- ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಡಿ.ಜಿ.ಶಾಂತನಗೌಡ
ಕನ್ನಡಪ್ರಭ ವಾರ್ತೆ ಹೊನ್ನಾಳಿ
ಭಾರತದಲ್ಲಿ ಇರುವಷ್ಟು ಜಾತಿ, ಧರ್ಮ, ದೇವರುಗಳು ಇಡೀ ಪ್ರಪಂಚದ ಯಾವುದೇ ದೇಶದಲ್ಲಿಲ್ಲ. ಆದಾಗ್ಯೂ ದೇಶ ತನ್ನ ಸಂವಿಧಾನದಡಿ ಏಕತೆಯಿಂದ ಮುನ್ನಡೆಯುತ್ತಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ಭಾನುವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಮತ್ತು ಮಡಿವಾಳ ಸಮಾಜ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಮಡಿವಾಳ ಮಾಚಿದೇವ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾಚಿದೇವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮೂಲಕ ಗೌರವ ಸಮರ್ಪಿಸಿ ಅವರು ಮಾತನಾಡಿದರು.
ಹಾವೇರಿಯಲ್ಲಿ ಫೆ.13ರಂದು ಕಾರ್ಯಕ್ರಮ:
ಕಾರ್ಯಕ್ರಮದಲ್ಲಿದ್ದ ಮಡಿವಾಳ ಸಮಾಜ ಅಧ್ಯಕ್ಷ ಎಂ.ಆರ್. ಮಹಾಂತೇಶ್ ಅವರು ತಮ್ಮ ಸಮಾಜದ ಚಟುವಟಿಕೆಗಳಿಗಾಗಿ ಒಂದು ನಿವೇಶನ ಮಂಜೂರು ಮಾಡಿಕೊಡಬೇಕೆಂದು ಶಾಸಕರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಮೊದಲು ಈ ಬಗ್ಗೆ ಅರ್ಜಿಯನ್ನು ಪುರಸಭೆಗೆ ಸಲ್ಲಿಸುವಂತೆ ಸಲಹೆ ನೀಡಿದರು.
ಶಿಕ್ಷಣ ಇಲಾಖೆ ಸಂಯೋಜಕ ಅರುಣ್ ಕುಮಾರ್ ಮಾತನಾಡಿದರು. ಸಮಾಜದ ಅನೇಕ ಮುಖಂಡರು, ಕಂದಾಯ ಇಲಾಖೆ ಶಿರಸ್ತೇದಾರ ಮಂಜುನಾಥ್, ರವಿಕುಮಾರ್, ಆಶೋಕ ಇತರರು ಇದ್ದರು.
(ಕೋಟ್) ಹೊನ್ನಾಳಿ, ನ್ಯಾಮತಿ ತಾಲೂಕುಗಳಲ್ಲಿ ಒಟ್ಟು 26 ಹಾಸ್ಟೆಲ್‌ಗಳ ಪೈಕಿ 13 ಹಾಸ್ಟೆಲ್‌ಗಳು ಹಿಂದುಳಿದ ವರ್ಗಗಳಿಗೆ ಸೇರಿವೆ. ಜೊತೆಗೆ 7 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿವೆ. ಇಂತಹ ಸೌಲಭ್ಯಗಳನ್ನು ಬಳಸಿ ಶೈಕ್ಷಣಿಕವಾಗಿ ಮುಂದೆ ಬಂದರೆ ಸಮಾಜ ಅಭಿವೃದ್ಧಿ ತಾನಾಗಿಯೇ ಹೊಂದುತ್ತದೆ.
- - -
ಹೊನ್ನಾಳಿ ತಾಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿದರು.