ಕಾವೇರಿ ವಿವಾದ: ಕಡ್ಲೆಪುರಿ ಎರಚಿ ಕರ್ನಾಟಕ ಸೇನಾಪಡೆ ಪ್ರತಿಭಟನೆ

KannadaprabhaNewsNetwork |  
Published : Oct 18, 2023, 01:00 AM IST
ಕಾವೇರಿ :  ಕರ್ನಾಟಕ ಸೇನಾಪಡೆಯಿಂದ  ಕಡ್ಲೆಪುರಿ ಎರಚಿ  ಪ್ರತಿಭಟನೆ | Kannada Prabha

ಸಾರಾಂಶ

ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಕಡ್ಲೆಪುರಿ ಎರಚಿ ಪ್ರತಿಭಟನೆ ನಡೆಸಲಾಯಿತು

ಕನ್ನಡಪ್ರಭ ವಾರ್ತೆ ಚಾಮರಾಜನಗರ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಡ್ಲೆಪುರಿ ಎರಚಿ ಪ್ರತಿಭಟನೆ ನಡೆಸಲಾಯಿತು. ನಗರದ ನೃಪತುಂಗ‌ ವೃತ್ತದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಪ್ರತಿಭಟನಾನಿರತರು ಕಡ್ಲೆಪುರಿ ಎರಚಿ ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ. ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕ್ರಮವನ್ನು ಖಂಡಿಸಿ ಇಂದಿಗೆ 33 ದಿನಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದು. ಇಂದು ಕೂಡ ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ರಾಜ್ಯ ಪಾಲಿಗೆ ಸತ್ತುಹೋಗಿದೆ ಎಂದು ಕಡ್ಲೆಪುರಿ ಎರಚಿ ಪ್ರತಿಭಟನೆ ಮಾಡಲಾಗಿದೆ ಎಂದರು ಕಾವೇರಿ ಜಲಾಶಯಗಳ ಕೊಳ್ಳದಲ್ಲಿ ನೀರು ಬರಿದಾಗುತ್ತಿದ್ದರೂ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸದೆ ಮೌನವಾಗಿದೆ. ತಮಿಳುನಾಡು ಸರ್ಕಾರ ಪದೇಪದೇ ಕಾವೇರಿ ನೀರಿನ ವಿಚಾರದಲ್ಲಿ ಕ್ಯಾತೆ ತೆಗೆದು ತನ್ನ ತೀಟೆಯನ್ನು ತೀರಿಸಿಕೊಳ್ಳುತ್ತಿದೆ. ಕರ್ನಾಟಕ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು‌ನಿಲ್ಲಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಪಣ್ಯದಹುಂಡಿ ರಾಜು, ನಿಜದ್ವನಿ ಗೋವಿಂದರಾಜು, ಗು.ಪುರುಷೋತ್ತಮ್, ರಾಜಪ್ಪ, ತಾಂಡವಮೂರ್ತಿ, ವೀರಭದ್ರ, ಸೋಮವಾರಪೇಟೆ ಮಂಜು ಭಾಗವಹಿಸಿದ್ದರು. ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದಲ್ಲಿ ಕಡ್ಲೆಪುರಿ ಎರಚಿ ಪ್ರತಿಭಟನೆ ನಡೆಸಲಾಯಿತು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ