ಡಿಸಿ ಕಚೇರಿ ಬಳಿ ಧರಣಿ
ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಬ್ಯಾಂಕ್ ಮತ್ತು ಅಂಚೆ ಕಚೇರಿಗಳಲ್ಲಿ ಹಿಂದಿ ಮತ್ತು ಇಂಗ್ಲಿಷ್‍ನಲ್ಲಿ ಮಾತನಾಡುವ ಸಿಬ್ಬಂದಿಯೇ ಜಾಸ್ತಿಯಿರುವುದರಿಂದ ಕನ್ನಡಿಗರು ವ್ಯವಹರಿಸಲು ಆಗದೆ ಪರದಾಡುವಂತಾಗಿದೆ. ಈ ಹಿಂದೆ ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿ ಕನ್ನಡಿಗರನ್ನು ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದರೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕನ್ನಡಿಗರಿಗೆ ಅವಮಾನಿಸುತ್ತ ಬರುತ್ತಿರುವುದು ನೋವಿನ ಸಂಗತಿ ಎಂದು ಪ್ರತಿಭಟನಾಕಾರರು ನೋವು ವ್ಯಕ್ತಪಡಿಸಿದರು.ರಾಷ್ಟ್ರೀಕೃತ ಬ್ಯಾಂಕ್‍ಗಳು ಮತ್ತು ಅಂಚೆ ಕಚೇರಿಗಳಲ್ಲಿ ಕೆಲಸ ಮಾಡುತ್ತಿರುವ ಹೊರ ರಾಜ್ಯಗಳ ಸಿಬ್ಬಂದಿಗಳಿಗೆ ಎರಡು ಮೂರು ಬಾರಿ ಕನ್ನಡ ಪುಸ್ತಕಗಳನ್ನು ನೀಡಿ, ಸಿಹಿ ತಿನ್ನಿಸಿ ಕನ್ನಡದಲ್ಲಿ ಮಾತನಾಡುವಂತೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹಿಂದಿ, ಇಂಗ್ಲಿಷ್‍ನಲ್ಲಿರುವ ಚಲನ್‍ಗಳನ್ನು ಕನ್ನಡದಲ್ಲಿ ಮುದ್ರಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರತರನಾದ ಹೋರಾಟ ಮಾಡಲಾಗುವುದೆಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಎಚ್ಚರಿಸಿದರು.
ಬ್ಯಾಂಕ್, ಅಂಚೆ ಕಚೇರಿಯಲ್ಲಿ ಕನ್ನಡಿಗರೇತರ ಪ್ರಾಬಲ್ಯ ವಿರೋಧಿಸಿ ಕರುನಾಡ ವಿಜಯ ಸೇನೆಯಿಂದ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಫೋಟೋ ಪೈಲ್ ನೇಮ್- 30 ಸಿಟಿಡಿ6