ಬೇಡಿಕೆ ಈಡೇರಿಕೆಗೆ ಕರವೇ ಸ್ವಾಭಿಮಾನಿ ಸೇನೆ ಪ್ರತಿಭಟನೆ

KannadaprabhaNewsNetwork |  
Published : Sep 12, 2026, 02:30 AM IST
ಫೋಟೋ ವಿವರ​​​​​​- (11ಎಚ್‌ಪಿಟಿ4) ಹೊಸಪೇಟೆ ನಗರದಲ್ಲಿ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಡಿಸಿ ಕವಿತಾ ಎಸ್.ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಿದರು | Kannada Prabha

ಸಾರಾಂಶ

ಹೊಸಪೇಟೆ ನಗರ ಹಾಗೂ ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ರಸ್ತೆ ಹಾಗೂ ಚರಂಡಿ ಕಾಮಗಾರಿ ಕಳಪೆ

ಹೊಸಪೇಟೆ: ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ತಾರಿಹಳ್ಳಿ ಹನುಮಂತಪ್ಪಮಾತನಾಡಿ, ನಗರದ ಹೊರ ವಲಯದಲ್ಲಿ ನಿರ್ಮಿಸಲಾದ ನೂತನ 250 ಹಾಸಿಗೆಗಳ ಜಿಲ್ಲಾಸ್ಪತ್ರೆಯನ್ನು ಯಾವುದೇ ಕಾರಣಕ್ಕೂ ತರಾತುರಿಯಲ್ಲಿ ಉದ್ಘಾಟನೆ ಮಾಡಬಾರದು. ಮೊದಲು ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ವೈದ್ಯರು ಹಾಗೂ ಸಿಬ್ಬಂದಿ ನೇಮಕ ಮಾಡಬೇಕು ಮತ್ತು ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ವೈದ್ಯಕೀಯ ಯಂತ್ರೋಪಕರಣ ಆಸ್ಪತ್ರೆಗೆ ಬಂದ ನಂತರವೇ ಆಸ್ಪತ್ರೆ ಉದ್ಘಾಟನೆ ಮಾಡಬೇಕು ಎಂದು ಒತ್ತಾಯಿಸಿದರು.

ಅಲ್ಲದೆ ಹೊಸಪೇಟೆ ನಗರ ಹಾಗೂ ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ರಸ್ತೆ ಹಾಗೂ ಚರಂಡಿ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು. ಈ ಕುರಿತು ಲೋಕೋಪಯೋಗಿ ಸಚಿವರು ನಗರಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಬೇಕು ಹಾಗೂ ಕಳಪೆ ಕಾಮಗಾರಿ ಕೈಗೊಂಡ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಕಾಮಗಾರಿ ಪರಿಶೀಲನೆ ನಡೆಸದೇ ಕಮಿಷನ್ ಹಣ ಪಡೆದ ಅಧಿಕಾರಿಗಳು ಹಾಗೂ ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಂತರ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿಗೆ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸ್ವಾಭಿಮಾನಿ ಸೇನೆ ಜಿಲ್ಲಾ ಕಾರ್ಯದರ್ಶಿ ಎನ್.ಎಚ್.ಶ್ರೀನಿವಾಸ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಎಸ್.ಎಂ. ಜಾಫರ್, ತಾಲೂಕಾಧ್ಯಕ್ಷ ಈಡಿಗರ ರಮೇಶ್ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟೋಕನ್ ವ್ಯವಸ್ಥೆಯಿಂದ ಪ್ರವಾಸೋದ್ಯಮ ನೆಚ್ಚಿಕೊಂಡವರಿಗೆ ಸಮಸ್ಯೆ
ಧರ್ಮಶಾಸ್ತ್ರದಲ್ಲೂ ಶುದ್ಧ ನೀರಿಗೆ ಒತ್ತು: ರಾಘವೇಶ್ವರ ಶ್ರೀ