ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ, ಕಥೆಗಾರ ಅಬ್ದುಲ್ ರಶೀದ್ ಅವರ ಹುಣಸೂರಿನ ಬನ್ನಿಕುಪ್ಪೆ ಗ್ರಾಮದ ತೋಟದ ನಿವಾಸದಲ್ಲಿ ಕಸಾಪ ಪ್ರಮುಖರು ಸಮ್ಮೇಳನಕ್ಕೆ ಆಹ್ವಾನಿಸಿದರು.
ಮಡಿಕೇರಿ: ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ, ಕಥೆಗಾರ ಅಬ್ದುಲ್ ರಶೀದ್ ಅವರ ಹುಣಸೂರಿನ ಬನ್ನಿಕುಪ್ಪೆ ಗ್ರಾಮದ ತೋಟದ ನಿವಾಸದಲ್ಲಿ ಕಸಾಪ ಪ್ರಮುಖರು ಸಮ್ಮೇಳನಕ್ಕೆ ಆಹ್ವಾನಿಸಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಉಪಾಧ್ಯಕ್ಷರು, ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರು ಆದ ಈ ಲೋಕೇಶ್ ಕುಮಾರ್, ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಸಮ್ಮೇಳನದ ಪ್ರಧಾನ ಕಾರ್ಯದರ್ಶಿಗಳು ಆದ ಪಿ.ಎಫ್. ಸಬಾಸ್ಟಿನ್, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರು, ಸಮ್ಮೇಳನದ ಆಹಾರ ಸಮಿತಿ ಅಧ್ಯಕ್ಷರಾದ ಹರೀಶ್ ಗುಡ್ಡೆಮನೆ ಸಾಂಪ್ರದಾಯಿಕವಾಗಿ ಸಮ್ಮೇಳನದ ಅಧ್ಯಕ್ಷರನ್ನು ಗೌರವಿಸುವ ಮೂಲಕ ಸಮ್ಮೇಳನಕ್ಕೆ ಆಹ್ವಾನ ನೀಡಲಾಯಿತು. ಆ ಸಂದರ್ಭ ಅಬ್ದುಲ್ ರಶೀದ್ ಅವರ ಪತ್ನಿ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.