ಮಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ ಮಾನವ ಸಂಪತ್ತು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಕರ್ನಾಟಕದಲ್ಲೇ ಕರಾವಳಿ-ಮಲೆನಾಡು ಭಾಗದಲ್ಲಿ ಹೆಚ್ಚು ವಿದ್ಯಾವಂತರು, ಪ್ರಜ್ಞಾವಂತರು, ಪ್ರತಿಭಾವಂತ ಮಾನವ ಸಂಪನ್ಮೂಲವಿದೆ. ಈ ಮಾನವ ಸಂಪತ್ತಿಗೆ ಸ್ಥಳೀಯವಾಗಿಯೇ ಅವಕಾಶ, ಶಕ್ತಿ ತುಂಬುವ ಅಗತ್ಯವಿದೆ ಎಂದರು.
ಕರಾವಳಿ ಭಾಗದ ಜನರು ಕಳೆದ 30-40 ವರ್ಷಗಳಿಂದ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಈ ಬಗ್ಗೆ ಜನಪ್ರತಿನಿಧಿಗಳು, ಪಕ್ಷದವರು ಸೇರಿದಂತೆ ಬಿಜೆಪಿ ಶಾಸಕರು ಹಾಗೂ ಸಂಸದರೂ ತಮ್ಮ ಅಭಿಪ್ರಾಯ ಮತ್ತು ಬೇಡಿಕೆಗಳನ್ನು ತಿಳಿಸಿದ್ದಾರೆ. ನಾವು ಕೈಹಿಡಿಯದಿದ್ದರೆ ಇನ್ನಾರು ಕೈಹಿಡಿಯುತ್ತಾರೆ ಎಂಬ ನಿರೀಕ್ಷೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಅವರ ಹಲವು ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡಿದ್ದೇನೆ. ಈ ಎಲ್ಲ ವಿಚಾರಗಳ ಕುರಿತು ಶುಕ್ರವಾರ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ ಎಂದರು.ವಿಶೇಷ ಅಧಿವೇಶನ:
ಉಮರ್ ಖಾಲೀದ್ ವಿಚಾರವಾಗಿ ಬಿ.ಕೆ.ಹರಿಪ್ರಸಾದ್ ಅವರು ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಬಿ.ಕೆ.ಹರಿಪ್ರಸಾದ್ ಅವರ ಜೊತೆ ಮಾತನಾಡುತ್ತೇನೆ ಎಂದರು.
ವಿಮಾನ ನಿಲ್ದಾಣದಿಂದ ಹೊರ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪೊಲೀಸ್ ಇಲಾಖೆ ವತಿಯಿಂದ ಸಲ್ಲಿಸಲಾದ ಗೌರವವನ್ನು ಮುಖ್ಯಮಂತ್ರಿ ಅವರು ಸ್ವೀಕರಿಸಿದರು. ಅದಕ್ಕೂ ಮೊದಲು ಜಿಲ್ಲಾಡಳಿತ ವತಿಯಿಂದ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿ, ಬರಮಾಡಿಕೊಳ್ಳಲಾಯಿತು. ಹಾಗೂ ಪಕ್ಷದ ನಾಯಕರು ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.