ನಟ ಕಮಲ್‌ ಹಾಸನ್ ಬಂಧನಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

KannadaprabhaNewsNetwork |  
Published : Jun 05, 2025, 03:10 AM IST
ಪೋಟೋ: 04ಎಸ್‌ಎಂಜಿಕೆಪಿ05 ನಟ ಕಮಲ್‌ಹಾಸನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಕೂಡಲೇ ಆತನನ್ನು ಬಂಧಿಸಬೇಕು ಎಂದು ಕರ್ನಾಟಕ ರಕ್ಷಣಾವೇದಿಕೆ ವತಿಯಿಂದ ಬುಧವಾರ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.  | Kannada Prabha

ಸಾರಾಂಶ

ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ಹೇಳಿಕೆ ನೀಡಿ, ಕನ್ನಡಿಗರಿಗೆ ನೋವುಂಟುಮಾಡಿರುವ ನಟ ಕಮಲ್‌ಹಾಸನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಕೂಡಲೇ ಆತನನ್ನು ಬಂಧಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬುಧವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಶಿವಮೊಗ್ಗ : ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ಹೇಳಿಕೆ ನೀಡಿ, ಕನ್ನಡಿಗರಿಗೆ ನೋವುಂಟುಮಾಡಿರುವ ನಟ ಕಮಲ್‌ಹಾಸನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಕೂಡಲೇ ಆತನನ್ನು ಬಂಧಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬುಧವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಒಬ್ಬ ಇತಿಹಾಸಕಾರನೂ ಅಲ್ಲದ, ಭಾಷಾ ತಜ್ಞನೂ ಅಲ್ಲದ ಈ ನಟ ನಮ್ಮ ಭಾಷೆ ಬಗ್ಗೆ ಹೇಳಿಕೆ ನೀಡಿರುವುದು ಖಂಡನೀಯ. ಆದಾಗ್ಯೂ ಈ ಪಾಪಕೃತ್ಯದ ಬಗ್ಗೆ ಅರಿತು ಕ್ಷಮೆಗೆ ಆಗ್ರಹಿಸಿದರೂ ಕ್ಷಮೆಯಾಚನೆಗೆ ತನ್ನ ಉದ್ಧಟತನ ಪ್ರದರ್ಶಿಸಿ, ತನ್ನ ಹೇಳಿಕೆ ಸಮರ್ಥಿಸಿಕೊಳ್ಳುತ್ತಿರುವುದು ಪಾಪಕೃತ್ಯದ ಪುನರಾವರ್ತನೆಯಾಗಿದೆ ಎಂದು ದೂರಿದರು.

ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ದೇಶದಲ್ಲಿ ನೆಲ, ಜಲ, ಭಾಷೆ, ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ಈ ವಿಷಯ ಭಾವನಾತ್ಮಕವಾಗಿದ್ದು, ಯಾರೂ ಈ ಭಾವನೆಗಳಿಗೆ ಧಕ್ಕೆ ತರುವಂತಹ ಕೆಲಸ ಮಾಡಬಾರದು. ಆದರೆ ಈ ನಟ ತನ್ನ ಆರ್ಥಿಕ ಮತ್ತು ರಾಜಕೀಯ ಲಾಭಕ್ಕಾಗಿ ಸಂವಿಧಾನ ಆಶಯವಾದ ಭ್ರಾತೃತ್ವ ಭಾವನೆಗೆ ಧಕ್ಕೆವುಂಟುಮಾಡಿ, ಸಂವಿಧಾನ ವಿರೋಧಿ ಕೆಲಸ ಮಾಡಿದ್ದಾನೆ. ನಮ್ಮ ಸಂವಿಧಾನ ವಿರೋಧಿ ಕೆಲಸ ಮಾಡಿದ ಈತನ ವಿರುದ್ಧ ದೂರು ದಾಖಲಿಸಿಕೊಂಡು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಕಾರ್ಯದರ್ಶಿ ಮಂಜುನಾಥ್ ಎಸ್. ಕೋಟ್ಯಾನ್, ಜಿಲ್ಲಾ ಗೌರವಾಧ್ಯಕ್ಷ ನಿಂಬೆಹಣ್ಣು ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎನ್. ರಂಗನಾಥ್, ಲಿಂಗರಾಜ್, ಹರೀಶ್, ಮಂಜುಳಾ ಎನ್. ಶಂಕರ್ ಜಗನ್ನಾಥ್, ಸಂತೋಷ್, ಎಂ.ಆರ್. ವೆಂಕಟೇಶ್ ಹೆಗಡೆ ಇನ್ನಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ