ಕರ್ನಾಟಕ ಸ್ಟೇಟ್ ಟೈಲರ್ಸ್‌ ಅಸೋಸಿಯೇಶನ್ ಕ್ಷೇತ್ರ ಸಮಿತಿ ಮಹಾಸಭೆ

KannadaprabhaNewsNetwork |  
Published : Jun 22, 2025, 11:47 PM IST
ಕರ್ನಾಟಕ ಸ್ಟೇಟ್ ಟೈಲರ್ಸ್‌ ಅಸೋಸಿಯೇಶನ್ ನ ಮೂಲ್ಕಿ - ಮೂಡಬಿದಿರೆ ಕ್ಷೇತ್ರ  ಸಮ್ಮಾನ ಕಾರ್ಯಕ್ರಮ | Kannada Prabha

ಸಾರಾಂಶ

ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್‌ ಅಸೋಸಿಯೇಶನ್ ನ ಮೂಲ್ಕಿ - ಮೂಡಬಿದಿರೆ ಕ್ಷೇತ್ರ ಸಮಿತಿ ಮಹಾಸಭೆ ಹಾಗೂ ಸಮ್ಮಾನ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭವಾರ್ತೆ ಮೂಲ್ಕಿ

ಸಂಘಟನೆಗಳು ಸಂಘಟಿತರಾಗಿ ತಮ್ಮ ಹಕ್ಕು, ಸೌಕರ್ಯವನ್ನು ಪಡೆಯವಲ್ಲಿ ಸದಾ ಕಾರ್ಯ ಪ್ರವರ್ತರಾಗಬೇಕು ಎಂದು ಕಿನ್ನಿಗೋಳಿ ಯುಗಪುರುಷದ ಸಂಪಾದಕ ಕೆ. ಭುವನಾಭಿರಾಮ ಉಡುಪ ಹೇಳಿದರು.

ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ನಡೆದ ಕರ್ನಾಟಕ ಸ್ಟೇಟ್ ಟೈಲರ್ಸ್‌ ಅಸೋಸಿಯೇಶನ್ ನ ಮೂಲ್ಕಿ - ಮೂಡಬಿದಿರೆ ಕ್ಷೇತ್ರ ಸಮಿತಿ ಮಹಾಸಭೆ ಹಾಗೂ ಸಮ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೂಲ್ಕಿ ಮೂಡಬಿದಿರೆ ಕ್ಷೇತ್ರ ಸಮಿತಿಯ ಅಧ್ಯಕ್ಷ ಅಣ್ಣಪ್ಪ ಕೆ. ಎಸ್ ಅಧ್ಯಕ್ಷತೆ ವಹಿಸಿದ್ದು ಈ ಸಂದರ್ಭದಲ್ಲಿ ಹಿರಿಯ ಸಾಧಕ ಟೈಲರ್ ಸುಂದರ ಪಿ. ಪೂಜಾರಿ, ಬಾಲಕೃಷ್ಣ ಅಂಚನ್, ಚಂದ್ರಾವತಿ, ಕೇಶವ ಕಾಮತ್ ಅವರನ್ನು ಗೌರವಿಸಲಾಯಿತು. ರಾಜ್ಯ ಸಮಿತಿ ಕಾರ್ಯದರ್ಶಿ ಪ್ರಜ್ವಲ್ ಕುಮಾರ್, ರಾಜ್ಯ ಸಮಿತಿ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ದ. ಕ. ಜಿಲ್ಲಾ ಸಮಿತಿ ಅಧ್ಯಕ್ಷ ವಿದ್ಯಾಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ್ ಎಸ್. ಕೋಡಿ, ಜಿಲ್ಲಾ ಸಮಿತಿ ಕೋಶಾಧಿಕಾರಿ ಚಕ್ರೇಶ್ ಅಮೀನ್, ಶಂಕರ್ ಬಿ ಕೋಟ್ಯಾನ್, ಮೂಡಬಿದಿರೆ ವಲಯದ ಅಧ್ಯಕ್ಷ ಬಾಲಕೃಷ್ಣ ಅಂಚನ್, ಕಿನ್ನಿಗೋಳಿ ವಲಯದ ಅಧ್ಯಕ್ಷ ಶೇಖರ ಪೂಜಾರಿ, ಮೂಲ್ಕಿ ವಲಯದ ಅಧ್ಯಕ್ಷ ಪ್ರೀತಿಕ, ಹಳೆಯಂಗಡಿ ವಲಯದ ಅಧ್ಯಕ್ಷೆ ಶಖೀಲ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ದಾಮೋದರ ಶೆಟ್ಟಿಗಾರ್ ವರದಿ ವಾಚಿಸಿದರು. ಕೋಶಾಧಿಕಾರಿ ಸಮಿತ್ರಾ ಲೆಕ್ಕಪತ್ರ ಮಂಡಿಸಿದರು. ಉದಯ ಅಮೀನ್ ಮಟ್ಟು ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ