22 ರಿಂದ ಅ.7ರವರೆಗೆ ಕರ್ನಾಟಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಬಸವರೆಡ್ಡಪ್ಪ ರೋಣದ

KannadaprabhaNewsNetwork |  
Published : Sep 15, 2025, 01:00 AM IST
13ಕೆಎಂಎನ್ ಡಿ15 | Kannada Prabha

ಸಾರಾಂಶ

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ವಭಾವಿ ಸಭೆಗೆ ತಡವಾಗಿ ಆಗಮಿಸಿದ ಸಿಬ್ಬಂದಿಗೆ ತಹಸೀಲ್ದಾರ್ ಬಸವರೆಡ್ಡಪ್ಪರೋಣದ ಅವರು ತರಾಟೆಗೆ ತೆಗೆದುಕೊಂಡರು. ಯಾವುದೇ ಸಭೆ ನಡೆದರೂ ಅಧಿಕಾರಿಗಳು, ಸಿಬ್ಬಂದಿ ನಿಗಧಿತ ಸಮಯಕ್ಕೆ ಆಗಮಿಸಬೇಕು, ಯಾವುದೇ ಕಾರಣಕ್ಕೂ ತಡವಾಗಿ ಬರಬಾರದು. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪಾಂಡವಪುರ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ತಾಲೂಕಿನಲ್ಲಿ ಸೆ.22ರಿಂದ ಅ.7ರವರೆಗೆ ಕರ್ನಾಟಕ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತಿದೆ. ಸಾರ್ವಜನಿಕರು ಸಮರ್ಪಕ ಮಾಹಿತಿ ನೀಡಬೇಕು ಎಂದು ತಹಸೀಲ್ದಾರ್ ಬಸವರೆಡ್ಡಪ್ಪ ರೋಣದ ಹೇಳಿದರು.

ಪಟ್ಟಣದ ತಮ್ಮ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ವಭಾವಿಯಾಗಿ ನಡೆದ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪಿಡಿಒಗಳ, ಗ್ರಾಮಲೆಕ್ಕಿಗರ ಸಭೆಯಲ್ಲಿ ಮಾತನಾಡಿದರು.

ತಾಲೂಕಿನಲ್ಲಿ 50,099 ಕುಟುಂಬಗಳಿವೆ. ಎಲ್ಲಾ ಕುಟುಂಬಗಳಿಗೂ ಭೇಟಿ ಕೊಟ್ಟು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುವುದು, ಮನೆಗಳ ಬಳಿ ಸಮೀಕ್ಷೆ ನಡೆಸಲು ಶಿಕ್ಷಕರು, ಸಿಬ್ಬಂದಿ ಬಂದಾಗ ಸಾರ್ವಜನಿಕರು ತಮ್ಮ ಕುಟುಂಬದ ಸಂಪೂರ್ಣ ವಿವರ ನೀಡಬೇಕು ಎಂದು ಮನವಿ ಮಾಡಿದರು.

ಸಮೀಕ್ಷೆ ನಡೆಸುವುದಕ್ಕಾಗಿಯೇ 406 ಮಂದಿ ಶಿಕ್ಷಕರು, 10 ಮಂದಿ ಮಾಸ್ಟರ್ ತರಬೇತಿ ಹೊಂದಿರುವ ಹಾಗೂ 20 ಮಂದಿ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಸೆ.19ರವರೆಗೆ ಆಶಾ ಕಾರ್‍ಯಕರ್ತೆಯರ ಮೂಲಕ ಸಮೀಕ್ಷೆ ನಮೂನೆ ಅರ್ಜಿಯನ್ನು ಆಯಾ ಕುಟುಂಬಗಳಿಗೆ ತಲುಪಿಸಲಾಗುವುದು, ಕುಟುಂಬದಲ್ಲಿರುವ ವಿದ್ಯಾವಂತರು ಓದಿ ಕುಟುಂಬದ ಎಲ್ಲಾ ಸದಸ್ಯರಿಗೆ ತಾವು ನೀಡಬೇಕಾಗಿರುವ ಮಾಹಿತಿ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಆಧಾರ ಸಂಖ್ಯೆ ಕಡ್ಡಾಯವಾಗಿ ನಮೂದಿಸಬೇಕು. ಆಧಾರ್‌ಗೆ ಮೊಬೈಲ್ ಸಂಖ್ಯೆ ಸೇರಿಸಿಕೊಳ್ಳಬೇಕು, ಅರ್ಜಿಯಲ್ಲಿ ಸುಮಾರು 60 ಪ್ರಭೇದ ಮಾಹಿತಿಯ ಪ್ರಶ್ನೆಗಳಿದ್ದು ಎಲ್ಲಾ ಮಾಹಿತಿಯನ್ನು ನೀಡಬೇಕು ಎಂದರು.

ತಡವಾಗಿ ಬಂದ ಸಿಬ್ಬಂದಿಗೆ ತರಾಟೆ:

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ವಭಾವಿ ಸಭೆಗೆ ತಡವಾಗಿ ಆಗಮಿಸಿದ ಸಿಬ್ಬಂದಿಗೆ ತಹಸೀಲ್ದಾರ್ ಬಸವರೆಡ್ಡಪ್ಪರೋಣದ ಅವರು ತರಾಟೆಗೆ ತೆಗೆದುಕೊಂಡರು. ಯಾವುದೇ ಸಭೆ ನಡೆದರೂ ಅಧಿಕಾರಿಗಳು, ಸಿಬ್ಬಂದಿ ನಿಗಧಿತ ಸಮಯಕ್ಕೆ ಆಗಮಿಸಬೇಕು, ಯಾವುದೇ ಕಾರಣಕ್ಕೂ ತಡವಾಗಿ ಬರಬಾರದು. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸತೀಶ್, ಉಪತಹಸೀಲ್ದಾರ್ ಮೋಹನ್, ಬಿಇಒ ಧರ್ಮಶೆಟ್ಟಿ, ಹಿಂದುಳಿದ ವರ್ಗಗಳ ಇಲಾಖೆಯ ತಾಲೂಕು ಕಲ್ಯಾಣ್ಯಾಧಿಕಾರಿ ಸಿ.ನಂದಕುಮಾರ್, ವಿಸ್ತರ್ಣಾಧಿಕಾರಿ ನಿಂಗೇಗೌಡ ಸೇರಿದಂತೆ ಹಲವರು ಇದ್ದರು.

PREV

Recommended Stories

ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಮಂಗಳಮುಖಿಯರು, ಮಹಿಳೆಯರಿಗೆ ಸರ್ಕಾರದಿಂದಲೇ ಉಚಿತ ಆಟೋ