ಉಪ ಚುನಾವಣೆ ಅನೂರ್ಜಿತಗೊಳಿಸಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಪ್ರತಿಭಟನೆ

KannadaprabhaNewsNetwork |  
Published : Apr 19, 2026, 03:15 AM IST
ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ ಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ | Kannada Prabha

ಸಾರಾಂಶ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಣ ಹಂಚುವುದು ಹಾಗೂ ದ್ವೇಷ ಭಾಷಣ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದರಿಂದ ಚುನಾವಣೆ ಅನೂರ್ಜಿತಗೊಳಿಸಿ, ಮರು ಚುನಾವಣೆ ಮಾಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ ನಾಗರಾಜ ಕಲಕುಟಕರ ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಣ ಹಂಚುವುದು ಹಾಗೂ ದ್ವೇಷ ಭಾಷಣ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದರಿಂದ ಚುನಾವಣೆ ಅನೂರ್ಜಿತಗೊಳಿಸಿ, ಮರು ಚುನಾವಣೆ ಮಾಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ ನಾಗರಾಜ ಕಲಕುಟಕರ ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಮತದಾನದ ದಿನ ಕಾಂಗ್ರೆಸ್ ಮುಖಂಡರೊಬ್ಬರು ಪಕ್ಷದ ಅಭ್ಯರ್ಥಿ ಪರವಾಗಿ ಮತ ಪಡೆಯಲು ಮತದಾರರಿಗೆ ಹಣದ ಆಮಿಷವೊಡ್ಡಿದ್ದಾರೆ. ಬಿಜೆಪಿ ಮುಖಂಡರು ದ್ವೇಷ ಭಾಷಣ ಮಾಡಿದ್ದಾರೆ. ಈ ಎರಡೂ ಘಟನೆಗಳ ಕುರಿತು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಬಗ್ಗೆ ದೂರು ದಾಖಲಾಗಿವೆ ಎಂದು ತಿಳಿಸಿದರು.

ಚುನಾವಣೆಗೆ ಸ್ಪರ್ಧಿಸಿದಾಗಲೇ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವಂತಿಲ್ಲ. ಮತದಾರರಿಗೆ ಆಮಿಷವೊಡ್ಡುವುದು, ದ್ವೇಷ ಭಾಷಣ ಮಾಡಬಾರದು ಎಂದು ತಿಳಿಸಲಾಗುತ್ತದೆ. ಉಲ್ಲಂಘಿಸಿದರೆ, ಚುನಾವಣೆ ರದ್ದುಪಡಿಸಬಹುದು ಎಂದಿದೆ. ಆದ್ದರಿಂದ ಚುನಾವಣೆ ರದ್ದುಗೊಳಿಸಬೇಕು. ಮರು ಚುನಾವಣೆಗೆ ಮಾಡಬೇಕು ಎಂದು ಒತ್ತಾಯಿಸಿದರು.

ಮತದಾನ ಎಣಿಕೆ ಮುನ್ನವೇ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಗಳ ಬಗ್ಗೆ ತನಿಖೆ ನಡೆಸಬೇಕು. ಅವರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. ಕೆಆರ್ಎಸ್ ಪಕ್ಷವೂ ಈ ಕುರಿತು ಕಾನೂನು ಹೋರಾಟ ನಡೆಸಲು ಉದ್ದೇಶಿಸಿದೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಕ್ಕೇರಿ ಚಂದ್ರಶೇಖರ ಶ್ರೀಗೆ ಜೀವಮಾನ ಸಾಧನೆ ಪ್ರಶಸ್ತಿ
ಹಲ್ಮಿಡಿ ಶಾಸನದ ಪ್ರತಿಕೃತಿ ಮರುಸ್ಥಾಪನೆ ಮುಖಂಡರ ಸಲಹೆ