ಕನ್ನಡಪ್ರಭ ವಾರ್ತೆ ಮಂಗಳೂರು
ಜ.17ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಜೆ 5 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ರೀಡಾ ಜ್ಯೋತಿ ಪ್ರಜ್ವಲಿಸಿ, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜ್ ಅವರ ಉಪಸ್ಥಿತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕ್ರೀಡಾಕೂಟದ ಸಮಾರೋಪ ಸಮಾರಂಭ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 23 ರಂದು ಸಂಜೆ 4.30 ಗಂಟೆಗೆ ನಡೆಯಲಿದೆ.ಇಂದು ನಗರದಲ್ಲಿ ಬಹುಸಂಸ್ಕೃತಿ ಉತ್ಸವ: ದಕ್ಷಿಣ ಕನ್ನಡ ಮತ್ತು ಉಡುಪಿ ಮತ್ತು ಕೊಡಗು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ, ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಯಕ್ಷಗಾನ ಅಕಾಡೆಮಿ, ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಜ.17 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ 10 ಗಂಟೆಗೆ ಬಹುಸಂಸ್ಕೃತಿ ಉತ್ಸವ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್ ಉಪಸ್ಥಿತರಿರುವರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪುಸ್ತಕ ಪ್ರದರ್ಶನ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಭವ್ಯ ಸಾಂಸ್ಕೃತಿಕ ಮೆರವಣಿಗೆಗೆ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್ ಸಂಜೆ 4 ಗಂಟೆಗೆ ನಗರದ ಟಿ.ಎಮ್.ಎ. ಪೈ ಆವರಣದಲ್ಲಿ ಚಾಲನೆ ನೀಡಲಿದ್ದಾರೆ.
ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 12 ಗಂಟೆ ತನಕ ಹಾಗೂ ಸಂಜೆ 6 ಗಂಟೆಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬರುವವರು ಹಾಗೂ ವಿಮಾನ ನಿಲ್ದಾಣಕ್ಕೆ ಹೋಗುವವರು ಈ ಅವಧಿಯನ್ನು ಹೊರತುಪಡಿಸಿ ಮುಂಚಿತವಾಗಿ ತಲುಪುಬೇಕು. ಮಧ್ಯಾಹ್ನ 11.30 ಗಂಟೆಯಿಂದ ಮಧ್ಯಾಹ್ನ 2 ಗಂಟೆ ತನಕ ಪುರಭವನ ಕಡೆಗೆ ಬರುವುದನ್ನು ತಪ್ಪಿಸಿ ಬದಲಿ ಮಾರ್ಗವನ್ನು ಉಪಯೋಗಿಸುವುದು. ಸಂಜೆ 5 ಗಂಟೆಯಿಂದ ರಾತ್ರಿ 9ರ ತನಕ ಮಂಗಳ ಸ್ಟೇಡಿಯಂ ಕಡೆಗೆ ಬರುವುದನ್ನು ತಪ್ಪಿಸಿ ಬದಲಿ ಮಾರ್ಗ ಉಪಯೋಗಿಸುವುದು.ವಾಹನ ದಟ್ಟಣೆಯ ಸ್ಥಳಗಳು:
--------------