ಕರ್ನಾಟಕ ಸರ್ಕಾರಿ ನೌಕರರ ಸಂಘದ ಸರ್ವಸದಸ್ಯರ ಸಭೆ

KannadaprabhaNewsNetwork |  
Published : May 25, 2026, 02:00 AM IST
 ನರಸಿಂಹರಾಜಪುರ ತಾಲೂಕು ಸರ್ಕಾರಿ ನೌಕರರ ಸಂಘದ ಸರ್ವಸದಸ್ಯರ ಸಭೆಯಲ್ಲಿ ಈ ತಿಂಗಳು ನಿವೃತ್ತಗೊಳ್ಳಲಿರುವ  ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಮಂಜುನಾಥ್ ದಂಪತಿಗಳನ್ನು ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ನರಸಿಂಹರಾಜಪುರರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಸರ್ವಸದಸ್ಯರ ಸಭೆ ಸಂಘದ ಅಧ್ಯಕ್ಷ ಎಚ್.ಮಂಜುನಾಥ್ ಅಧ್ಯಕ್ಷತೆಯಲ್ಲಿ ಪ್ರವಾಸಿ ಮಂದಿರದಲ್ಲಿ ನಡೆಯಿತು.

- ನಿವೃತ್ತಿ ಹೊಂದಲಿರುವ ಸಂಘದ ಅಧ್ಯಕ್ಷ ಎಚ್.ಮಂಜುನಾಥ್ ಗೆ ಬೀಳ್ಕೊಡುಗೆ

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಸರ್ವಸದಸ್ಯರ ಸಭೆ ಸಂಘದ ಅಧ್ಯಕ್ಷ ಎಚ್.ಮಂಜುನಾಥ್ ಅಧ್ಯಕ್ಷತೆಯಲ್ಲಿ ಪ್ರವಾಸಿ ಮಂದಿರದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಎಚ್.ಮಂಜುನಾಥ್ ಇದೇ ತಿಂಗಳಲ್ಲಿ ನಿವೃತ್ತಿ ಹೊಂದಲಿರುವ ಹಿನ್ನೆಲೆಯಲ್ಲಿ ಸಂಘದಿಂದ ಎಚ್. ಮಂಜುನಾಥ್ ದಂಪತಿಯನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷರನ್ನಾಗಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ( ಗ್ರಾಮೀಣ ಉದ್ಯೋಗ ) ಎನ್‌.ಎಲ್. ಮನೀಶ್ ಅವರನ್ನು ಮುಂದಿನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷ ಎನ್.ಎಲ್.ಮನೀಶ್ ಅವರನ್ನು ಸಂಘದ ಪದಾಧಿಕಾರಿಗಳು ಅಭಿನಂದಿಸಿದರು.

ಸಭೆಯಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಆರ್. ಸುಭಾಷ್ ಮಾತನಾಡಿ, ನಿವೃತ್ತರಾಗಲಿರುವ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಮಂಜುನಾಥ್ 1984 ರಿಂದ 2001 ರ ವರೆಗೆ ಅರಣ್ಯ ಇಲಾಖೆಯಲ್ಲಿ ಅರೆ ಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸಿದ್ದರು. ನಂತರ ಕಂದಾಯ ಇಲಾಖೆಗೆ ಸೇರಿ ಖಾಯಂ ಉದ್ಯೋಗ ಹಿಡಿದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಎರಡು ಬಾರಿ ಸೇವೆ ಸಲ್ಲಿಸಿದ್ದಾರೆ. ಉತ್ತಮ ನಾಯಕತ್ವ ಗುಣ, ಸಂಘಟನಾ ಚತುರರಾಗಿದ್ದಾರೆ. ಅವರು ಅಧ್ಯಕ್ಷರಾದ ಅವಧಿಯಲ್ಲಿ ಕ್ರೀಡಾ ಕೂಟ ನಡೆಸಲಾಗಿತ್ತು ಎಂದು ನೆನಪಿಸಿಕೊಂಡರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಮಂಜುನಾಥ್ ಮಾತನಾಡಿ, ನಾನು ಅಧ್ಯಕ್ಷನಾದ ಅವಧಿಯಲ್ಲಿ ಎಲ್ಲಾ ಸದಸ್ಯರು ತುಂಬಾ ಸಹಕಾರ ನೀಡಿದ್ದಾರೆ. ಸರ್ಕಾರಿ ನೌಕರರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ ಎಂದರು.

ಸಭೆಯಲ್ಲಿ ಕಾರ್ಯದರ್ಶಿ ಟಿ.ಜಿ. ಸಂದೀಪ್ ಕುಮಾರ್, ಖಜಾಂಚಿ ಬಿ.ಟಿ.ಪ್ರಕಾಶ್, ಹಿರಿಯ ಉಪಾಧ್ಯಕ್ಷರಾದ ಎ.ಜೆ.ಡೇವೀಸ್,ಪಿ.ಪಿ.ಬೇಬಿ, ಕೆ.ಎಸ್.ನಾಗೇಶ್, ಜಂಟಿ ಕಾರ್ಯದರ್ಶಿಗಳಾದ ರವಿರಾಜ್ ಹೆಗ್ಡೆ, ಎಸ್.ಪ್ರಕಾಶ್, ಕೆ.ಪಿ. ಪುನೀತ್, ಸಂಘಟನಾ ಕಾರ್ಯದರ್ಶಿ ಅರುಣಕುಮಾರ್ ಬಾರಂಗಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ನಿಷ್ಮಾಜೈನ್ , ತಮನ್ನ, ಕ್ರೀಡಾ ಕಾರ್ಯದರ್ಶಿ ಎಂ.ಕೆ.ಸುಮಂತ್, ಆಂತರಿಕ ಲೆಕ್ಕ ಪರಿಶೋದಕ ಎನ್‌.ಟಿ. ಶೇಷಾಚಲ ಹಾಗೂ ಇತರ ನಿರ್ದೇಶಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಕೀಲರು ನಿಷ್ಪಕ್ಷಪಾತವಾಗಿ ಸೇವೆ ಸಲ್ಲಿಸಿ: ಎಚ್‌. ಬಿಳ್ಳಪ್ಪ
ಪುಸ್ತಕ ಖರೀದಿಸಿ ಓದುವ ಹವ್ಯಾಸ ರೂಢಿಸಿಕೊಳ್ಳಿ: ಸಭಾಪತಿ ಬಸವರಾಜ ಹೊರಟ್ಟಿ