ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ದೇಶಾದ್ಯಂತ ಅಮೃತ ಭಾರತ ಸ್ಟೇಷನ್ ಯೋಜನೆಯಡಿ 554 ರೈಲ್ವೆ ನಿಲ್ದಾಣಗಳು ಹಾಗೂ 1500 ರಸ್ತೆ ಮೇಲ್ಸೇತುವೆ ಹಾಗೂ ರಸ್ತೆ ಕೇಳಸೇತುವೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಈ ಪೈಕಿ ನೈರುತ್ಯ ರೈಲ್ವೆ ವಲಯದ ವ್ಯಾಪ್ತಿಯ ಮೂರು ವಿಭಾಗ ಸೇರಿ ₹1192.86 ಕೋಟಿ ಮೌಲ್ಯದ ವಿವಿಧ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಾಗಿದೆ.
ನೈರುತ್ಯ ರೈಲ್ವೆ ವಲಯದ 34 ರೈಲ್ವೆ ನಿಲ್ದಾಣಗಳನ್ನು ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.
ಹುಬ್ಬಳ್ಳಿ ವಿಭಾಗ- 7 ನಿಲ್ದಾಣ: ಆಲಮಟ್ಟಿ, ಬಾದಾಮಿ, ಬಾಗಲಕೋಟೆ, ವಿಜಯಪುರ, ಮುನಿರಾಬಾದ್, ಸ್ಯಾನ್ವೋರ್ಡೆಮ್, ವಾಸ್ಕೋ ಡಿ ಗಾಮಾ.
ಬೆಂಗಳೂರು ವಿಭಾಗ- 15 ನಿಲ್ದಾಣ: ತುಮಕೂರು, ವೈಟ್‌ಫೀಲ್ಡ್, ಬಂಗಾರಪೇಟೆ, ಚನ್ನಪಟ್ಟಣ, ಧರ್ಮಪುರಿ, ಹೊಸೂರ, ದೊಡ್ಡಬಳ್ಳಾಪುರ, ಹಿಂದೂಪುರ, ಕೆಂಗೇರಿ, ಕೃಷ್ಣರಾಜಪುರಂ, ಕುಪ್ಪಂ, ಮಲ್ಲೇಶ್ವರಂ, ಮಾಲೂರು, ಮಂಡ್ಯ, ರಾಮನಗರ.
ಮೈಸೂರು ವಿಭಾಗ- 12 ನಿಲ್ದಾಣ:ಸಾಗರ ಜಂಬಗಾರು, ಸಕಲೇಶಪುರ, ಶಿವಮೊಗ್ಗ ಟೌನ್, ಸುಬ್ರಹ್ಮಣ್ಯ ರೋಡ್, ತಾಳಗುಪ್ಪ, ತಿಪಟೂರು, ಬಂಟ್ವಾಳ, ಚಾಮರಾಜನಗರ, ಚಿಕ್ಕಮಗಳೂರ, ಹಾಸನ, ಚಿತ್ರದುರ್ಗ, ರಾಣಿಬೆನ್ನೂರು.
ಮೇಲ್ಸೇತುವೆ- ಕೆಳಸೇತುವೆ: ನೈರುತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿ ನಿರ್ಮಿಸಲಾದ ₹112.27 ಕೋಟಿ ವೆಚ್ಚದ 15 ರೈಲ್ವೆ ಕೆಳಸೇತುವೆ, 7 ಮೇಲ್ಸೇತುವೆ ಸೇರಿದಂತೆ 22 ಸೇತುವೆಗಳನ್ನು ಲೋಕಾರ್ಪಣೆ ಮಾಡಲಾಗಿದೆ.
₹278.64 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ 7 ರೈಲ್ವೆ ಕೆಳಸೇತುವೆ, 1 ಮೇಲ್ಸೇತುವೆ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಾಯಿತು.