ಅ.11 ರಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ತಾಲೂಕು ಘಟಕ ಉದ್ಘಾಟನೆ: ಜಾವಿದ್

KannadaprabhaNewsNetwork |  
Published : Oct 08, 2025, 01:00 AM ISTUpdated : Oct 08, 2025, 01:01 AM IST
6ಕೆಎಂಎನ್ ಡಿ29 | Kannada Prabha

ಸಾರಾಂಶ

ಕೆ.ಆರ್.ಪೇಟೆ ಪಟ್ಟಣದ ಹೋಟೆಲ್ ರಾಮದಾಸ್ ಸಭಾಂಗಣದಲ್ಲಿ ಅ.11ರಂದು ಬೆಳಗ್ಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ತಾಲೂಕು ಘಟಕದ ಉದ್ಘಾಟನೆ ಹಾಗೂ ಧ್ವಜ ಸ್ತಂಭ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಪಟ್ಟಣದ ಹೋಟೆಲ್ ರಾಮದಾಸ್ ಸಭಾಂಗಣದಲ್ಲಿ ಅ.11ರಂದು ಬೆಳಗ್ಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ತಾಲೂಕು ಘಟಕದ ಉದ್ಘಾಟನೆ ಹಾಗೂ ಧ್ವಜ ಸ್ತಂಭ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆ ಅಧ್ಯಕ್ಷ ಆಟೋ ಜಾವಿದ್ ತಿಳಿಸಿದರು.

ಪಟ್ಟಣದ ಹೊರವಲಯದ ಶ್ರೀಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿ, ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಚೌಧರಿ ಉದ್ಘಾಟಿಸುವರು. ಶಾಸಕ ಎಚ್.ಟಿ.ಮಂಜು ಅಧ್ಯಕ್ಷತೆ ವಹಿಸುವರು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ವಿಶೇಷ ಆಹ್ವಾನಿತರಾಗಿ ಆಗಮಿಸಿ ತಾಯಿ ಭುನವೇಶ್ವರಿ ಭಾವಚಿತ್ರ ಅನಾವರಣ ಮಾಡುವರು. ವೇದಿಕೆ ರಾಜ್ಯಾಧ್ಯಕ್ಷ ಎಂ.ಎಸ್.ಸುನಿಲ್ ಪ್ರಾಸ್ತಾವಿಕ ನುಡಿಗಳನ್ನಾಡಿ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವರು.

ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಪೀಠಾಧ್ಯಕ್ಷ ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಬೇಬಿ ಗ್ರಾಮದ ಶ್ರೀ ರಾಮಯೋಗೀಶ್ವರ ಮಠದ ಪೀಠಾಧ್ಯಕ್ಷ ಶ್ರೀಶಿವಬಸವಸ್ವಾಮೀಜಿ, ಗವಿಮಠದ ಶ್ರೀ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ, ಬೆಡದಹಳ್ಳಿ ಪಂಚಭೂತೇಶ್ವರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಕಾರ್ಯಕ್ರಮ ದಿವ್ಯ ಸಾನಿಧ್ದ್ಯವಹಿಸುವರು.

ಅತಿಥಿಗಳಾಗಿ ಮಾಜಿ ಸಚಿವ ನಾರಾಯಣಗೌಡ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಸಮಾಜ ಸೇವಕರಾದ ಆರ್.ಟಿ.ಓ. ಮಲ್ಲಿಕಾರ್ಜುನ್, ಮಿತ್ರ ಫೌಂಡೇಷನ್ ಅಧ್ಯಕ್ಷ ವಿಜಯ್ ರಾಮೇಗೌಡ, ಮನ್ಮುಲ್ ನಿರ್ದೇಶಕರಾದ ಡಾಲು ರವಿ, ಎಂ.ಬಿ.ಹರೀಶ್ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಈ ವೇಳೆ ಪುರಸಭೆ ಮಾಜಿ ಸದಸ್ಯ ಕೆ.ಆರ್.ನೀಲಕಂಠ, ವೇದಿಕೆ ರಾಜ್ಯ ಉಪಾಧ್ಯಕ್ಷ ಬಸವರಾಜು, ಮೈಸೂರು ಜಿಲ್ಲಾಧ್ಯಕ್ಷ ಸುಧಾಕರ್, ತಾಲೂಕು ಕಾರ್ಯದರ್ಶಿ ಮೋಹನ್, ಪ್ರಧಾನ ಕಾರ್ಯದರ್ಶಿ ನಿಸಾರ್ ಅಹಮದ್, ಮಹಿಳಾ ಘಟಕದ ಅಧ್ಯಕ್ಷೆ ರೋಷನ್ ಭಾನು, ಉಪಾಧ್ಯಕ್ಷೆ ಲೀಲಾವತಿ, ನಗರ ಘಟಕದ ಅಧ್ಯಕ್ಷ ಮಂಜುನಾಥ್, ನಗರ ಕಾರ್ಯದರ್ಶಿ ರಾಧಾ, ಪದಾಧಿಕಾರಿಗಳಾದ ಭಾಸ್ಕರ್, ಶ್ರೀಕಾಂತ್, ದೇವೀರಮ್ಮ, ಇಲಿಯಾಸ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತ್ತೂರು ಬಸಿಲಿಕಾದಲ್ಲಿ ಸಂತ ಲಾರೆನ್ಸ್ ವಾರ್ಷಿಕ ಮಹೋತ್ಸವ ಆರಂಭ
ಯುವಜನತೆಗೆ ಧಾರ್ಮಿಕ ಶಿಕ್ಷಣದ ಅಗತ್ಯವಿದೆ - ಕೇಮಾರು ಶ್ರೀ