ಕರ್ನಾಟಕ ಬೇಡಿಕೆಗಳೆಲ್ಲ ಮೂಲೆಗೆಸೆದ ಕೇಂದ್ರ: ಡಾ.ಪ್ರಭಾ

KannadaprabhaNewsNetwork |  
Published : Feb 02, 2025, 01:00 AM IST
 1ಕೆಡಿವಿಜಿ1, 2-ದಾವಣಗೆರೆ ಕಾಂಗ್ರೆಸ್ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ. | Kannada Prabha

ಸಾರಾಂಶ

ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಮಂಡಿಸಿದ 2025- 2026ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಬೇಸರ ವ್ಯಕ್ತಪಡಿಸಿದ್ದಾರೆ.

- ಆರ್ಥಿಕ ಭದ್ರತೆ ಬಗ್ಗೆ ಸ್ಪಷ್ಟತೆ ಇಲ್ಲದ ವಿತ್ತ ಸಚಿವೆ ನಿರ್ಮಲ ಬಜೆಟ್: ಸಂಸದೆ ಟೀಕೆ

- - - - ದೇಶದ ಅತಿ ದೊಡ್ಡ ತೆರಿಗೆ ಪಾವತಿಸುವ ಕರ್ನಾಟಕಕ್ಕೆ ಮತ್ತೆ ಮಲತಾಯಿ ಧೋರಣೆ

- ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ, ಬೆಂಗಳೂರು ಅಭಿವೃದ್ಧಿ, ನೀರಾವರಿ ಯೋಜನೆಗಳಿಗೆ ಕಿವಿಗೊಟ್ಟಿಲ್ಲ

- ಬಡ, ಮಧ್ಯಮ ವರ್ಗಕ್ಕೆ ಡಯಾಲಿಸಿಸ್ ಸೆಂಟರ್ ನೀಡಿಲ್ಲ, ಆಶಾ ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸಿಲ್ಲ

- ಶಿವಮೊಗ್ಗ- ಮರಿಯಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೇರಿಸಿಲ್ಲ

- ಹರಿಹರ, ಹೊನ್ನಾಳಿ, ಶಿವಮೊಗ್ಗ ರೈಲ್ವೆ ಯೋಜನೆ ಬಗ್ಗೆ ಪ್ರಸ್ತಾಪವಿಲ್ಲ - - - ಕನ್ನಡಪ್ರಭ ವಾರ್ತೆ ದಾವಣಗೆರೆ

ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಮಂಡಿಸಿದ 2025- 2026ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಬೇಸರ ವ್ಯಕ್ತಪಡಿಸಿದ್ದಾರೆ.

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮತ್ತೆ ಮಲತಾಯಿ ಧೋರಣೆ ತೋರಿದೆ. ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಮುಂಚೂಣಿ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಹೀಗಿರುವಾಗ ಕೇಂದ್ರ ಸರ್ಕಾರ ಅನ್ಯಾಯ ಮಾಡಿದ್ದು ಸರಿಯಲ್ಲ. ಆದರೆ, ಬಿಹಾರ ರಾಜ್ಯಕ್ಕೆ ಕೊಡುಗೆಗಳ ಮಹಾಪೂರವನ್ನೇ ಹರಿಸಿದೆ. ಕೇಂದ್ರದ ಬೊಕ್ಕಸಕ್ಕೆ ಹೆಚ್ಚು ಆದಾಯ ಕೊಡುವ ಕರ್ನಾಟಕವನ್ನು ಕಡೆಗಣಿಸಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಸಂಸದೆ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ 28 ಅಂಶಗಳ ಬೇಡಿಕೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿತ್ತು. ಈ ಸಲವಾದರೂ ಸ್ಪಂದಿಸುವ ನಿರೀಕ್ಷೆ ಇತ್ತು. ಆದರೆ, ಕೇಂದ್ರದ ನಾಲ್ಕು ಎಂಜಿನ್‌ಗಳು ಹಳಿ ಬಿಟ್ಟುಹೋಗಿವೆ. ನಬಾರ್ಡ್‌ನಲ್ಲಿ ಆಗಿರುವ ಅನುದಾನದ ಕೊರತೆ ಅಥವಾ ಆರೋಗ್ಯ ಕ್ಷೇತ್ರಕ್ಕೆ ಬರಬೇಕಾದ ಅನುದಾನದ ಬಗ್ಗೆ ರಾಜ್ಯ ಸರ್ಕಾರದಿಂದ ಮನವಿ ಮಾಡಿದ್ದರೂ, ಯಾವುದೇ ಬೇಡಿಕೆಗೂ ಕೇಂದ್ರ ಸ್ಪಂದಿಸಿಲ್ಲ ಎಂದು ದೂರಿದ್ದಾರೆ.

ಕರ್ನಾಟಕ ಸರ್ಕಾರ ಪ್ರಾಮಾಣಿಕವಾಗಿ ತನ್ನ ಪಾಲಿನ ತೆರಿಗೆ ಪಾವತಿಸುತ್ತಿದೆ. ಆದರೆ, ಅದಕ್ಕೆ ಪ್ರತಿಯಾಗಿ ಕೇಂದ್ರವು ನಮಗೆ ಯಾವುದೇ ಕೊಡುಗೆ ನೀಡಿಲ್ಲ. ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ, ಬೆಂಗಳೂರು ಅಭಿವೃದ್ಧಿ, ನೀರಾವರಿ ಯೋಜನೆಗಳು ಸೇರಿದಂತೆ ಯಾವುದೇ ಬೇಡಿಕೆಗೂ ಕೇಂದ್ರ ಕಿವಿಗೊಟ್ಟಿಲ್ಲ. ರಾಷ್ಟ್ರೀಯ ವಿಪತ್ತು ನಿಧಿ ಹಾಗೂ ಡಿಆರ್‌ಎಫ್‌ ನಿಧಿಗಳಿಂದ ಕರ್ನಾಟಕಕ್ಕೆ ನಿರಂತರ ಅನ್ಯಾಯ ಎಷ್ಟರಮಟ್ಟಿಗೆ ಸರಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಡ, ಮಧ್ಯಮ ವರ್ಗಕ್ಕೆ ಡಯಾಲಿಸಿಸ್ ಸೆಂಟರ್ ನೀಡಿಲ್ಲ. ದಾವಣಗೆರೆಯಲ್ಲಿ ಎಸ್ಎಸ್‌ ಕೇರ್ ಟ್ರಸ್ಟ್ ಮೂಲಕ ಪ್ರತಿ ತಿಂಗಳು ಸುಮಾರು 500-600 ಜನರಿಗೆ ಉಚಿತವಾಗಿ ನಾವು ಡಯಾಲಿಸಿಸ್ ಸೇವೆ ಒದಗಿಸುತ್ತಿದ್ದೇವೆ. ಪಿಎಂ ಪರಿಹಾರ ನಿಧಿ ಮೊತ್ತವನ್ನೂ ಹೆಚ್ಚಿಸಿಲ್ಲ. ವೈದ್ಯಕೀಯ ಸೀಟು ಮತ್ತು ಕಾಲೇಜು ಹೆಚ್ಚಳ ಮಾಡಿದ್ದರೂ, ಅದಕ್ಕೆ ತಕ್ಕಂತೆ ವೈದ್ಯರು, ಸೌಲಭ್ಯಗಳ ಕೊರತೆ ನೀಡಿರುವ ಕೆಲಸ ಮಾಡಿಲ್ಲ ಎಂದು ಸಂಸದೆ ಟೀಕಿಸಿದ್ದಾರೆ.

ಅಂಗನವಾಡಿ- ಆಶಾ ಕಾರ್ಯಕರ್ತರು ಹಾಗೂ ಸಹಾಯಕಿಯರ ಅನುದಾನ ಹೆಚ್ಚಿಸಿಲ್ಲ‌. ಇದರಿಂದ ರಾಜ್ಯದ ಮೇಲೆಯೇ ಎಲ್ಲ ಹೊರೆ ಹೇರಲಾಗಿದೆ. ಶೇ.50ರಷ್ಟು ಅನುದಾನ ಕೇಂದ್ರ ಸರ್ಕಾರ ನೀಡಿದರೆ ಎಲ್ಲರಿಗೂ ಅನುಕೂಲವಾಗಲಿದೆ. ಉಳಿದಂತೆ ಶಿವಮೊಗ್ಗ- ಮರಿಯಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೇರಿಸಿಲ್ಲ. ಹರಿಹರ, ಹೊನ್ನಾಳಿ, ಶಿವಮೊಗ್ಗ ರೈಲ್ವೆ ಯೋಜನೆ ಬಗ್ಗೆ ಪ್ರಸ್ತಾಪವಿಲ್ಲ. ಜಿಲ್ಲೆಗೊಂದು ವಿಮಾನ ನಿಲ್ದಾಣ ಕಲ್ಪಿಸಿದ್ದರೆ ಬೆಂಗಳೂರಿನಂತಹ ಮೆಟ್ರೋಪಾಲಿಟಿನ್ ಸಿಟಿ ಮೇಲಿನ ಒತ್ತಡ ಕಡಿಮೆ ಆಗುತ್ತಿತ್ತು. ಅಲ್ಲದೇ, ಸ್ಥಳೀಯವಾಗಿ ಉದ್ಯೋಗಾವಕಾಶಗಳು ಲಭ್ಯವಾಗುತ್ತಿತ್ತು. ಈ ಬಗ್ಗೆ ಬಜೆಟ್‌ನಲ್ಲಿ ಗಮನಹರಿಸಿಲ್ಲ. ಒಟ್ಟಾರೆ ಆರ್ಥಿಕ ಭದ್ರತೆ ಬಗ್ಗೆ ಸ್ಪಷ್ಟತೆ ಇಲ್ಲದ ಬಜೆಟ್ ಇದಾಗಿದೆ ಎಂದು ಸಂಸದೆ ಡಾ.ಪ್ರಭಾ ಕೇಂದ್ರ ಬಜೆಟ್‌ಗೆ ಪ್ರತಿಕ್ರಿಯಿಸಿದ್ದಾರೆ.

- - - -1ಕೆಡಿವಿಜಿ1, 2.ಜೆಪಿಜಿ: ಡಾ.ಪ್ರಭಾ ಮಲ್ಲಿಕಾರ್ಜುನ, ಸಂಸದೆ, ಕಾಂಗ್ರೆಸ್‌ ಪಕ್ಷ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!