ನ.9ಕ್ಕೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

KannadaprabhaNewsNetwork |  
Published : Oct 13, 2025, 02:01 AM IST
ಪೊಟೋ: 11ಎಸ್‌ಎಂಜಿಕೆಪಿ05ಶಿವಮೊಗ್ಗದ ಪತ್ರಿಕಾಭವನದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ಮಾತನಾಡಿದರು.  | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 2025-26ನೇ ಅವಧಿಯ ಆಡಳಿತ ಮಂಡಳಿ ಆಯ್ಕೆಗೆ ಚುನಾವಣೆ ಘೋಷಣೆ ಆಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ತಿಳಿಸಿದರು.

ಶಿವಮೊಗ್ಗ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 2025-26ನೇ ಅವಧಿಯ ಆಡಳಿತ ಮಂಡಳಿ ಆಯ್ಕೆಗೆ ಚುನಾವಣೆ ಘೋಷಣೆ ಆಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9000 ಸಾವಿರಕ್ಕೂ ಹೆಚ್ಚು ಸಕ್ರಿಯ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದ್ದು, ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.ಅ.13ರಂದು ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಅಂದೇ ವೇಳಾಪಟ್ಟಿ ಹಾಗೂ ಮತದಾರರ ಕರಡು ಪ್ರತಿಯನ್ನು ಪ್ರಕಟಿಸಲಾಗುವುದು. ಅ.19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ, ಅ.30 ನಾಮಪತ್ರಗಳನ್ನು ಹಿಂಪಡೆಯಲು ಕೊನೆ ದಿನವಾಗಿರುತ್ತದೆ ಎಂದು ಮಾಹಿತಿ ನೀಡಿದರು. ನವೆಂಬರ್ 9 ರಂದು ಕರ್ನಾಟಕ ಕಾರ್ಯನಿರತಪತ್ರಕರ್ತರ ಸಂಘ ಕೇಂದ್ರ (ಕೆಯುಡಬ್ಲ್ಯೂಜೆ ) ಕಚೇರಿ ಕಂದಾಯ ಭವನ 3ನೇ ಮಹಡಿ, ಕೆಜಿ ರಸ್ತೆ, ಬೆಂಗಳೂರು ಮತ್ತು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಮತದಾನ ನಡೆಯಲಿದೆ. ಮತದಾನ ಬಳಿಕ ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ವಿವರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಸಕ ಎಂ.ಚಂದ್ರಪ್ಪರಿಂದ ಸರ್ಕಾರಿ ಗುಡ್ಡ ಕಬಳಿಕೆ
ಇಂದು ಸ್ತುತಿ ಶಂಕರ- ಸ್ತೋತ್ರ ಮಹಾ ಸಮರ್ಪಣೆ