ಕರ್ನಾಟಕ ಸುವರ್ಣ ಸಂಭ್ರಮ ಸ್ಪರ್ಧೆಗಳ ಫಲಿತಾಂಶ ಪ್ರಕಟ

KannadaprabhaNewsNetwork |  
Published : Jan 16, 2025, 12:46 AM IST
೩೨ | Kannada Prabha

ಸಾರಾಂಶ

ಸುವರ್ಣ ಸಂಭ್ರಮ-50 ಆಚರಣೆ ಪ್ರಯುಕ್ತ ಕೊಡಗು ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಸುವರ್ಣ ಸಂಭ್ರಮ-50 ಆಚರಣೆ ಪ್ರಯುಕ್ತ ಕೊಡಗು ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ.

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಮೂರ್ನಾಡು ಸರ್ಕಾರಿ ಪ್ರೌಢಶಾಲೆಯ ತಶ್ಮಿಕಾ ಕೆ.ಎಂ (ಪ್ರಥಮ), ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆಯ ಅಮೃತ ಟಿ.ಜೆ. (ದ್ವಿತೀಯ) ಮತ್ತು ಕುಶಾಲನಗರ ಸರ್ಕಾರಿ ಪ್ರೌಢಶಾಲೆಯ ಪ್ರಗತಿ ಬಡಿಗೇರ್ (ತೃತೀಯ ಸ್ಥಾನ) ಪಡೆದಿದ್ದಾರೆ.

ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಲಯನ್ಸ್ ಪಿ.ಯು ಕಾಲೇಜಿನ ಆದ್ವಿಕ (ಪ್ರ), ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಬಿ.ಎಚ್. (ದ್ವಿ), ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಸ್ಪಂದನ ಆರ್.ಎಸ್ (ತೃ) ಸ್ಥಾನ ಪಡೆದಿದ್ದಾರೆ.

ಪದವಿ ಹಾಗು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸಮೂಹ ಗೀತ ಗಾಯನ ಸ್ಪರ್ಧೆಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು (ಪ್ರ), ಕುಶಾಲನಗರ ಅನುಗ್ರಹ ಕಾಲೇಜು (ದ್ವಿ), ಕಾವೇರಿ ಕಾಲೇಜು, ಗೋಣಿಕೊಪ್ಪ (ತೃ) ಸ್ಥಾನ ಪಡೆದುಕೊಂಡಿದೆ.

ಇದೇ ವಿಭಾಗದ ಕಿರುಚಿತ್ರ ಸ್ಪರ್ಧೆಯಲ್ಲಿ ವಿರಾಜಪೇಟೆಯ ಸೆಂಟ್ ಆನ್ಸ್ ಕಾಲೇಜು (ಪ್ರ), ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ದ್ವಿ), ಕಾವೇರಿ ಕಾಲೇಜು ಗೋಣಿಕೊಪ್ಪ (ತೃ) ಸ್ಥಾನ ಪಡೆದುಕೊಂಡಿದೆ.

ವಿಜೇತರಿಗೆ ಶುಕ್ರವಾರ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿ ವಿಜೇತರು ಕಾರ್ಯಕ್ರಮಕ್ಕೆ ಆಗಮಿಸುವಂತೆ ಜಿಲ್ಲಾ ಸಂಚಾಲಕ, ಕೊಡವ ಸಾಹಿತ್ಯ ಅಕಾಡೆಮಿಯ ಮೊಳ್ಳೆಕುಟ್ಟಂಡ ದಿನು ಬೋಜಪ್ಪ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ವಿನೋದ್ ಮೂಡಗದ್ದೆ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!