ಕರ್ನಾಟಕ ಯುವ ರಕ್ಷಣಾ ವೇದಿಕೆ ಸದಾ ಸಿದ್ಧ

KannadaprabhaNewsNetwork |  
Published : Jun 16, 2026, 01:15 AM IST
೧೫ಶಿರಾ೧: ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಯುವ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಸುನಿಲ್ ನೂತನ ಪದಾಧಿಕಾರಿಗಳಿಗೆ ಗುರುತಿನ ಚೀಟಿ ವಿತರಿಸಿದರು. ಜಿಲ್ಲಾಧ್ಯಕ್ಷೆ ಅಂಬಿಕ.ಟಿ.ಎಂ. ಸೇರಿದಂತೆ ಹಲವರು ಹಾಜರಿದ್ದರು. | Kannada Prabha

ಸಾರಾಂಶ

ಕನ್ನಡ ನಾಡು ನುಡಿ ರಕ್ಷಣೆಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಸದಾ ಸಿದ್ದವಾಗಿದೆ. ನಮ್ಮ ಸಂಘಟನೆಯು ರೈತರ ಪರವಾಗಿ, ಕಾರ್ಮಿಕರ ಪರವಾಗಿ, ಮಹಿಳೆಯರ ಪರವಾಗಿ, ವಿದ್ಯಾರ್ಥಿಗಳ ಪರವಾಗಿ ಕೆಲಸ ಮಾಡುತ್ತದೆ ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಡಾ.ಸುನಿಲ್ ಎಂ.ಎಸ್ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ

ಕನ್ನಡ ನಾಡು ನುಡಿ ರಕ್ಷಣೆಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಸದಾ ಸಿದ್ದವಾಗಿದೆ. ನಮ್ಮ ಸಂಘಟನೆಯು ರೈತರ ಪರವಾಗಿ, ಕಾರ್ಮಿಕರ ಪರವಾಗಿ, ಮಹಿಳೆಯರ ಪರವಾಗಿ, ವಿದ್ಯಾರ್ಥಿಗಳ ಪರವಾಗಿ ಕೆಲಸ ಮಾಡುತ್ತದೆ ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಡಾ.ಸುನಿಲ್ ಎಂ.ಎಸ್ ಹೇಳಿದರು.

ಅವರು ನಗರದ ಪ್ರವಾಸಿ ಮಂದಿರದಲ್ಲಿ ನೂತನ ಪದಾಧಿಕಾರಿಗಳಿಗೆ ಗುರುತಿನ ಚೀಟಿ ವಿತರಿಸಿ ಮಾತನಾಡಿದರು. ಕರ್ನಾಟಕ ಯುವ ರಕ್ಷಣಾ ವೇದಿಕೆಯು ಹಲವಾರು ವರ್ಷಗಳಿಂದ ರಾಜ್ಯದ ಎಲ್ಲಾ ಭಾಗದಲ್ಲೂ ಸಂಘಟನೆ ಮಾಡಿ ಕನ್ನಡ ಭಾಷೆ, ನೆಲ, ಜಲ ರಕ್ಷಣೆಗೆ ಹೋರಾಟ ಮಾಡುತ್ತಿದೆ ಎಂದರು.

ಕರ್ನಾಟಕ ಯುವ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅಂಬಿಕ.ಟಿ.ಎಂ. ಮಾತನಾಡಿ ಕರ್ನಾಟಕ ಯುವ ರಕ್ಷಣಾ ವೇದಿಕೆಯಿಂದ ಸಮಾಜಮುಖಿ ಕೆಲಸ ಮಾಡಲು ನಾವು ಬದ್ಧರಾಗಿದ್ದೇವೆ. ನಮ್ಮ ಸಂಘಟನೆಗೆ ಮಹಿಳೆಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಯಾಗಿ ಸಂಘಟನೆ ಬಲಪಡಿಸಿ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಯುವ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಜಿಲ್ಲಾ ಗೌರವಾಧ್ಯಕ್ಷೆ ಲೀಲಾವತಿ, ತಾಲೂಕು ಅಧ್ಯಕ್ಷರಾಗಿ ಪಾಂಡುರಂಗಯ್ಯ, ಮಹಿಳಾ ಘಟಕದ ತಾಲೂಕು ಅಧ್ಯಕ್ಷರಾಗಿ ಹೇಮ, ಪ್ರಧಾನ ಕಾರ್ಯದರ್ಶಿಯಾಗಿ ನಾಗಮಣಿ, ಸಹ ಕಾರ್ಯದರ್ಶಿ ಸವಿತ, ನಗರ ಅಧ್ಯಕ್ಷೆ ಕವಿತ, ತುಮಕೂರು ಘಟಕದ ನಗರ ಅಧ್ಯಕ್ಷೆ ಲಕ್ಷ್ಮೀ, ಸಹ ಕಾರ್ಯದರ್ಶಿ ಜಯರಾಮು, ನಗರ ಅಧ್ಯಕ್ಷರಾಗಿ ಮಿಥುನ್ ಪಾಟೀಲ್ ಅವರನ್ನು ಆಯ್ಕೆ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

25 ವರ್ಷಗಳ ಚನ್ನಗಿರಿ ಅಜ್ಞಾತವಾಸ ಅಂತ್ಯ ಸನ್ನಿಹಿತ
ಹಳ್ಳ ಮುಚ್ಚಿದ್ದ ಹೋರಾಟದಲ್ಲಿ ನನ್ನ ಗೆಲುವು: ಬಿ.ಪಿ.ಹರೀಶ