ಜಿಲ್ಲೆಯ 38 ಕೇಂದ್ರಗಳಲ್ಲಿ ಕೆಎಎಸ್‌ ಪರೀಕ್ಷೆ ಸುಸೂತ್ರ

KannadaprabhaNewsNetwork |  
Published : Nov 16, 2026, 01:15 AM IST
15ಕೆಪಿಆರ್‌ಸಿಆರ್‌ 01:  | Kannada Prabha

ಸಾರಾಂಶ

ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 319 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಭಾನುವಾರ ನಡೆದ ಕೆಎಎಸ್ ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಕನ್ನಡಪ್ರಭ ವಾರ್ತೆ ರಾಯಚೂರು

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವತಿಯಿಂದ 319 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಭಾನುವಾರ ನಡೆದ ಕೆಎಎಸ್ ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಜಿಲ್ಲೆಯ ವಿವಿಧೆಡೆ ಒಟ್ಟು 38 ಪರೀಕ್ಷಾ ಕೇಂದ್ರಗಳಲ್ಲಿ, 11,482 ನೋಂದಾಯಿತ ಅಭ್ಯರ್ಥಿಗಳಲ್ಲಿ ಕೆಲವರು ಗೈರು ಹಾಜರಾಗಿದ್ದು ಬಿಟ್ಟರೇ ಉಳಿದವರು ಪರೀಕ್ಷೆ ಎದುರಿಸಿದರು. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ 380 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿತ್ತು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಕಟ್ಟುನಿಟ್ಟಿನ ನಿಗಾ ವಹಿಸಲಾಗಿತ್ತು, ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ ಜಾರಿ ಸೇರಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಕೇವಲ ಹಾಲ್ ಟಿಕೆಟ್ ಮತ್ತು ನೀಲಿ ಬಣ್ಣದ ಬಾಲ್ ಪೆನ್ ತೆಗೆದುಕೊಂಡು ಹೋಗಲು ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಪೊಲೀಸ್‌ ಅಧಿಕಾರಿಗಳಿಗೂ ಮೊಬೈಲ್‌ ಬಳಸದಂತೆ ಸೂಚಿಸಲಾಗಿದ್ದು, ಅವರ ಸಂವಹನಕ್ಕೆ ವಾಕಿಟಾಕಿ ನೀಡಲಾಗಿದೆ.

ಈ ಬಾರಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರು ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಎಸ್ಪಿ ಅರುಣಾಂಗ್ಷು ಗಿರಿ ತಿಳಿಸಿದರು.

ಪರೀಕ್ಷೆ ವೇಳೆ ಅಸ್ವಸ್ಥಗೊಂಡ ಅಭ್ಯರ್ಥಿ: ಸ್ಥಳೀಯ ಕೆಇಬಿ ಪ್ರೌಢ ಶಾಲೆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಮಹಿಳಾ ಅಭ್ಯರ್ಥಿಯೊಬ್ಬರು ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆಯಿತು. ಕೂಡಲೇ ಕಾರ್ಯಪ್ರವೃತ್ತರಾದ ಕೊಠಡಿ ಮೇಲ್ವಿಚಾರಕರು ತಹಸೀಲ್ದಾರ್ ಅವರಿಗೆ ಮಾಹಿತಿ ನೀಡಿದರು. ವಿಷಯ ತಿಳಿಯುತ್ತಿದ್ದಂತೆ ರಾಯಚೂರು ಡಿವೈಎಸ್ಪಿ ಶಾಂತವೀರ್ ಹಾಗೂ ತಹಸೀಲ್ದಾರ್ ಸುರೇಶ್ ವರ್ಮ ಅವರು ಪರೀಕ್ಷಾ ಕೇಂದ್ರಕ್ಕೆ ಧಾವಿಸಿ, ತಕ್ಷಣ ವೈದ್ಯರನ್ನು ಪರೀಕ್ಷಾ ಕೇಂದ್ರಕ್ಕೆ ಕರೆಸಿ ಅಸ್ವಸ್ಥಗೊಂಡ ಅಭ್ಯರ್ಥಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು. ವೈದ್ಯರ ಸಮಯೋಚಿತ ಚಿಕಿತ್ಸೆಯಿಂದ ಅಭ್ಯರ್ಥಿಯ ಆರೋಗ್ಯದಲ್ಲಿ ಚೇತರಿಕೆಗೊಂಡಿತು. ನಂತರ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಆಕೆ ಇತರೆ ಅಭ್ಯರ್ಥಿಗಳಂತೆ ಪರೀಕ್ಷೆ ಬರೆಯಲು ಮುಂದಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕೆ ಪಟ್ಟು ಶವ ಇಟ್ಟು ಪ್ರತಿಭಟನೆ
ಭಕ್ತರ ಸಮ್ಮುಖದಲ್ಲಿ ಕೆಂಚಾಂಬಾ ಚಿಕ್ಕಜಾತ್ರೆ ಸಂಪನ್ನ