಿದರು.

ಉಜಿರೆ ಎಸ್‌ಡಿಎಂ ಸೆಕೆಂಡರಿ ಶಾಲೆಯ ಕೀರ್ತಿಶೇಷ ಮಂಜಯ್ಯ ಹೆಗ್ಗಡೆ ಸಭಾಂಗಣದ ವಿಜಯ ರಾಘವ ವೇದಿಕೆಯಲ್ಲಿ ನಡೆದ ಜಿಲ್ಲಾ 12 ನೇ ಗಮಕ ಸಮ್ಮೇಳನದ 2ನೇ ದಿನದ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್, ಮುಂದೆ ಶಾಲೆ, ಕಾಲೇಜುಗಳಲ್ಲಿ ಗಮಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಅಧ್ಯಕ್ಷತೆ ವಹಿಸಿದ ಜಿಲ್ಲಾ ಗಮಕ ಪರಿಷತ್ ಅಧ್ಯಕ್ಷ ಪ್ರೊ.ಮಧೂರು ಮೋಹನ ಕಲ್ಲೂರಾಯ ಮಾತನಾಡಿ, ಮುಂದಿನ ಜಿಲ್ಲಾ 13ನೇ ಗಮಕ ಸಮ್ಮೇಳನ ಮುಂದಿನ ವರ್ಷ ಮೂಡುಬಿದಿರೆಯಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಭುಜಬಲಿ ಧರ್ಮಸ್ಥಳ ಶಾಲೆ, ಮನೆಗಳಲ್ಲಿ ಗಮಕ ಕಲೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದರು. ಸಮ್ಮೇಳನ ಆಯೋಜಿಸಿದ ಗಮಕ ಕಲಾ ಪರಿಷತ್ ತಾಲೂಕು ಘಟಕಾಧ್ಯಕ್ಷ ರಾಮಕೃಷ್ಣ ಭಟ್ ಉಜಿರೆ ಅವರನ್ನು ಜಿಲ್ಲಾ ಸಮಿತಿ ವತಿಯಿಂದ ಗಣ್ಯರು ಸನ್ಮಾನಿಸಿ ಗೌರವಿಸಿದರು. ಸಮ್ಮೇಳನ ಸರ್ವಾಧ್ಯಕ್ಷ ಜಯರಾಮ ಕುದ್ರೆತ್ತಾಯ ಮಾತನಾಡಿದರು. ವಿ.ಪ.ಮಾಜಿ ಸದಸ್ಯ ಪ್ರತಾಪಸಿಂಹ ನಾಯಕ್ ಮಾತನಾಡಿದರು. ಎಸ್ ಡಿ ಎಂ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾ ಕಿರಣ್ ಉಪಸ್ಥಿತರಿದ್ದರು. ಸಮ್ಮೇಳನ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಭಟ್ ಉಜಿರೆ ಸಮ್ಮೇಳನದ ಯಶಸ್ಸಿಗೆ ಕಾರಣರಾದ ಸಮಿತಿ ಪದಾಧಿಕಾರಿಗಳು, ದಾನಿಗಳು, ಗಣ್ಯರು ಹಾಗು ಸ್ವಯಂಸೇವಕರನ್ನು ಕೃತಜ್ಞತೆಯಿಂದ ಸ್ಮರಿಸಿ ಅಭಿನಂದಿಸಿದರು. ಆರ್ಥಿಕ ಸಮಿತಿ ಸಂಚಾಲಕ ರವೀಂದ್ರ ಶೆಟ್ಟಿ ಸುರಭಿ ಸ್ವಾಗತಿಸಿ, ಸ್ಮರಣ ಸಂಚಿಕೆ ಸಮಿತಿಯ ಡಾ. ಶ್ರೀಧರ್ ಭಟ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ಹೋಟೆಲ್‌ ಈಜು ಕೊಳದಲ್ಲಿ 2 ವಿದೇಶಿಗರ ಸಾವು
ಪ್ರಜ್ವಲ್‌ ಜೀವಾವಧಿಗೆ ಕಾರಣ ಆದ ಮೂವರಿಗೆ ಕೇಂದ್ರ ಗೃಹ ಪ್ರಶಸ್ತಿ